ಬೆಂಗಳೂರು | ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ; ದೂರು ದಾಖಲು

Date:

  • ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡ ಶಿಕ್ಷಕ ಖಮರ್ ತಾಜ್
  • ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಾಲಕಿ ಪೋಷಕರು

ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಸಾರಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕಿಯ ಪೋಷಕರು ಖಾಸಗಿ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ದೂರು ದಾಖಲಿಸಿದ್ದಾರೆ.  

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಜೂನ್ 20 ರಂದು 16 ವರ್ಷದ ಶಾಲಾ ಬಾಲಕಿ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರು ದಾಖಲಾಗುತ್ತಿದ್ದಂತೆ ಶಿಕ್ಷಕ ಖಮರ್ ತಾಜ್ ತಲೆಮರೆಸಿಕೊಂಡಿದ್ದಾನೆ. ಹೊಸಕೋಟೆ ಪೊಲೀಸರು ಆರೋಪಿ ಶಿಕ್ಷಕರನ್ನು ವಿಚಾರಣೆಗೆ ಒಳಪಡಿಸಲು ಸಿದ್ಧತೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಷಕರು ನೀಡಿದ ದೂರಿನಲ್ಲೇನಿದೆ?

ಬಾಲಕಿ ಆತ್ಮಹತ್ಯೆಗೆ ಸಂಬಂಧಿಸಿದ ಕಾರಣಗಳನ್ನು ತಿಳಿದ ಪೋಷಕರು ಜೂನ್ 27 ರಂದು ಶಿಕ್ಷಕರ ವಿರುದ್ಧ ದೂರು ದಾಖಲಿಸಿದ್ದಾರೆ.

“ಇಬ್ಬರು ಶಿಕ್ಷಕರು 16 ವರ್ಷದ ವಿದ್ಯಾರ್ಥಿನಿಗೆ ಇತರರ ಮುಂದೆ ಹಲವಾರು ಬಾರಿ ಶಿಕ್ಷೆ ನೀಡಿದ್ದಾರೆ ಮತ್ತು ನಿಂದಿಸಿದ್ದಾರೆ. ಶಿಕ್ಷಕರೊಬ್ಬರ ಮಗನೊಂದಿಗೆ ಬಾಲಕಿಗೆ ಸಂಬಂಧಿಸಿದಂತೆ ಕೆಲವು ವದಂತಿಗಳು ಹರಡಲು ಪ್ರಾರಂಭಿಸಿದ ನಂತರ ಬಾಲಕಿಗೆ ಕಿರುಕುಳ ನೀಡಲು ಪ್ರಾರಂಭವಾದವು. ಜೂನ್ 17 ರಂದು ಇಬ್ಬರು ಶಿಕ್ಷಕರು ಶಾಲೆಯಲ್ಲಿ ಆಕೆಗೆ ಎಲ್ಲರ ಮುಂದೆ ಶಿಕ್ಷೆ ನೀಡಿದ್ದರು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಾಲಕಿ ಆತ್ಮಹತ್ಯೆ ಮಾಡಿಕೊಂಡ ದಿನ, ಶಿಕ್ಷಕರು ಶಾಲೆಯ ಖಾಲಿ ಕೊಠಡಿಯೊಂದಕ್ಕೆ ಬಾಲಕಿಯನ್ನು ಕರೆದಿದ್ದರು. ನಂತರ, ಬಾಲಕಿ ಕಣ್ಣೀರು ಹಾಕಿಕೊಂಡು ಹೊರಗೆ ಬಂದಿದ್ದಳು ಎಂದು ಬಾಲಕಿಯ ಆಪ್ತ ಸ್ನೇಹಿತರಿಂದ ಘಟನೆಯ ಬಗ್ಗೆ ತಿಳಿದ ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ.

ಏನಿದು ಘಟನೆ?

ಬೆಂಗಳೂರು ಗ್ರಾಮಾಂತರ ಹೊಸಕೋಟೆ ನಗರದ ಪಾರ್ವತಿಪುರದಲ್ಲಿರುವ ಮಿಲೇನಿಯಂ ಪಬ್ಲಿಕ್ ಶಾಲೆಯಲ್ಲಿ ಮೃತ ವಿದ್ಯಾರ್ಥಿನಿ ಸಾರಾ (16) 10ನೇ ತರಗತಿ ಓದುತ್ತಿದ್ದಳು.

ಜೂನ್ 20ರಂದು ಬಾಲಕಿ ಶಾಲೆಯಿಂದ ಬಂದ ನಂತರ ಖಿನ್ನತೆಗೆ ಒಳಗಾಗಿದ್ದಳು. ರಾತ್ರಿ ಊಟ ಮಾಡಿ ತನ್ನ ಕೋಣೆಗೆ ಹೋಗಿದ್ದಳು. ­ಬಳಿಕ ಬಾಲಕಿಯ ಪೋಷಕರು ಮಗಳನ್ನು ಕರೆದಾಗ ಎಷ್ಟು ಕೂಗಿದರು ಬರದೇ ಇದ್ದಾಗ, ಕೋಣೆಯ ಬಾಗಿಲು ಒಡೆದು ನೋಡಿದಾಗ ಬಾಲಕಿ ವೇಲ್‌ನಿಂದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋದರು ಆದರೆ, ಬಾಲಕಿ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಶಿಕ್ಷಕರ ಕಿರುಕುಳಕ್ಕೆ ಬೇಸತ್ತ ಬಾಲಕಿ

ಸಾರಾ ಮಿಲೇನಿಯಂ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದಳು. ಇದೇ ಶಾಲೆಯ ನಳಿನಾ ಮತ್ತು ಖಮರ್ ತಾಜ್ ಎಂಬ ಇಬ್ಬರು ಶಿಕ್ಷಕರು ಬಾಲಕಿಗೆ ಚಿತ್ರಹಿಂಸೆ ಮತ್ತು ಕಿರುಕುಳ ನೀಡುತ್ತಿದ್ದರೆಂದು ತಿಳಿದುಬಂದಿದೆ.

ಇಬ್ಬರು ಶಿಕ್ಷಕರು ಬಾಲಕಿಯನ್ನು ಎಲ್ಲ ವಿದ್ಯಾರ್ಥಿಗಳ ಮುಂದೆ ಕ್ಲುಲ್ಲಕ ಕಾರಣಕ್ಕೆ ನಿಂದಿಸುತ್ತಿದ್ದರು. ಅಲ್ಲದೇ, ಆತ್ಮಹತ್ಯೆಗೆ ಕೆಲವು ದಿನಗಳ ಹಿಂದೆ ಎಲ್ಲ ವಿದ್ಯಾರ್ಥಿಗಳ ಮುಂದೆ ಸಾರಾಗೆ 100 ಸಲ ಬಸಕಿ ಹೊಡೆಸಿದ್ದರು. ನಳಿನಾ ಎಂಬ ಶಿಕ್ಷಕಿ ಸಾರಾಗೆ ‘ನಿನ್ನ ಮುಖ ನಾನು ನೋಡುವುದಿಲ್ಲ. ಕೊನೆಯ ಬೆಂಚ್‌ಗೆ ಹೋಗಿ ಕುಳಿತುಕೋ’ ಎಂದು ಹೇಳುತ್ತಿದ್ದರು ಎನ್ನಲಾಗಿದೆ.

ಆತ್ಮಹತ್ಯೆ ದಿನ ಸಾರಾಳನ್ನು ಇಬ್ಬರು ಶಿಕ್ಷಕರು ಒಂದು ಕೋಣೆಗೆ ಕರೆದಿದ್ದರು. ಆಕೆ ವಾಪಾಸ್ ಬರುವಾಗ ಕಣ್ಣೀರು ಹಾಕುತ್ತಾ ಬಂದಿದ್ದಳು.

ಈ ಸುದ್ದಿ ಓದಿದ್ದೀರಾ? ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ; ಬಿಜೆಪಿ ನಾಯಕರ ಕಾಲೆಳೆದ ಕಾಂಗ್ರೆಸ್

ಶಿಕ್ಷಕನ ಮಗನ ಪ್ರೀತಿ ಕಾಟ

ಅಲ್ಲದೆ, ಶಿಕ್ಷಕ ಖಮರ್ ತಾಜ್ ಮಗ ಹಮೀನ್ ಎಂಬುವವನು ಸಾರಾಗೆ ನಿತ್ಯ ತನ್ನನ್ನು ಪ್ರೀತಿ ಮಾಡು ಎಂದು ಹಿಂಸಿಸುತ್ತಿದ್ದನು. ಸಾರಾಳನ್ನು ಪ್ರೀತಿಸುತ್ತಿದ್ದೇನೆ. ಆಕೆಯನ್ನು ಮದುವೆಯಾಗಲಿದ್ದೇವೆ ಎಂದು ತನ್ನ ಸ್ನೇಹಿತರಿಗೆಲ್ಲ ಹೇಳಿದ್ದನು. ತನ್ನನ್ನು ಪ್ರೀತಿ ಮಾಡದಿದ್ದರೆ ತಕ್ಕ ಪಾಠ ಕಲಿಸುವೆ ಎಂದು ಬೆದರಿಕೆ ಹಾಕಿದ್ದನು ಎಂದು ತಿಳಿದುಬಂದಿದೆ.

ಸಾರಾ ತನ್ನ ಸ್ನೇಹಿತರ ಬಳಿ ಬದುಕಲು ಕಷ್ಟವಾಗುತ್ತಿದೆ. ನಾನು ಸಾಯಬೇಕು ಎಂದು ಹೇಳಿಕೊಂಡಿದ್ದಳು ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...