ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ; ಏಜೆನ್ಸಿ ಸಿಬ್ಬಂದಿಯಿಂದ 1.40 ಕೋಟಿ ಲೂಟಿ

Date:

ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ದರೋಡೆ ಪ್ರಕರಣ ಮಾಸುವ ಮುನ್ನ ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಸಿಬ್ಬಂದಿಯೇ ಪರಾರಿಯಾದ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಹಿಟಾಚಿ ಪೇಮೆಂಟ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕೆಲ ಸಿಬ್ಬಂದಿ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೋರಮಂಗಲದಲ್ಲಿರುವ ಆ್ಯಕ್ಸಿಸ್ ಬ್ಯಾಂಕ್‌ಗೆ ಸೇರಿದ ಒಂದು ಕೋಟಿಗೂ ಅಧಿಕ ಹಣವನ್ನು ವಿವಿಧ ಎಟಿಎಂಗಳಿಗೆ ಡೆಪಾಸಿಟ್ ಮಾಡುವಂತೆ ಕಂಪನಿ ಅಧಿಕಾರಿ ಮಿಥುನ್ ಎಂಬವರು ಜನವರಿ 19ರಂದು ಸೂಚನೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗುಣಮಟ್ಟ ಕುರಿತು ಮಾತಾಡಲು ಮೋದೀಜಿಗೆ ನೈತಿಕ ಹಕ್ಕು ಇಲ್ಲವೇ ಇಲ್ಲ!

ಎಟಿಎಂಗೆ ಹಣ ಹಾಕಲೆಂದು ಕಂಪನಿಯ ಎರಡು ಪ್ರತ್ಯೇಕ ತಂಡಗಳಿಗೆ ನಗದು ಹಂಚಿಕೆ ಮಾಡಲಾಗಿತ್ತು. ಪ್ರವೀಣ್, ಧನಶೇಖರ್, ರಾಮಕ್ಕ, ಹರೀಶ್ ಕುಮಾರ್, ಪ್ರವೀಣ್ ಕುಮಾರ್ ಹಾಗೂ ವರುಣ್ ಎಂಬ ಸಿಬ್ಬಂದಿಗಳಿಗೆ ಎಟಿಎಂಗಳಿಗೆ ಹಣ ಹಾಕುವ ಜವಾಬ್ದಾರಿ ನೀಡಲಾಗಿತ್ತು. ಆದರೆ, ಆರೋಪಿಗಳು ಎಟಿಎಂಗಳಿಗೆ ಹಣ ಹಾಕದೇ ನಗದಿನೊಂದಿಗೆ ಪರಾರಿಯಾಗಿದ್ದಾರೆ.

ಒಂದು ತಂಡವು ಸುಮಾರು 57 ಲಕ್ಷ ರೂ. ನಗದು ತೆಗೆದುಕೊಂಡು ಪರಾರಿಯಾಗಿದ್ದರೆ, ಮತ್ತೊಂದು ತಂಡವು ಸುಮಾರು 80 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದೆ ಎನ್ನಲಾಗಿದೆ. ಎಟಿಎಂಗಳಲ್ಲಿ ಹಣ ಜಮಾ ಆಗದಿರುವುದು ಗೊತ್ತಾದ ಬಳಿಕ ಕಂಪನಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ವಂಚನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಹಿಟಾಚಿ ಪೇಮೆಂಟ್ ಸರ್ವಿಸ್ ಕಂಪನಿ ಅಧಿಕಾರಿ ಮಿಥುನ್ ಅವರು ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಕರೆ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...