ಬೆಂಗಳೂರು ಬಂದ್‌ | ಬಿಎಂಟಿಸಿಯಲ್ಲಿ ಪ್ರಯಾಣಿಸಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

Date:

  • ಟ್ವಿಟ್ಟರ್‌ನಲ್ಲಿ ಫೋಟೋ ಹಂಚಿಕೊಂಡ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್
  • ನನ್ನ ಸರ್ಕಲ್ ಗೆ ಒಂದು ಟಿಕೆಟ್ ಕೊಡಿ ಎಂದು ಕೇಳಿದ್ರಾ? ನೆಟ್ಟಿಗರಿಂದ ಹಾಸ್ಯ ಚಟಾಕಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಸೆ.11) ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರ ನಡೆಸುತ್ತಿದ್ದು, ನಗರದೆಲ್ಲೆಡೆ ಕ್ಯಾಬ್‌ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ಬಂದ್‌ ಆಗಿದೆ.

ದಿನನಿತ್ಯ ರಸ್ತೆಗೆ ಇಳಿಯುತ್ತಿದ್ದಂತಹ ಆಟೋ ರಿಕ್ಷಾಗಳ ಸಂಖ್ಯೆಯೂ ಕಡಿಮೆಯಾಗಿದೆ. ಮುಷ್ಕರದಿಂದಾಗಿ ಓಲಾ, ಉಬರ್ ಸೇರಿದಂತೆ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಈ ಖಾಸಗಿ ವಾಹನಗಳ ಸಂಚಾರ ಬಂದ್‌ ಆದ ಕಾರಣ ಜನರು ತಮ್ಮ ದಿನನಿತ್ಯದ ಕೆಲಸಗಳಿಗೆ ತೆರಳಲು ಕಷ್ಟಪಡುವಂತಾಗಿದೆ.

‘ಬೆಂಗಳೂರು ಬಂದ್‌’ ಹಿನ್ನೆಲೆಯಲ್ಲಿ ಬಿಎಂಟಿಸಿ ಮತ್ತು ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ‘ಬೆಂಗಳೂರು ಬಂದ್‌’ನಿಂದಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದು, ಅದರ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮನೆಗೆ ಹೋಗಲು ಕ್ಯಾಬ್​ ಸಿಗದೆ, ಬಿಎಂಟಿಸಿ ಬಸ್​ನಲ್ಲಿ ಮನೆಗೆ ಕಡೆ ಪ್ರಯಾಣ ಬೆಳೆಸಿದ್ದಾರೆ. ‘BMTC trip back home today from the airport’ ಎಂದು ಸೆಲ್ಫಿ ಫೋಟೊ ಹಂಚಿಕೊಂಡಿದ್ದಾರೆ. ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲಾಗಿದೆ.

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಹಲವು ಮಂದಿ ನೆಟ್ಟಿಗರು, ‘ಬಂದ್ ಯಾರನ್ನೂ ಬಿಡುವುದಿಲ್ಲ’ ಎಂದಿದ್ದಾರೆ.

anil kumble circle

ಇನ್ನು ಕೆಲವರು, ‘ನನ್ನ ಸರ್ಕಲ್‌ಗೆ (ಅನಿಲ್ ಕುಂಬ್ಳೆ) ಒಂದು ಟಿಕೆಟ್ ಕೊಡಿ ಎಂದು ಕಂಡಕ್ಟರ್‌ ಅವರಲ್ಲಿ ಕೇಳಿದ್ರಾ?’ ಎಂದ ನೆಟ್ಟಿಗರು ಹಾಸ್ಯ ಚಟಾಕಿ ಹಾರಿಸಿದ್ದರೆ, ವಿಮಾನ ನಿಲ್ದಾಣದಿಂದ ಪ್ರಯಾಣಿಸಲು ಬಿಎಂಟಿಸಿ ಉತ್ತಮ ಆಯ್ಕೆ ಎಂದು ಅನಿಲ್ ಕುಂಬ್ಳೆಯವರಿಗೆ ಸಲಹೆ ನೀಡಿದ್ದಾರೆ.

ಅನಿಲ್ ಕುಂಬ್ಳೆ ಸರ್ಕಲ್‌

ಬೆಂಗಳೂರಿನ ಎಂ ಜಿ ರೋಡ್ ಮೆಟ್ರೋ ನಿಲ್ದಾಣದ ಸಮೀಪ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿ ಸರ್ಕಲ್‌ವೊಂದಿದೆ.

ದೆಹಲಿಯ ಫಿರೋಝ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ 1999ನೇ ಇಸವಿಯಲ್ಲಿ ಪಾಕಿಸ್ತಾನದ ವಿರುದ್ಧ ನಡೆದಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅನಿಲ್ ಕುಂಬ್ಳೆ ಅವರು, ಎಲ್ಲ 74 ರನ್‌ ನೀಡಿ, 10 ವಿಕೆಟ್‌ಗಳನ್ನು ಪಡೆದು ಐತಿಹಾಸಿಕ ಸಾಧನೆ ಮಾಡಿದ್ದರು. ಆ ಬಳಿಕ “ಅನಿಲ್ ಕುಂಬ್ಳೆ ವೃತ್ತ” ಎಂದು ಹೆಸರಿಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...