ಬೆಂಗಳೂರು | ಅಂತರಿಕ್ಷಯಾನದ ಪರಿಕಲ್ಪನೆಯಡಿ ಜನವರಿ 7ರಂದು ಚಿತ್ರಸಂತೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿವರ್ಷ ಕಡಲೆಕಾಯಿ ಪರಿಷೆ, ಕರಗ, ಅವರೆ ಮೇಳ, ಕೃಷಿ ಮೇಳ, ಕೇಕ್ ಶೋ ಸೇರಿದಂತೆ ಹಲವಾರು ಕಾರ್ಯಕ್ರಮಗಳು ನಡೆಯುತ್ತವೆ. ಪ್ರತಿ ವರ್ಷದಂತೆ ಈ ವರ್ಷವೂ ನಗರದ ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ನಡೆಸಲಾಗುತ್ತಿದೆ.

ಕರ್ನಾಟಕ ಚಿತ್ರಕಲಾ ಪರಿಷತ್‌ ‘ಎಲ್ಲರಿಗಾಗಿ ಕಲೆಎಂಬ ಶೀರ್ಷಿಕೆಯಡಿ ನಗರದಲ್ಲಿ ರಾಷ್ಟ್ರೀಯ ಮಟ್ಟದಚಿತ್ರಸಂತೆಆಯೋಜಿಸುತ್ತಿದ್ದು, ಕುಮಾರಕೃಪಾ ರಸ್ತೆಯಲ್ಲಿ ನಡೆಯಲಿರುವ 21ನೇ ಚಿತ್ರಸಂತೆ ಇದಾಗಿದೆ.

ಚಿತ್ರಕಲಾ ಪರಿಷತ್ ಪ್ರತಿ ವರ್ಷದ ಆರಂಭ ಅಂದರೆ ಜನವರಿ ತಿಂಗಳಿನಲ್ಲಿ ಮೊದಲನೇ ಭಾನುವಾರ ಈ ಚಿತ್ರಸಂತೆ ನಡೆಸಲಾಗುತ್ತದೆ. ಈ ವರ್ಷವೂ ಜನವರಿ 7ರಂದು ಚಿತ್ರಸಂತೆ ನಡೆಯಲಿದ್ದು, ಬೆಳ್ಳಗ್ಗೆ 8 ಗಂಟೆಗೆ ಆರಂಭವಾಗಿ, ಸಂಜೆ 8 ಗಂಟೆಯವರೆಗೂ ನಡೆಯಲಿದೆ.‌‌ ಚಿತ್ರಸಂತೆಯಲ್ಲಿ ₹100 ಆರಂಭವಾಗಿ ಲಕ್ಷದವರೆಗೂ ಚಿತ್ರಕಲೆಗಳು ಸಿಗಲಿವೆ. ಈ ಬಾರಿಯ ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ. ಅಂತರಿಕ್ಷಯಾನದ ಪರಿಕಲ್ಪನೆಯಡಿ ಚಿತ್ರಸಂತೆಯನ್ನು ಈ ಬಾರಿ ಆಯೋಜನೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರಸಂತೆಗೆ ಬರುವುದಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಚಿತ್ರಕಲಾಪ್ರಿಯರಿಗೆ ಆಹ್ವಾನಿಸಲಾಗಿದೆ. ಈಗಾಗಲೇ 3 ಸಾವಿರಕ್ಕೂ ಹೆಚ್ಚು ಚಿತ್ರಕಲಾ ಪ್ರಿಯರು ಚಿತ್ರಸಂತೆಗೆ ಬರಲು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಬಾರಿ 7 ಲಕ್ಷಕ್ಕೂ ಹೆಚ್ಚು ಜನರು ಚಿತ್ರಸಂತೆಗೆ ಬರುವ ಸಾಧ್ಯತೆ ಇದೆ.

ಚಿತ್ರಕಲಾ ಪರಿಷತ್ ಚಿತ್ರಸಂತೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳುತ್ತಿದೆ. ಈ ಬಾರಿ ಚಿತ್ರಸಂತೆಯಲ್ಲಿ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಬಾಹ್ಯಾಕಾಶ ಕುರಿತಂತೆ ಚಿತ್ರಕಲೆ, ಶಿಲ್ಪಕಲೆ, ರಾಕೆಟ್‌ ಹೆಸರಿನಲ್ಲಿ ಪ್ರದರ್ಶನಕ್ಕೆ ಇರಿಸಲಾಗುತ್ತಿದೆ.

ಚಂದ್ರಯಾನ-3 ಉಡಾವಣೆಯ ಯಶಸ್ಸಿನ ಹಿನ್ನೆಲೆ, ಚಿತ್ರಸಂತೆಯನ್ನು ಅಂತರಿಕ್ಷಯಾನದ ಶೀರ್ಷಿಕೆಯಡಿ ರಾಕೆಟ್‌, ಬಾಹ್ಯಾಕಾಶ ಸೇರಿದಂತೆ ಚಿತ್ರಕಲೆ, ಶಿಲ್ಪಕಲೆ ಮತ್ತಿತರ ಪ್ರದರ್ಶನ ಗ್ಯಾಲರಿ ನಿರ್ಮಿಸಲಾಗುವುದು. ಪರಿಷತ್ತಿನ ಆವರಣದಲ್ಲಿ ಬಾಹ್ಯಾಕಾಶ ಕುರಿತಂತೆ ಪ್ರದರ್ಶನವೂ ಇರಲಿದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ ಬಸ್‌ಗಳಲ್ಲಿ ಆಡಿಯೊ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶಿಸಿದ ಹೈಕೋರ್ಟ್‌

ಸಾಂಪ್ರದಾಯಿಕ ಮೈಸೂರು ಶೈಲಿಯ ಕಲೆ, ತಂಜಾವೂರು ಶೈಲಿ, ರಾಜಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ ಮತ್ತು ಜಲವರ್ಣಗಳಲ್ಲಿ ರಚಿಸಿರುವ ಚಿತ್ರಗಳು, ಆಕ್ರಿಲಿಕ್‌, ಗಾಜಿನ ಮೇಲೆ ಬಿಡಿಸಿರುವ ಚಿತ್ರಗಳು, ಕೊಲಾಜ್‌, ಲಿಥೋಗ್ರಾಫ್‌, ಡೂಡಲ್‌, ಎಂಬೋಸಿಂಗ್‌, ವಿಡಿಯೋ ಕಲೆ, ಗ್ರಾಫಿಕ್ಕಲೆ, ಶಿಲ್ಪ ಕಲೆ, ಇನ್ಸ್ಟಲೇಶನ್‌ (ಪ್ರತಿಧಿಷ್ಠಾಧಿಪನಾ ಕಲೆ), ಪರ್ಫಾರ್ಮೆನ್ಸ್ಕಲೆ ಹೀಗೆ ನಾನಾ ಮಾಧ್ಯಮದ ಚಿತ್ರಗಳು ಒಂದೇ ಸೂರಿನಡಿ ಪ್ರದರ್ಶನಗೊಳ್ಳಲಿವೆ.

ಎಂದಿನಂತೆ ಕುಮಾರಕೃಪಾ ರಸ್ತೆಯಲ್ಲಿ ಇಡೀ ದಿನ ಸಂತೆ ನಡೆಯುತ್ತದೆ. ರಾಷ್ಟ್ರೀಯ ಮಟ್ಟದ ಚಿತ್ರಸಂತೆಯಾಗಿರುವುದರಿಂದ ಕರ್ನಾಟಕ, ಒಡಿಶಾ, ಪಂಜಾಬ್‌, ತಮಿಳುನಾಡು, ಕೇರಳ, ಆಂಧ್ರ ಸೇರಿದಂತೆ ದೇಶದ ನಾನಾ ರಾಜ್ಯಗಳಿಂದ ಕಲಾವಿದರು ಆಗಮಿಸಲಿದ್ದಾರೆ.

ಚಿತ್ರಕಲಾ ಸಂತೆಗೆ ಹೆಚ್ಚಿನ ಜನರು ಬರುವ ಹಿನ್ನೆಲೆ ಚಿತ್ರಕಲಾ ಪರಿಷತ್ ರಸ್ತೆ ಸಂಪರ್ಕಿಸುವ ರಸ್ತೆ ಜನವರಿ 7 ರಂದು ಬಂದ್ ಆಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...