ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ ಆಹಾರದಲ್ಲಿ ಜಿರಳೆ ಪತ್ತೆ: ಪ್ರಶ್ನಿಸಿದ್ದಕ್ಕೆ ಹೈಕೋರ್ಟ್‌ ವಕೀಲೆ ಮೇಲೆ ಹಲ್ಲೆ

Date:

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ವೊಂದಕ್ಕೆ ಊಟಕ್ಕೆ ತೆರಳಿದ ವಕೀಲರೊಬ್ಬರಿಗೆ ನೀಡಿದ ಆಹಾರದಲ್ಲಿ ಜಿರಳೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶೀಲಾ ದೀಪಕ್‌ ವಕೀಲೆ. ಗುರುವಾರ ಸಂಜೆ ಬೆಂಗಳೂರಿನ ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೋಟೆಲ್‌ಗೆ ಊಟಕ್ಕೆಂದು ತೆರಳಿದ್ದಾರೆ. ಊಟಕ್ಕೆಂದು ರೋಟಿ ಹಾಗೂ ಪನ್ನೀರ್ ಗ್ರೇವಿ ಆರ್ಡರ್ ಮಾಡಿದ್ದರು. ಒಂದೆರಡು ತುತ್ತು ತಿಂದ ಬಳಿಕ ಪನ್ನೀರ್ ಗ್ರೇವಿಯಲ್ಲಿ ಸತ್ತ ಜಿರಳೆ ಪತ್ತೆಯಾಗಿದೆ.

ಜಿರಳೆ ಪತ್ತೆಯಾದ ಕೂಡಲೇ ಹೋಟೆಲ್ ಸಿಬ್ಬಂದಿಯನ್ನ ವಕೀಲೆ ತರಾಟೆಗೆ ತೆಗೆದುಕೊಂಡಿದ್ದರು. ಹೋಟೆಲ್ ಸಿಬ್ಬಂದಿ ‘ಬೇರೆ ಊಟ ನೀಡುವುದಾಗಿ’ ಗ್ರಾಹಕರಿಗೆ ಮನವರಿಕೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಕೀಲೆ, ತಮ್ಮ ಮೊಬೈಲ್‌ ಫೋನ್‌ನಲ್ಲಿ ಜಿರಳೆ ಫೋಟೋ ಸೆರೆ ಹಿಡಿದಿದ್ದಾರೆ. ನಂತರ, ಅಡುಗೆ ಮನೆಯ ವಿಡಿಯೋ ರೆಕಾರ್ಡ್ ಮಾಡಲು ಮುಂದಾದಾಗ ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಒಬ್ಬ ಪುರುಷ ಕೆಲಸಗಾರ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಹಾರ ಅಧಿಕಾರಿಗೆ ಕರೆ ಮಾಡಿ ತಮಗೆ ನೀಡಿದ ಆಹಾರದ ಬಗ್ಗೆ ದೂರು ನೀಡಿದ್ದಾರೆ. ಟ್ರಾಫಿಕ್​​ನಿಂದಾಗಿ ಅದೇ ದಿನ ಹೋಟೆಲ್ ತಲುಪಲು ಸಾಧ್ಯವಾಗದ ಕಾರಣ ಮರುದಿನ ಹೋಟೆಲ್ ಪರಿಶೀಲನೆ ನಡೆಸುವುದಾಗಿ ಆಹಾರ ಅಧಿಕಾರಿ ಶೀಲಾ ಅವರಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೆಹಲಿ, ಪಂಜಾಬ್ ಮಾದರಿಯಲ್ಲಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ: ಸಿದ್ದರಾಮಯ್ಯಗೆ ಎಎಪಿ ಪತ್ರ

ಆಹಾರ ಅಧಿಕಾರಿ ಹೋಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸುವವರೆಗೂ ಅಡುಗೆ ಕೋಣೆಯನ್ನು ಸ್ವಚ್ಛಗೊಳಿಸದಂತೆ ಸಿಬ್ಬಂದಿಗೆ ಶೀಲಾ ಮನವಿ ಮಾಡಿದ್ದರು. ಆದರೆ, ಶೀಲಾ ಅವರು ಆಹಾರ ಅಧಿಕಾರಿಗೆ ದೂರು ನೀಡಿದ ನಂತರ ಹೋಟೆಲ್ ಸಿಬ್ಬಂದಿ ಅಡುಗೆ ಕೋಣೆಯನ್ನು ಸ್ವಚ್ಛಗೊಳಿಸಲು ಆರಂಭಿಸಿದರು ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ವಕೀಲೆ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...