ಬೆಂಗಳೂರು | ಜ.16ರಿಂದ 19ರ ವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್

Date:

ರಾಜ್ಯ ರಾಜಧಾನಿ ಬೆಂಗಳೂರಿನ ಪೀಣ್ಯ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಹೈವೇ (ಡಾ.ಶಿವಕುಮಾರ ಸ್ವಾಮೀಜಿ ಮೇಲ್ಲೇತುವೆ)ಗೆ ಅಳವಡಿಸಲಾಗಿದ್ದ ವಯಾಡಕ್ಟ್ ದುರಸ್ಥಿ ಕಾರ್ಯ ಕೈಗೊಳ್ಳುವ ಹಿನ್ನೆಲೆ, ಜನವರಿ 16ರಿಂದ ಮೂರು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಆಗಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಪ್ರಕಟಣೆ ಮೂಲಕ ತಿಳಿಸಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದುರಸ್ಥಿ ಕಾರ್ಯ ಕೈಗೊಳ್ಳಲಾಗಿದ್ದು, ವಯಾಡಕ್ಟನ ಸಮಗ್ರತೆಯ ಪರಿಶೀಲನೆಯನ್ನು ನಡೆಸಲು ಲೋಡ್ ಟೆಸ್ಟಿಂಗ್ ಮಾಡಬೇಕಾಗಿರುವುದರಿಂದ ಪೀಣ್ಯ ಎಲಿವೇಟೆಡ್ ಫ್ಲೈಓವರ್ ರಸ್ತೆಯಲ್ಲಿ ಜನವರಿ 16ರ ರಾತ್ರಿ 11 ಗಂಟೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆಯವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಬೇಕೆಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮನವಿ ಸಲ್ಲಿಸಿದೆ. ಈ ಹಿನ್ನೆಲೆ, ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಎಲ್ಲ ವಾಹನ ಸವಾರರು ಸರ್ವಿಸ್ ರಸ್ತೆ ಬಳಸುವಂತೆ ಮನವಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರ್ಯಾಯ ವ್ಯವಸ್ಥೆ

ಪ್ರಯಾಣಿಕರು ನೆಲಮಂಗಲ ಕಡೆಯಿಂದ ಬೆಂಗಳೂರು ನಗರಕ್ಕೆ ಫ್ಲೈಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಕೆನ್ನಮೆಟಲ್ ಹತ್ತಿರ ಫ್ಲೈಓವರ್ ಪಕ್ಕದ ಎನ್‍ಎಚ್-4 ಮತ್ತು ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆಯ ಜಂಕ್ಷನ್ ಮೂಲಕ ಎಸ್‍ಆರ್‌ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದಾಗಿದೆ.

ಸಿಎಂಟಿಐ ಜಂಕ್ಷನ್‍ನಿಂದ ನೆಲಮಂಗಲ ಕಡೆಗೆ ಫ್ಲೈಓವರ್ ರಸ್ತೆಯಲ್ಲಿ ಸಾಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ಫ್ಲೈಓವರ್ ಪಕ್ಕದ ಎನ್.ಎಚ್-4 ಸರ್ವಿಸ್ ರಸ್ತೆಯಲ್ಲಿ ಎಸ್‍ಆರ್‌ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ಹಾಗೂ ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ- 8ನೇ ಮೈಲಿ ಮುಖಾಂತರ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...