ಬೆಂಗಳೂರು | ಮಹಾರಾಣಿ ಕಾಲೇಜಿನ ಆವರಣದಲ್ಲಿ ಪ್ರೊಫೆಸರ್ ಕಾರು ಅಪಘಾತ; ಮೂವರಿಗೆ ಗಾಯ

Date:

ಬೆಂಗಳೂರಿನ ಪ್ರತಿಷ್ಠಿತ ಮಹಾರಾಣಿ ಕ್ಲಸ್ಟರ್ ಕಾಲೇಜು ಆವರಣದಲ್ಲೇ ಶನಿವಾರ ಅಪಘಾತ ಸಂಭವಿಸಿದ್ದು ಇಬ್ಬರು ವಿದ್ಯಾರ್ಥಿನಿಯರು ಹಾಗೂ ಕಾರು ಚಲಾಯಿಸುತ್ತಿದ್ದ ಪ್ರೊಫೆಸರ್ ಗಾಯಗೊಂಡಿರುವ ಘಟನೆ ನಡೆದಿದೆ.

ಕಾಲೇಜಿನ ಇಂಗ್ಲಿಷ್ ಪ್ರೊಫೆಸರ್ ನಾಗರಾಜ್‌(52) ಎಂಬುವವರು ಕಾಲೇಜು ಕ್ಯಾಂಪಸ್​ನೊಳಗಡೆ ಬಂದು ಪಾರ್ಕಿಂಗ್ ಮಾಡಲು ಯತ್ನಿಸಿದಾಗ ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಪರಿಣಾಮ ಈ ಅಪಘಾತ ಘಟನೆ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮತ್ತು ಕಾರು ಚಲಾಯಿಸುತ್ತಿದ್ದ ಪ್ರೊಫೆಸರ್ ಅವರಿಗೆ ಗಾಯಗಳಾಗಿವೆ.

ಘಟನೆಯಲ್ಲಿ ಬಿಕಾಂ ವಿದ್ಯಾರ್ಥಿ ಅಶ್ವಿನಿ(19), ಮತ್ತೊಬ್ಬ ವಿದ್ಯಾರ್ಥಿನಿ ನಂದುಪ್ರಿಯಾ(19) ಎಂಬಾಕೆಗೆ ಗಾಯಗಳಾಗಿವೆ. ಕಾರು ನಿಯಂತ್ರಣ ತಪ್ಪಿದ ಬಳಿಕ ಪಾರ್ಕಿಂಗ್ ಮಾಡಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಆ ಬಳಿಕ ಕಾಲೇಜು ಆವರಣದಲ್ಲಿದ್ದ ಮರವೊಂದಕ್ಕೆ ಗುದ್ದಿ ನಿಂತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಗಾಯಾಳುಗಳನ್ನು ಸೆಂಟ್ ಮಾರ್ಥಾಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾವುದೇ ಆತಂಕವಿಲ್ಲ, ಚಿಕಿತ್ಸೆಗೆ ವಿದ್ಯಾರ್ಥಿನಿಯರು ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪ ಪೊಲೀಸ್ ಆಯುಕ್ತ ಸಚಿನ್ ಘೋರ್ಪಡೆ, ‘ಪ್ರೊಫೆಸರ್ ನಾಗರಾಜ್‌ ಅವರು ಕಾರು ಪಾರ್ಕಿಂಗ್ ಮಾಡುವ ವೇಳೆ ಬ್ರೇಕ್ ಬದಲು ಎಕ್ಸಲೇಟರ್ ತುಳಿದಿದ್ದೇ ಅಪಘಾತಕ್ಕೆ ಕಾರಣ ಎಂದು ಪರಿಶೀಲನೆ ನಡೆಸಿದ ಸಂದರ್ಭ ತಿಳಿದುಬಂದಿದೆ. ಘಟನೆಯಲ್ಲಿ ನಾಗರಾಜ್‌ ಹಾಗೂ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿನಿಯರ ಪೈಕಿ ಅಶ್ವಿನಿಯವರ ತಲೆಗೆ ಸ್ವಲ್ಪ ಹೆಚ್ಚು ಪೆಟ್ಟಾಗಿದೆ. ಜೀವಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ. ಪ್ರೊಫೆಸರ್ ನಾಗರಾಜ್‌ ಅವರಿಗೂ ಗಾಯವಾಗಿದೆ. ಸದ್ಯ ಅವರನ್ನು ವಶಕ್ಕೆ ಪಡೆದಿದ್ದೇವೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...