ಬೆಂಗಳೂರು | ನ.27 ಮತ್ತು ನ.28 ರಂದು ಈ ಮಾರ್ಗದಲ್ಲಿ ಸಂಚಾರ ಬಂದ್; ಎಲ್ಲೆಲ್ಲಿ? ಇಲ್ಲಿದೆ ನೋಡಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾನಾ ಬೇಡಿಕೆ ಈಡೇರಿಕೆಗಾಗಿ ಸಂಯುಕ್ತ ಹೋರಾಟ ಸಮಿತಿ ಕರ್ನಾಟಕ ರಾಜ್ಯ ಹಾಗೂ ನಾನಾ ಸಂಘಟನೆಗಳು ನ.27 ಮತ್ತು ನ.28 ರಂದು ಬೆಳಗ್ಗೆಯಿಂದ ರಾತ್ರಿಯವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಹಾಧರಣಿ ರಾಜಭವನ ಚಲೋಗೆ ಕರೆ ನೀಡಿವೆ. ಈ ಹಿನ್ನೆಲೆ, ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸಿ ಎಂದು ಬೆಂಗಳೂರು ಸಂಚಾರ ಪೊಲೀಸ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಫೋಟೋ ಆಲ್ಬಮ್ | ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ‘ನಮ್ಮ ಕಂಬಳ’

  • ಕೆ.ಜಿ ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲ ತಿರುವು ಪಡೆದು ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಪ್ಯಾಲೇಸ್ ಕ್ರಾಸ್ ರಸ್ತೆಯ ಮಹಾರಾಣಿ ಅಂಡರ್ ಪಾಸ್ ರಸ್ತೆಯನ್ನು ಬಳಸಲು ವಿನಂತಿಸಿದೆ.
  • ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ವಾಹನ ಸವಾರರು ಸದರಿ ರಸ್ತೆಯನ್ನು ಬಳಸದಂತೆ ವಿನಂತಿಸಲಾಗಿದೆ.
  • ಖೋಡೆ ಜಂಕ್ಷನ್ ಕಡೆಯಿಂದ ಕೆ.ಆರ್.ಸರ್ಕಲ್ ಕಡೆಗೆ ಹೋಗುವ ವಾಹನ ಸವಾರರು ಫ್ಲೈ ಓವರ್‌ ರಸ್ತೆಯಲ್ಲಿ ರೈಲ್ವೆ ನಿಲ್ದಾಣದಿಂದ ಪ್ರತಿಭಟನೆಗೆ ಬರುವ ಜನರು ಕಾಲ್ನಡಿಗೆಯಲ್ಲಿ ಬರುವವರಿದ್ದು, ವಾಹನ ಸಂಚಾರ ದಟ್ಟಣೆಯಾದಲ್ಲಿ ವಾಹನ ಸವಾರರು ಹಳೆ ಜೆ.ಡಿ.ಎಸ್ ಕಚೇರಿ ರಸ್ತೆಯನ್ನು ಬಳಸುವಂತೆ ಕೋರಲಾಗಿದೆ.
  • ಸುಬ್ಬಣ್ಣ ಜಂಕ್ಷನ್‌ನಿಂದ ಎಂ.ಟಿ.ಆರ್ ಜಂಕ್ಷನ್ ಕಡೆಗೆ ಬರುವ ರಸ್ತೆಯು ಹಾಲಿ ಏಕಮುಖ ಸಂಚಾರ ರಸ್ತೆಯಾಗಿದ್ದು ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಪರಿವರ್ತಿಸಲಾಗಿದ್ದು, ಗಾಂಧಿನಗರ ಕಡೆಗೆ ಬರುವ ವಾಹನ ಸವಾರರು ಸದರಿ ರಸ್ತೆಯನ್ನು ಬಳಸುವಂತೆ ಕೋರಲಾಗಿದೆ.
  • ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್‌ವರೆಗೆ, ವೈ ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ, ಕೆ.ಜಿ ರಸ್ತೆಗಳಲ್ಲಿ ಯಾವುದೇ ಮಾದರಿಯ ವಾಹನಗಳಿಗೆ ಪಾರ್ಕಿಂಗ್‌ ಅನುಮತಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...