ಬೆಂಗಳೂರು | ಶ್ರೀಪಾದ್ ಭಟ್ ಬರೆದ ‘ವಿಷವಟ್ಟಿ ಸುಡುವಲ್ಲಿ’ ಕೃತಿ ಬಿಡುಗಡೆ

Date:

ಇತಿಹಾಸವನ್ನು ತಿರುಚಿ ಪಠ್ಯದ ರೂಪದಲ್ಲಿ ಮತೀಯವಾದವನ್ನು ಹರಡುತ್ತಿರುವ ಇಂದಿನ ಅಪಾಯಕಾರಿ ಶಿಕ್ಷಣ ವ್ಯವಸ್ಥೆಯ ಬಗ್ಗೆ‌ ಹಿರಿಯ ಲೇಖಕ ಬಿ.ಶ್ರೀಪಾದ್ ಭಟ್ ಅವರು ಬರೆದಿರುವ ‘ವಿಷವಟ್ಟಿ ಸುಡುವಲ್ಲಿ’ ಕೃತಿ ಶುಕ್ರವಾರ ಬಿಡುಗಡೆಯಾಯಿತು.

ಬೆಂಗಳೂರಿನ ಸರ್ಕಾರಿ‌ ಕಲಾ ಕಾಲೇಜಿನ ಬಾಪೂಜಿ ‌ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿಗಳಾದ ಪ್ರೊಫೆಸರ್ ಸಬೀಹಾ ಭೂಮಿಗೌಡ ಅವರು ಈ ವಿಶೇಷ ಕೃತಿಯನ್ನು ಬಿಡುಗಡೆಗೊಳಿಸಿದರು.

ಪುಸ್ತಕ ಬಿಡುಗಡೆಯ ಬಳಿಕ ಮಾತನಾಡಿದ ಪ್ರೊ. ಸಬೀಹಾ ಭೂಮಿಗೌಡ, ‘ಕೃತಿಯನ್ನು ಬಿಡುಗಡೆ ಮಾಡಿದ್ದು ನನಗೆ ಖುಷಿ ಮತ್ತು ಅಭಿಮಾನದ ಸಂಗತಿ. ಇಂದಿನ ವರ್ತಮಾನದಲ್ಲಿ ಮತೀಯ ವಿಷವನ್ನು ವಿವಿಧ ನೆಲೆಗಳಲ್ಲಿ ಜನರ ಮುಂದಿಡುವ ಪ್ರಜ್ಞಾಪೂರ್ವಕ ಮತ್ತು ವ್ಯವಸ್ಥಿತ ಹುನ್ನಾರಗಳು ನಡೆಯುತ್ತಲಿವೆ. ಇಂತಹ ಹೊತ್ತಿನಲ್ಲಿ ಶ್ರೀಪಾದ್ ಭಟ್ ಅವರು ಬರೆದಿರುವ ಈ ಕೃತಿ ನಮ್ಮೆಲ್ಲರ ಜವಾಬ್ದಾರಿಯನ್ನು ನೆನಪಿಸುವಂಥದ್ದು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಲಿತ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, ” ಜನಪರ ಹೋರಾಟಗಳಲ್ಲಿ ತೊಡಗಿಕೊಂಡಿರುವ ಶ್ರೀಪಾದ ಭಟ್ಟರು ‘ವಿಷವಟ್ಟಿ ಸುಡುವಲ್ಲಿ’ ಕೃತಿಯ ಮತೀಯವಾದಿಕರಣದ ಮುಖವನ್ನು ಪರಿಚಯಿಸುವ ಪ್ರಯತ್ನ ಮಾಡಿದ್ದಾರೆ. ಸಾಂಸ್ಕೃತಿಕ ಗುಲಾಮಗಿರಿ ರಾಜಕೀಯ ಗುಲಾಮಿಗಿರಿಗಿಂತ ಹೆಚ್ಚು ಅಪಾಯಕಾರಿ. ಹಿಂದಿನಿಂದಲೂ ನಮ್ಮ ಇತಿಹಾಸವನ್ನು ಪುರಾಣದ ರೀತಿಯಲ್ಲಿ ಬಿಂಬಿಸಲಾಗಿದೆ. ನಮ್ಮ ಮಕ್ಕಳಿಗೆ ಇತಿಹಾಸ ಎಂದರೆ ಮನರಂಜನೆಯ ಎನ್ನುವಂತೆ ತೋರಿಸಲಾಗುತ್ತಿದೆ. ಇತಿಹಾಸವನ್ನು ತಿರುಚುವ ಪ್ರಯತ್ನಗಳು ವ್ಯವಸ್ಥಿತವಾಗಿ ನಡೆಯುತ್ತಿವೆ. ಈ ಕಾಲಘಟ್ಟದಲ್ಲಿ ನಾವುಗಳು ನಡೆಸುವ ಚರ್ಚೆಗಳು ಯುವ ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ತಲುಪುವ ಅಗತ್ಯವಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...