ಬೆಂಗಳೂರು | ಗೀಸರ್‌ ಗ್ಯಾಸ್‌ ಸೋರಿಕೆಯಿಂದ ಯುವತಿ ಸಾವು

Date:

ರಾಜಧಾನಿ ಬೆಂಗಳೂರಿನ ಸದಾಶಿವನಗರದಲ್ಲಿ ಮನೆಯ ಬಾತ್‌ರೂಮ್‌ನಲ್ಲಿ ಗ್ಯಾಸ್‌ ಗೀಸರ್ ಅನಿಲ್ ಸೋರಿಕೆಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಬೆನ್ನಲ್ಲೇ, ಇದೀಗ ಅಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ.

ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ಗೀಸರ್ ಗ್ಯಾಸ್​​ ಸೋರಿಕೆಯಾಗಿ ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ.

ಡಿಸೆಂಬರ್​​ 20 ರಂದು ಮಧ್ಯಾಹ್ನ ಈ ದುರಂತ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ವರಿ (23) ಮೃತ ದುರ್ದೈವಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಖಾಸಗಿ ಕಂಪನಿಯಲ್ಲಿ ಮೃತ ರಾಜೇಶ್ವರಿ ಕೆಲಸ ಮಾಡುತ್ತಿದ್ದರು. ರಾಜೇಶ್ವರಿ ಅಣ್ಣನ ಮದುವೆಗೆಂದು ರಜೆ ಹಾಕಿದ್ದಳು. ಡಿಸೆಂಬರ್ 20ರಂದು ಮಧ್ಯಾಹ್ನ 1.45 ರಿಂದ 2 ಗಂಟೆ ಸುಮಾರಿಗೆ ರಾಜೇಶ್ವರಿ ಸ್ನಾನಕ್ಕೆ ತೆರಳಿದ್ದಳು. ಬೆಳಗ್ಗೆ ಸ್ನಾನ ಮಾಡಲು ಹೋದಾಗ ಗ್ಯಾಸ್ ಗೀಸರ್‌ನಿಂದ ಸೋರಿಕೆಯಾದ ವಿಷ ಅನಿಲದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ.

ಸ್ನಾನಕ್ಕೆ ತೆರಳಿ ತುಂಬಾ ಹೊತ್ತಾದರೂ ಹೊರಗೆ ಬರದದ್ದನ್ನು ಕಂಡ ಮನೆಯವರು ಬಾಗಿಲು ತಟ್ಟಿದ್ದಾರೆ. ಎಷ್ಟು ಹೊತ್ತು ಬಾಗಿಲು ಹೊಡೆದರೂ ಯುವತಿ ಆಚೆ ಬರದದನ್ನು ಕಂಡು ಗಾಬರಿಗೊಂಡ ಮನೆಯವರು ಬಾಗಿಲು ತೆಗೆದು ನೋಡಿದಾಗ ರಾಜೇಶ್ವರಿ ತೀವ್ರ ಅಸ್ವಸ್ಥಳಾಗಿ ಕೆಳಗೆ ಬಿದ್ದಿರುವುದು ಕಂಡು ಬಂದಿದೆ.

ತಕ್ಷಣ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ.

ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ ಎಂಡಿ ವಿರುದ್ಧ ಅಸಮಾಧಾನ ಹೊರಹಾಕಿದ ಕೆಎಸ್​ಆರ್​​ಟಿಸಿ ಸಿಬ್ಬಂದಿ ಮತ್ತು ನೌಕರರ ಸಂಘಟನೆ

ಮತ್ತೊಂದು ಘಟನೆ

ಡಿಸೆಂಬರ್ 23ರಂದು ಮಗು ಜತೆಗೆ ಸ್ನಾನಕ್ಕೆ ಹೋದಾಗ ಗೀಸರ್‌ ಲೀಕ್‌ ಆಗಿ ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲೇ ಗರ್ಭಿಣಿಯೊಬ್ಬರು ಮೃತಪಟ್ಟಿದ್ದರು. ನಾಲ್ಕು ವರ್ಷದ ಮಗುವಿಗೆ ಇನ್ನು ಚಿಕಿತ್ಸೆ ಮುಂದುವರಿದಿದ್ದು, ಮಗು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

e057b508e9e1b164fadd3c3edb023f5214f4d0a6d12066a30e302f9e3b0f6f24?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...