ಹುಳ ಇದ್ದ ಆಹಾರ ಕೊಟ್ಟ ಪ್ರಕರಣ: ಬೆಂಗಳೂರಿನ ರಾಮೇಶ್ವರಂ ಕೆಫೆ ವಿರುದ್ಧ ಎಫ್​ಐಆರ್

Date:

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಪ್ರಸಿದ್ಧ ರಾಮೇಶ್ವರಂ ಕೆಫೆಯ ಮಾಲೀಕರು ಕಳಪೆ ಆಹಾರವನ್ನು ನೀಡಿದ್ದಲ್ಲದೆ, ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ ಆರೋಪದಲ್ಲಿ ಹೋಟೆಲ್ ಮಾಲೀಕರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಗ್ರಾಹಕ ನಿಖಿಲ್ ಎನ್ ಎಂಬವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ಕೆಫೆಯ ಮಾಲೀಕ ರಾಘವೇಂದ್ರ ರಾವ್, ಅವರ ಪತ್ನಿ ದಿವ್ಯಾ ರಾಘವೇಂದ್ರ ರಾವ್ ಮತ್ತು ಹಿರಿಯ ವ್ಯವಸ್ಥಾಪಕ ಸುಮಂತ್ ಲಕ್ಷ್ಮಿನಾರಾಯಣ್ ಅವರ ವಿರುದ್ಧ ದೂರು ದಾಖಲಾಗಿದ್ದು, ನವೆಂಬರ್ 29 ರಂದು ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ನಿಖಿಲ್ ಅವರು ಜುಲೈ 24 ರಂದು ಟರ್ಮಿನಲ್ 1 ರಲ್ಲಿ ಗುವಾಹಟಿಗೆ ತೆರಳಲು ತಯಾರಿ ನಡೆಸುತ್ತಿದ್ದಾಗ ಕೆಫೆಯ ವಿಮಾನ ನಿಲ್ದಾಣದ ಕೌಂಟರ್‌ನಲ್ಲಿ ‘ಪೊಂಗಲ್’ ಮತ್ತು ಫಿಲ್ಟರ್ ಕಾಫಿ ಆರ್ಡರ್ ಮಾಡಿದ್ದರು. ಪೊಂಗಲ್​ನಲ್ಲಿ ಹುಳ ಪತ್ತೆಯಾಗಿದೆ ಎಂದು ಹೇಳಿಕೊಂಡಿದ್ದರು. ಹೋಟೆಲ್ ಸಿಬ್ಬಂದಿಗೆ ತಕ್ಷಣ ಮಾಹಿತಿ ನೀಡಿದ್ದೆ, ಅವರು ಬದಲಿ ಆಹಾರ ನೀಡುವುದಾಗಿ ತಿಳಿಸಿದರು. ಆದರೆ ಬೋರ್ಡಿಂಗ್‌ಗೆ ಆತುರ ಇದ್ದುದರಿಂದ ನಿರಾಕರಿಸಿದ್ದೆ ಎಂದು ನಿಖಿಲ್ ಹೇಳಿದ್ದಾರೆ. ಆದರೆ, ಇತರ ಇತರ ಗ್ರಾಹಕರು ಚಿತ್ರ, ವಿಡಿಯೋ ತೆಗೆದುಕೊಂಡಿದ್ದರು ಎಂದು ವರದಿಯಾಗಿದೆ. ಮತ್ತು ನಿಖಿಲ್ ಯಾವುದೇ ಸಮಸ್ಯೆ ಉಂಟುಮಾಡದೆ ಸುಮ್ಮನೆ ಹೊರಟುಹೋಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಆಹಾರದಲ್ಲಿ ಹುಳ ಸಿಕ್ಕಿದ ವಿಡಿಯೋ, ಚಿತ್ರಗಳು ಮರುದಿನ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಹೋಟೆಲ್​​ನವರು ನಿಖಿಲ್ ವಿರುದ್ಧ, ಬ್ರಾಂಡ್ ಹೆಸರಿಗೆ ಕಳಂಕ ತರುವುದಾಗಿ ಬೆದರಿಕೆಯೊಡ್ಡಿದ್ದಾಗಿಯೂ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎಂದೂ ಪೊಲೀಸ್ ದೂರು ದಾಖಲಿಸಿದ್ದರು ಎಂದು ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವರ್ತಮಾನದ ತಲ್ಲಣಗಳಿಗೆ ನಾರಾಯಣ ಗುರು – ಗಾಂಧಿಯೇ ಉತ್ತರ

ಕೆಫೆಯ ಆರೋಪಗಳ ಆಧಾರದ ಮೇಲೆ ಪೊಲೀಸರು ನಿಖಿಲ್ ಮತ್ತು ಅವರ ಸ್ನೇಹಿತರನ್ನು ವಿಚಾರಣೆಗೆ ಕರೆಸಿದ್ದರು. ಆದರೆ ನಿಖಿಲ್ ತಾನು ಎಂದಿಗೂ ಪರಿಹಾರ ಅಥವಾ ಮರುಪಾವತಿ ಕೇಳಿಲ್ಲ ಎಂದಿದ್ದಾರೆ. ಕೆಫೆ ಮಾಡಿರುವ ಆರೋಪಗಳಿಗೂ ತನಗೂ ಸಂಬಂಧ ಇಲ್ಲ. ಆ ಹೊತ್ತಿನಲ್ಲಿ ವಿಮಾನದಲ್ಲಿದ್ದೆ ಎಂದು ದಾಖಲೆಗಳನ್ನು ತೋರಿಸಿದ್ದರು. ನಂತರ ನಿಖೀಲ್ ಆಗಲೀ ಅವರ ಸ್ನೇಹಿತರಾಗಲೀ ಬೆದರಿಕೆ ಅಥವಾ ಸುಲಿಗೆ ಮಾಡಲು ಪ್ರಯತ್ನಿಸಿದ ಬಗ್ಗೆ ಯಾವುದೇ ಪುರಾವೆಗಳು ತನಿಖಾಧಿಕಾರಿಗಳಿಗೆ ದೊರೆತಿಲ್ಲ.

ಆದರೆ ಇಷ್ಟೆಲ್ಲ ಆದ ಮೇಲೆ ನಿಖಿಲ್ ಸುಮ್ಮನಿರಲಿಲ್ಲ. ಪ್ರತಿದೂರು ದಾಖಲಿಸಿ, ಈ ಘಟನೆಯನ್ನು ‘ಗಂಭೀರ ಆಹಾರ ಸುರಕ್ಷತೆಯ ವೈಫಲ್ಯ’ ಎಂದು ಉಲ್ಲೇಖಿಸಿದ್ದಾರೆ. ಅಲ್ಲದೆ, ಕೆಫೆಯು ತನ್ನ ವರ್ಚಸ್ಸಿಗೆ ಕಳಂಕ ತರುವ ಮತ್ತು ತನ್ನನ್ನು ಬೆದರಿಸುವ ಸಲುವಾಗಿ ಸುಳ್ಳು ಪ್ರಕರಣವನ್ನು ದಾಖಲಿಸಿದೆ ಎಂದು ಆರೋಪಿಸಿದ್ದಾರೆ. ಈ ದೂರಿನ ಅನ್ವಯ ಕೆಫೆಯ ಮಾಲೀಕರು ಮತ್ತು ಅವರ ಪ್ರತಿನಿಧಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾದ (ಬಿಎನ್‌ಎಸ್) ಹಲವಾರು ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕ್ರಿಮಿನಲ್ ಪಿತೂರಿ, ಸುಳ್ಳು ಮಾಹಿತಿ ಒದಗಿಸುವುದು, ಸಾಕ್ಷ್ಯಗಳನ್ನು ರೂಪಿಸುವುದು ಮತ್ತು ಕಲಬೆರಕೆ ಅಥವಾ ಹಾನಿಕಾರಕ ಆಹಾರವನ್ನು ಮಾರಾಟ ಮಾಡುವುದು ಸೇರಿದಂತೆ ಹಲವು ಆರೋಪಗಳನ್ನು ಕೆಫೆ ವಿರುದ್ಧ ಹೊರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...