ಬೆಂಗಳೂರು | ಶೌಚಾಲಯದಲ್ಲಿ 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ರೆಕಾರ್ಡ್‌ ಮಾಡಿದ ಇನ್ಫೋಸಿಸ್‌ ಉದ್ಯೋಗಿ ಬಂಧನ

Date:

ಮಹಿಳಾ ಉದ್ಯೋಗಿಗಳು ಶೌಚಾಲಯಕ್ಕೆ ತೆರಳಿದಾಗ ಅವರ ವಿಡಿಯೋ ಚಿತ್ರೀಕರಣ ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರಿನ ಇನ್ಫೋಸಿಸ್‌ ಸಂಸ್ಥೆಯ ಉದ್ಯೋಗಿಯೊಬ್ಬನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ 28 ವರ್ಷದ ಉದ್ಯೋಗಿ ಸ್ವಪ್ನಿಲ್ ನಾಗೇಶ್ ಮಲಿ ಬಂಧಿತ ವ್ಯಕ್ತಿ. ಈತ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿ ವಿಡಿಯೋ ರೆಕಾರ್ಡ್‌ ಮಾಡುವಾಗಲೇ ಸಿಕ್ಕಿಬಿದ್ದಿದ್ದಾನೆ. ರಹಸ್ಯವಾಗಿ ತನ್ನ ಮೊಬೈಲ್‌ನಲ್ಲಿ ಮಹಿಳಾ ಉದ್ಯೋಗಿಯ ಶೌಚಾಲಯದ ವಿಡಿಯೋ ರೆಕಾರ್ಡ್‌ ಮಾಡತೊಡಗಿದ್ದ. ಪಕ್ಕದ ಶೌಚಾಲಯದ ಕಮೋಡ್‌ ಮೇಲೆ ನಿಂತು ರೆಕಾರ್ಡ್‌ ಮಾಡಿದ್ದಾನೆ. ಈತ ರೆಕಾರ್ಡ್ ಮಾಡುತ್ತಿರುವುದು ಎದುರುಗಡೆ ಬಾಗಿಲ ಮೇಲೆ ಪ್ರತಿಬಿಂಬ ಮೂಡಿರುವುದನ್ನು ಯುವತಿ ಗಮನಿಸಿದ್ದಾರೆ. ತಕ್ಷಣ ಪರಿಶೀಲನೆ ಮಾಡಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಕೂಡಲೇ ಮಹಿಳೆ ಕಿರುಚಾಡಿದ್ದು, ಅಲ್ಲಿಯೇ ಮಹಿಳಾ ಉದ್ಯೋಗಿಯ ಕ್ಷಮೆ ಕೇಳಿದ್ದಾನೆ. ಈ ಹಂತದಲ್ಲಿ ಎಚ್‌ಆರ್‌ ಸಿಬ್ಬಂದಿ ಆಗಮಿಸಿ ಆರೋಪಿಯ ವಿಡಿಯೋ ಪರಿಶೀಲನೆ ಮಾಡಿದಾಗ ಸಂತ್ರಸ್ತೆಯ ವಿಡಿಯೋ ಜೊತೆಗೆ ಸುಮಾರು 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ

ಆದರೆ, ಕಠಿಣ ಕ್ರಮಕ್ಕೆ ಮುಂದಾಗದೆ ಇನ್ಫೋಸಿಸ್‌ ಆಡಳಿತ ಮಂಡಳಿ ಉದ್ಯೋಗಿಯ ಕ್ಷಮೆ ಕೇಳಿಸಿ ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿತ್ತು. ಆದರೆ, ಮಹಿಳಾ ಉದ್ಯೋಗಿ ಪತಿಗೆ ವಿಚಾರ ತಿಳಿದು ಗಲಾಟೆ ದೊಡ್ಡದಾಗಿದ್ದು, ಇನ್ಫೋಸಿಸ್ ಕಂಪನಿ ಬಳಿ ಮಹಿಳೆಯ ಪತಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಮಂಗಳವಾರ ಎಲಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಇಂದು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸ್ವಪ್ನಿಲ್ ನಾಗೇಶ್ ಮಲಿ ಇನ್ಫೋಸಿಸ್‌ ಕಂಪನಿಯ ಹೀಲೀಕ್ಸ್‌ ಡಿಪಾರ್ಟ್‌ಮೆಂಟ್‌ನಲ್ಲಿ ಸೀನಿಯರ್‌ ಅಸೋಸಿಯೇಟ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...