ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

Date:

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ (ಆಗಸ್ಟ್‌ 18) ಬೆಳಿಗ್ಗೆ 5 ಗಂಟೆಯಿಂದ ಮೆಟ್ರೋ ಸೇವೆ ಆರಂಭಿಸಲಿದೆ. ಆರ್‌.ವಿ. ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್‌ ಬೊಮ್ಮಸಂದ್ರ ಟರ್ಮಿನಲ್‌ಗಳಿಂದ ಮೊದಲ ರೈಲುಗಳು ಹೊರಡಲಿವೆ.

ಸ್ವಾತಂತ್ರ್ಯ ದಿನಾಚರಣೆಯ ರಜೆಯಿಂದಾಗಿ ಶುಕ್ರವಾರದಿಂದ ಭಾನುವಾರದವರೆಗಿನ ಮೂರು ದಿನಗಳ ರಜೆಯಲ್ಲಿ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ. ಇದರಿಂದ ಸೋಮವಾರ ಬೆಂಗಳೂರಿಗೆ ವಾಪಸಾಗುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ಈ ಜನದಟ್ಟಣೆಯನ್ನು ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಸುಗಮ ಸೇವೆ ಒದಗಿಸಲು ಬಿಎಂಆರ್‌ಸಿಎಲ್‌ ಈ ನಿರ್ಧಾರ ಕೈಗೊಂಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇರಳೆ ಮಾರ್ಗ ಮತ್ತು ಹಸಿರು ಮಾರ್ಗದ ಮೆಟ್ರೋ ಸೇವೆಗಳು ಎಂದಿನಂತೆ ಬೆಳಿಗ್ಗೆ 4:15 ರಿಂದ ಕಾರ್ಯನಿರ್ವಹಿಸಲಿವೆ. ಆದರೆ, ಹಳದಿ ಮಾರ್ಗದಲ್ಲಿ ಸೋಮವಾರ ಮಾತ್ರ ಬೆಳಿಗ್ಗೆ 5 ಗಂಟೆಯಿಂದ ಸೇವೆ ಆರಂಭವಾಗಲಿದ್ದು, ಮಂಗಳವಾರದಿಂದ (ಆಗಸ್ಟ್‌ 19) ಎಂದಿನಂತೆ ಬೆಳಿಗ್ಗೆ 6:30ಕ್ಕೆ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರಿಗೆ ಈ ಬೆಳಗಿನ ಸೇವೆಯ ಲಾಭವನ್ನು ಪಡೆದುಕೊಂಡು ತಮ್ಮ ಪ್ರಯಾಣವನ್ನು ಸುಲಭಗೊಳಿಸಲು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...