ಬಿಜೆಪಿಯವರು ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ

Date:

ಮೋದಿ ಪ್ರಧಾನಿ ಆದ ಬಳಿಕ ಎಲ್ಲ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ದಾಖಲೆಗಳನ್ನು, ಮತಗಳ್ಳತನದ ವ್ಯವಸ್ಥಿತ ಷಡ್ಯಂತ್ರ ಮತ್ತು ವ್ಯವಸ್ಥಿತ ಕಾರ್ಯತಂತ್ರದ ದಾಖಲೆಗಳನ್ನು ವಿವರಿಸಿ ಮಾತನಾಡಿದರು.

ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಮತಗಳ್ಳತನದ ಮೂಲಕ‌ ಅನೇಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ನಿರಂತರ ಅಧ್ಯಯನ, ತಪಸಣೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ಎಂದು ವಿವರಿಸಿದರು.

ಸಂವಿಧಾನಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ಪ್ರಜಾಪ್ರಭುತ್ವಕ್ಕೆ ಎಸಗಿದ ವಂಚನೆ. ರಾಹುಲ್ ಗಾಂಧಿಯವರು, ಬೆಂಗಳೂರು ಕೇಂದ್ರ ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನವನ್ನು ಸ್ಪಷ್ಟವಾಗಿ, ದಾಖಲೆ ಸಮೇತ ಬಯಲಿಗೆ ಎಳೆದು ದಾಖಲೆಗಳನ್ನು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಜನ ಗಣ ಮನ’ಕ್ಕೆ ಬಿಜೆಪಿ ತಿರಸ್ಕಾರ; ರವೀಂದ್ರನಾಥ ಟ್ಯಾಗೋರ್‌ಗೆ ಅಪಚಾರ!

ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯ ಸ್ಥಾನಮಾನವನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದಾರೆ. ಪ್ರಭುತ್ವ ಚುನಾವಣಾ ಪ್ರಕ್ರಿಯೆಯಲ್ಲಿ ಮೂಗು ತೂರಿಸಬಾರದು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ನಮ್ಮ ಸಂವಿಧಾನ ರೂಪಿಸಿದೆ. ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ ಎಂದರು.

ಆದ್ದರಿಂದ ನಾವು ಸಂವಿಧಾನದ ಮತ್ತು ಪ್ತಜಾಪ್ರಭುತ್ವ ಕಾಪಾಡಲು ಕಾಂಗ್ರೆಸ್ ಪಕ್ಷದಿಂದ ಕೋಟಿಗೂ ಅಧಿಕ ಮಂದಿಯ ಸಹಿ ಸಂಗ್ರಹ ಮಾಡಲಾಗಿದೆ. ಇದನ್ನು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೂ ನೀಡಲಾಗುವುದು ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೂ ಸಚಿವರೂ ಆದ ಸತೀಶ್ ಜಾರಕಿಹೊಳಿ, ಪಕ್ಷದ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ಸಲೀಂ ಅಹಮದ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಸೇರಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...