ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

Date:

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು ಸಾಬೀತಾದರೆ, ಕೆಲಸದಿಂದಲೇ ವಜಾ ಮಾಡಲಾಗುತ್ತದೆ. ಚಾಲನೆ ವೇಳೆ ಫೋನ್‌ನಲ್ಲಿ ಮಾತನಾಡಿದರೆ, ಕೆಲಸದಿಂದ ಅಮಾನತು ಮಾಡಲಾಗುತ್ತದೆ. ಈ ಹೊಸ ನಿಯಮ ಇಂದಿನಿಂದಲೇ ಜಾರಿಯಾಗಲಿದೆ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಸಲ ಅಪಘಾತವೆಸಗಿದರೆ 6 ತಿಂಗಳು ಅಮಾನತು ಮಾಡುತ್ತೇವೆ. ಅಮಾನತು ಅವಧಿ ಮುಗಿದ ಮೇಲೆ ತರಬೇತಿ ನೀಡಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುತ್ತೇವೆ. ಮೊದಲ ಸಲ ಅಪಘಾತವೆಸಗಿದ ಚಾಲಕರಿಗೆ ಮೂರು ಇಂಕ್ರಿಮೆಂಟ್ ಕಡಿತಗೊಳಿಸಲಾಗುತ್ತದೆ. ಎರಡನೇ ಸಲ ಅಪಘಾತವೆಸಗಿದರೆ ಬಿಎಂಟಿಸಿ ಸಂಸ್ಥೆಯಿಂದಲೇ ವಜಾ ಮಾಡಲಾಗುತ್ತದೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ; ಜನರ ಪ್ರಶ್ನೆಗಳಿಗೆ ಸರ್ಕಾರದ ಉತ್ತರ ಏನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲೆಕ್ಟ್ರಿಕ್ ಬಸ್ ಚಾಲಕರು ಚಾಲನೆ ವೇಳೆ ಫೋನ್​ನಲ್ಲಿ ಮಾತಾಡಿದರೆ, ಬಸ್ ಚಾಲಕನಿಗೆ 5 ಸಾವಿರ ರೂಪಾಯಿ ದಂಡ, 15 ದಿನಗಳ ಕಾಲ ಅಮಾನತು ಮಾಡಲಾಗುತ್ತದೆ. ಸೋಮವಾರದಿಂದ ಬಿಎಂಟಿಸಿ ಚಾಲಕರಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಜೊತೆಗೆ ಯೋಗ ತರಬೇತಿಯನ್ನೂ ನೀಡಲಾಗುತ್ತದೆ.

ಬೆಂಗಳೂರು ಮಹಾನಗರವು ಅಧಿಕ ಸಂಚಾರ ದಟ್ಟಣೆಯಿಂದ ಕೂಡಿದ್ದು, ಲಕ್ಷಾಂತರ ಜನರು ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದು, ಸದರಿ ಪ್ರಯಾಣಿಕರ ಸುರಕ್ಷತೆಯ ಜೊತೆಗೆ ಸಹ ಸವಾರರು, ಸಾರ್ವಜನಿಕರ ಸುರಕ್ಷತೆಯು ಸಂಸ್ಥೆಯ ಆದ್ಯ ಕರ್ತವ್ಯವಾಗಿರುತ್ತದೆ. ಬೆಂಗಳೂರು ಮಹಾನಗರದಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದ್ದು, ರಸ್ತೆಗಳಲ್ಲಿ ನೀರು ನಿಲ್ಲುವುದು, ರಸ್ತೆ ಗುಂಡಿಗಳು ದುರಸ್ಥಿ ಹಾಗೂ ಇನ್ನಿತರ ಕಾರಣಗಳಿಂದ ಸಂಸ್ಥೆಯ ವಾಹನಗಳಿಂದ, ಸಂಭವಿಸುವ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಸದರಿ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರ, ಪಾದಚಾರಿ ಹಾಗೂ ಬಸ್ಸಿಗೆ ಹತ್ತುವ-ಇಳಿಯುವ ಪ್ರಯಾಣಿಕರು ಭಾಗಿಯಾಗಿರುವುದು ಕಂಡುಬಂದಿರುತ್ತದೆ. ಆದುದರಿಂದ, ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಿಭಾಗೀಯ ಸಂಚಾರ ಅಧಿಕಾರಿಗಳು, ಘಟಕ ವ್ಯವಸ್ಥಾಪಕರು ಘಟಕಗಳಲ್ಲಿ ದ್ವಾರ ಸಭೆಯ ಮೂಲಕ ಪ್ರತಿ ದಿನ ಬೆಳಿಗ್ಗೆ, ಮಧ್ಯಾಹ್ನ, ಸಾಯಂಕಾಲ ಚಾಲನಾ ಸಿಬ್ಬಂದಿಗಳಿಗೆ ಸುರಕ್ಷಿತ ಚಾಲನೆಗೆ ಸಂಬಂಧಿಸಿದಂತೆ, ಈ ಕೆಳಕಂಡ ಅಂಶಗಳ ಕುರಿತು ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು.

ಚಾಲಕರಿಗೆ ನೀಡಲಾಗಿರುವ ಮಾರ್ಗಸೂಚಿಗಳು:

ವಾಹನಗಳ ನಡುವೆ ಸುರಕ್ಷಿತ ಅಂತರ ಕಾಯ್ದುಕೊಳ್ಳಿ

ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು.

ಸಂಚಾರ ನಿಯಮಗಳ ಉಲ್ಲಂಘನೆಯಿಂದ ಉಂಟಾಗುವ ಅನಾನುಕೂಲಗಳ ಬಗ್ಗೆ ಗಮನವಿರಲಿ.

ವಾಹನದ ಬ್ರೇಕ್, ಹೆಡ್‌ಲೈಟ್, ವೈಪರ್‌ಗಳು ಸುಸ್ಥಿತಿಯಲ್ಲಿರುವಂತೆ ಕ್ರಮವಹಿಸಬೇಕು.

ರಸ್ತೆಯಲ್ಲಿರುವ ರಸ್ತೆ ಉಬ್ಬುಗಳನ್ನು ಹಾಗೂ ರಸ್ತೆ ಗುಂಡಿಗಳನ್ನು ಗಮನಿಸಿ ಸುರಕ್ಷಿತವಾಗಿ ಚಾಲನೆ ಮಾಡಬೇಕು.

ಇಳಿಜಾರು, ರಸ್ತೆ ತಿರುವುಗಳಲ್ಲಿ ಎಚ್ಚರಿಕೆಯಿಂದ ಬ್ರೇಕ್, ಇಂಡಿಕೇಟರ್ ಹಾಗೂ ಪಾರ್ಕಿಂಗ್ ಲೈಟ್‌ಗಳ ಉಪಯೋಗ ಮಾಡಬೇಕು.

ರಾತ್ರಿ ವೇಳೆಯಲ್ಲಿ ಸೂಕ್ತ ಎಚ್ಚರಿಕೆ ಸಂಜ್ಞೆಗಳಿಲ್ಲದೆ ನಿಂತ ವಾಹನಗಳ ಬಗ್ಗೆ ಎಚ್ಚರಿಕೆ ವಹಿಸಬೇಕು.

ಕರ್ತವ್ಯನಿರತ ಸಮಯದಲ್ಲಿ ಚಾಲನಾ ಸಿಬ್ಬಂದಿಗಳು ಮೊಬೈಲ್ ಬಳಸಬಾರದು .

ಬಸ್ ನಿಲ್ದಾಣಗಳಲ್ಲಿ ಬಾಗಿಲು ತೆರೆದು ಚಲಿಸುತ್ತಿರುವ ಬಸ್‌ನ್ನು ಪ್ರಯಾಣಿಕರು ಇಳಿಯಲು/ಹತ್ತಲು ಪ್ರಯತ್ನಿಸಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಹಿಂದಿನ ಚಕ್ರಕ್ಕೆ ಸಿಲುಕಿ ಅಪಘಾತವಾಗಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದೆ.

ನಿಗದಿತ ಬಸ್ ನಿಲ್ದಾಣಗಳಲ್ಲಿ ಬಸ್‌ನ್ನು ನಿಲ್ಲಿಸಿ, ಪ್ರಯಾಣಿಕರನ್ನು ಇಳಿಸಿ ಬಸ್​ ಹತ್ತಿಸಿಕೊಂಡು ಬಾಗಿಲು ಮುಚ್ಚಿದ ನಂತರವೇ ವಾಹನವನ್ನು ಚಾಲನೆ ಮಾಡಬೇಕು.

ವಾಹನವನ್ನು ರಸ್ತೆಯ ಮಧ್ಯದಲ್ಲಿ ಟ್ರಾಫಿಕ್ ಸಿಗ್ನಲ್​ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಹತ್ತಿಸಿಕೊಳ್ಳುವುದನ್ನು ನಿಷೇಧಿಸಿದ್ದು, ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು.

ಶಾಲೆ, ಆಸ್ಪತ್ರೆ, ತಿರುವು, ಏರು ರಸ್ತೆ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಎಚ್ಚರ ವಹಿಸಿ ಚಾಲನೆ ಮಾಡಬೇಕು.

ಬಸ್ಸನ್ನು ಎಡಕ್ಕೆ-ಬಲಕ್ಕೆ ತಿರುಗಿಸುವಾಗ ಅಥವಾ ನಿಲ್ಲಿಸುವಾಗ ಎರಡೂ ಕಡೆಯ ಸೈಡ್ ಮಿರರ್ ಅನ್ನು ಗಮನಿಸಿ ಎಚ್ಚರಿಕೆಯಿಂದ ವಾಹನವನ್ನು ಚಾಲನೆ ಮಾಡಬೇಕು.

ವಾಹನಗಳ ಎಡಭಾಗದಿಂದ ಮುನ್ನುಗ್ಗಬಾರದು.

ಬಲ ಭಾಗದಲ್ಲಿ ವೇಗವಾಗಿ ಚಲಿಸುವ ವಾಹನಗಳಿಗೆ ದಾರಿ ಬಿಡಬೇಕು.

ಪಥ ನಿಯಮ ಪಾಲಿಸಿ, ಏಕಮುಖ ಸಂಚಾರದ ರಸ್ತೆಯಲ್ಲಿ ಸುರಕ್ಷತೆಯಿಂದ ಚಾಲನೆ ಮಾಡಬೇಕು.

ಮಳೆ, ಗಾಳಿ ಸಮಯದಲ್ಲಿ ವಾಹನವನ್ನು ನಿಗದಿತ ವೇಗದಲ್ಲಿ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು.

ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಸಿಬ್ಬಂದಿಗಳು ಬಸ್ ನಿಂತ ನಂತರ, ಬಾಗಿಲು ತೆರೆದು ಹಾಗೂ ಹೊರಟ ನಂತರ ಬಾಗಿಲು ಮುಚ್ಚುವುದನ್ನು ಮೇಲ್ವಿಚಾರಣೆ ಮಾಡಬೇಕು.

ಬಸ್ ನಿಲ್ದಾಣದ ತಿರುವುಗಳಲ್ಲಿ ಸಂಚರಿಸುವ ಪಾದಚಾರಿ ಪ್ರಯಾಣಿಕರನ್ನು ಗಮನಿಸಿ ಸಂಚರಿಸದಂತೆ ಅರಿವು ಮೂಡಿಸುವುದು.

ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ಮೇಲಿನ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಚಾಲನಾ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...