ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

Date:

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಎಫ್‌ಐಟಿಯು) ನೈತಿಕ ಬೆಂಬಲ ನೀಡಲಿದೆ ಎಂದು ಸಂಘಟನೆಯ ಬೆಂಗಳೂರು ನಗರದ ಉಸ್ತುವಾರಿ ಅಬ್ದುಲ್ ರಹಿಮಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಸುಪ್ರಿಂ ಕೋರ್ಟಿನ ತೀರ್ಮಾನವನ್ನು ರಾಜ್ಯ ಸರ್ಕಾರ ಪಾಲಿಸಬೇಕಾದದ್ದು ನ್ಯಾಯವಾಗಿದೆ.‌ ಆದರೆ ರಾಜ್ಯದಲ್ಲಿ ಮಳೆಯ ಅಭಾವದಿಂದ ನೀರಿನ ಸಮಸ್ಯೆ ಬಹಳಷ್ಟು ತಲೆದೋರಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಸುಪ್ರಿಂ ಕೋರ್ಟಿನ ಆದೇಶದಂತೆ ನೀರು ಹರಿಸಿದರೆ ರಾಜ್ಯದಲ್ಲಿ ಇನ್ನಷ್ಟು ಬರಗಾಲ ಸಂಭವಿಸುವುದು ನಿಶ್ಚಿತ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಹಲವಾರು ಜಿಲ್ಲೆಗಳನ್ನು ಈಗಾಗಲೇ ತೀವ್ರ ಬರಗಾಲ ಪೀಡಿತ ಜಿಲ್ಲೆಗಳು ಎಂದು ಘೋಷಣೆ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಿದರೆ ಕರ್ನಾಟಕದ ಸ್ಥಿತಿ ‘ಗಾಯದ ಮೇಲೆ ಬರೆ’ ಎಂಬಂತೆ ಆಗಬಹುದು. ಆದ್ದರಿಂದ ಸುಪ್ರಿಂ ಕೋರ್ಟ್‌ಗೆ ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಇನ್ನಷ್ಟು ಮನವರಿಕೆ ಮಾಡಿಸುವ ಪ್ರಯತ್ನ ಮಾಡಬೇಕಾಗಿದೆ”‌ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಕರವೇ ಆಗ್ರಹ

“ಮೇಲ್ನೋಟಕ್ಕೆ ರಾಜ್ಯ ಸರಕಾರವು ಸರಿಯಾದ ರೀತಿಯಲ್ಲಿ, ಬೇಕಾದ ಕ್ರಮದಲ್ಲಿ ಸುಪ್ರಿಂ ಕೋರ್ಟಿಗೆ ಮನವರಿಕೆ ಮಾಡುವುದರಲ್ಲಿ ವಿಫಲವಾಗಿದೆ ಎಂದು ಕಾಣುತ್ತಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಬಂದ್ ಹಿಂಸಾತ್ಮಕ ರೀತಿಯಲ್ಲಿಯೊ, ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿಯೋ ನಡೆಯಬಾರದು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...