ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಮೃತ ಬಾಲಕನ​ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

Date:

ಇಂದು ಬೆಳಗ್ಗೆ ಬೆಂಗಳೂರಿನ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯ ಮನೆಯೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಲ್ಲಿ 8 ವರ್ಷದ ಬಾಲಕ ಸಾವನ್ನಪ್ಪಿದ್ದು, ಹಲವರಿಗೆ ಗಾಯಳಾಗಿವೆ. ಮೃತ ಮುಬಾರಕ್​ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಮತ್ತು ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಇಂದು ಅಹಿತಕರ ಘಟನೆ ನಡೆದಿದೆ. ಮೇಲ್ನೋಟಕ್ಕೆ ಗ್ಯಾಸ್​ ಸಿಲಿಂಡರ್ ಸ್ಫೋಟದಂತೆ ಕಂಡುಬಂದಿದೆ. ಕಸ್ತೂರಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮುಬಾರಕ್​ ಎಂಬ ಬಾಲಕ ಮೃತಪಟ್ಟಿದ್ದಾನೆ. 9 ಜನ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಸುಮಾರು 13 ಮನೆಗಳಿಗೆ ಹಾನಿಯಾಗಿದ್ದು, ನಾವೇ ದುರಸ್ತಿ ಮಾಡಿಸಿಕೊಡುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅವಾಂತರಕಾರಿ ಆಸಿಮ್ ಮುನೀರ್ ಮತ್ತು ಮೌನಿ ಮೋದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜಯ್ ಗಾಂಧಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ. ಮೂವರು ಗಾಯಾಳುಗಳ ಪೈಕಿ 60 ವರ್ಷದ ಸರಸಮ್ಮ ಸ್ಥಿತಿ ಗಂಭೀರವಾಗಿದೆ. ಪ್ರಮೀಳಾ(40) ಹಾಗೂ ರಾಜೇಶ್​(38) ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಮಾತನಾಡಿ, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಒಂದು ಮಗು ಮೃತಪಟ್ಟಿದೆ, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಸ್ಫೋಟದ ತೀವ್ರತೆಗೆ 6 ರಿಂದ 7 ಮನೆಗಳಿಗೆ ಹಾನಿಯಾಗಿದೆ. 5 ಆಸ್ಪತ್ರೆಗಳಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಸ್ಫೋಟ ಯಾವ ರೀತಿಯಾಗಿದೆ ಅಂತಾ ತಕ್ಷಣಕ್ಕೆ ಹೇಳಲು ಸಾಧ್ಯವಿಲ್ಲ. ಮನೆಯಿಂದ ಹಾನಿ ಆಗಿರುವ ಬಗ್ಗೆ ತನಿಖೆ ನಡೆಸುತ್ತೇವೆ. ಸ್ಫೋಟವಾದಾಗ ತಾಯಿ ಮತ್ತು ಮಗು ಮಾತ್ರ ಇದ್ದರು. ಅವಶೇಷಗಳನ್ನು ಸ್ವಚ್ಛ ಮಾಡಿದ ಬಳಿಕ ಸತ್ಯಾಂಶ ತಿಳಿಯಲಿದೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...