‘ಈ ದಿನ.ಕಾಮ್’ ಫಲಶೃತಿ: ಎಚ್ಚೆತ್ತ ಬಿಬಿಎಂಪಿ; ಅಪಾಯದ ಸ್ಥಿತಿಯಲ್ಲಿದ್ದ ಟ್ರಾಫಿಕ್ ಬೋರ್ಡ್‌ ತೆರವು

Date:

ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲೊಂದಾಗಿರುವ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ಪ್ರವೇಶ ದ್ವಾರದಲ್ಲೇ ಇರುವ ಟ್ರಾಫಿಕ್ ಬೋರ್ಡೊಂದು ಒಂದು ಕಡೆಗೆ ವಾಲಿ ನೇತಾಡುತ್ತಿತ್ತು. ಈ ಬಗ್ಗೆ ಈ ದಿನ.ಕಾಮ್‌ ವರದಿ ಪ್ರಕಟಿಸಿ, ಬೆಂಗಳೂರು ಟ್ರಾಫಿಕ್ ಪೊಲೀಸರು ಹಾಗೂ ಬಿಬಿಎಂಪಿಯವರ ಗಮನಕ್ಕೆ ತಂದಿತ್ತು.

ಈ ವರದಿಯ ಬಳಿಕ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು, ಬೀಳುವ ಹಂತದಲ್ಲಿದ್ದ ಹಾಗೂ ಅಪಾಯದ ಸ್ಥಿತಿಯಲ್ಲಿದ್ದ ಟ್ರಾಫಿಕ್ ಬೋರ್ಡ್‌ ಅನ್ನು ಕೊನೆಗೂ ತೆರವುಗೊಳಿಸಿದ್ದಾರೆ. ಆ ಮೂಲಕ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆರವುಗೊಳಿಸಿದ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಮಲ್ಲೇಶ್ವರಂ ಟ್ರಾಫಿಕ್ ಪೊಲೀಸರು, ‘ಸದರಿ ದೂರಿನನ್ವಯ ಬೀಳುವ ಹಂತದಲ್ಲಿದ್ದ ಮಾರ್ಗ ಸೂಚಿ ಬೋರ್ಡ್ ಅನ್ನು ಸೆಕ್ಟರ್ ಕೋಬ್ರಾ ಸಿಬ್ಬಂದಿಯವರಾದ ಮಲ್ಲಪ್ಪರವರು ಬಿಬಿಎಂಪಿ ಸಿಬ್ಬಂದಿಗಳ ಸಹಾಯದೊಂದಿಗೆ ತೆರವುಗೊಳಿಸಿದ್ದು, ಸಾರ್ವಜನಿಕರಿಗೆ ಆಗಬಹುದಾದ ತೊಂದರೆಯನ್ನು ತಪ್ಪಿಸಿರುತ್ತಾರೆ’ ಎಂದು ತಿಳಿಸಿದ್ದಾರೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಳೆದ ಭಾನುವಾರ(ನ.19)ದಂದು ಬೆಳಗ್ಗೆ ವಿದ್ಯುತ್ ತಂತಿ ತುಳಿದು ತಾಯಿ-ಮಗಳು ಮೃತಪಟ್ಟ ಪ್ರಕರಣ ಇನ್ನೂ ಹಸಿರಾಗಿರುವಾಗಲೇ, ಬೀಳುವ ಹಂತದಲ್ಲಿದ್ದ ಮಾರ್ಗ ಸೂಚಿ ಬೋರ್ಡಿನ ಫೋಟೋ ತೆಗೆದು ಈ ದಿನ.ಕಾಮ್‌ನ ಪ್ರತಿನಿಧಿಯೋರ್ವರು ಟ್ವೀಟ್ ಮೂಲಕ ಬೆಂಗಳೂರು ಪೊಲೀಸರ ಗಮನಕ್ಕೆ ತಂದಿದ್ದರು. ಕೂಡಲೇ ಎಚ್ಚೆತ್ತ ಟ್ರಾಫಿಕ್ ಪೊಲೀಸರು, ಬಿಬಿಎಂಪಿ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಅಲ್ಲದೇ, ಈ ಬಗ್ಗೆ ಸಂಪೂರ್ಣ ಮಾಹಿತಿಯುಳ್ಳ ‘ಬೆಂಗಳೂರು | ಜನರ ಬಲಿಗೆ ಕಾಯುತ್ತಿದೆಯೇ ಟ್ರಾಫಿಕ್ ಬೋರ್ಡ್?’ ಎಂಬ ವರದಿಯನ್ನು ಈ ದಿನ.ಕಾಮ್ ಇಂದು(ನ.21) ಪ್ರಕಟಿಸಿತ್ತು.

ಇದನ್ನು ಓದಿದ್ದೀರಾ? ಬೆಂಗಳೂರು | ಜನರ ಬಲಿಗೆ ಕಾಯುತ್ತಿದೆಯೇ ಟ್ರಾಫಿಕ್ ಬೋರ್ಡ್?

‘ಇದು ಹಳೆಯ ಬೋರ್ಡ್ ಆಗಿರುವುದರಿಂದ ಈ ರೀತಿ ವಾಲಿತ್ತು. ಆದುದರಿಂದ ಅದನ್ನು ಅಲ್ಲೇ ಸರಿಪಡಿಸುವ ಬದಲು ಅಲ್ಲಿಂದ ಬಿಬಿಎಂಪಿಯವರು ತೆರವುಗೊಳಿಸಿದ್ದಾರೆ. ಹೊಸ ಬೋರ್ಡ್ ಶೀಘ್ರದಲ್ಲೇ ಹಾಕಲಿದ್ದಾರೆ’ ಎಂದು ಮಲ್ಲೇಶ್ವರಂ ಟ್ರಾಫಿಕ್ ಪೊಲೀಸ್ ಠಾಣೆಯನ್ನು ಈ ದಿನ.ಕಾಮ್ ಸಂಪರ್ಕಿಸಿದಾಗ ಮಾಹಿತಿ ನೀಡಿದ್ದಾರೆ.

ಇದೇ ರೀತಿಯ ಸಮಸ್ಯೆಗಳು ಸಾರ್ವಜನಿಕರಿಗೆ ಕಂಡು ಬಂದಲ್ಲಿ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳ ಗಮನ ಸೆಳೆಯುವಂತೆ ಈ ದಿನ.ಕಾಮ್ ಮನವಿ ಮಾಡುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...