ಡಿಜೆ ಹಳ್ಳಿ- ಕೆಜಿ ಹಳ್ಳಿ ಪ್ರಕರಣ | ಗೃಹ ಸಚಿವರಿಗೆ ಪತ್ರದ ಹಿಂದೆ ಕಿಂಗ್ ಪಿನ್ ರಕ್ಷಿಸುವ ಹುನ್ನಾರವಿದೆ: ಅಖಂಡ ಆರೋಪ

Date:

  • ಶಾಸಕ ತನ್ವೀರ್‌ ಸೇಠ್‌ಗೂ ಮತ್ತು ಪುಲಕೇಶಿ ನಗರಕ್ಕೂ ಏನು ಸಂಬಂಧ?
  • ‘ನ್ಯಾಯ ಕೋರಿ ಸರ್ಕಾರ, ನ್ಯಾಯಾಲಯಕ್ಕೆ ಮತ್ತೆ ಮನವಿ ಸಲ್ಲಿಸುವೆ’

ಶಾಸಕ ತನ್ವೀರ್‌ ಸೇಠ್‌ ಅವರಿಗೂ ಮತ್ತು ಪುಲಕೇಶಿ ನಗರಕ್ಕೂ ಏನು ಸಂಬಂಧ? ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರ ಬಿಡುಗಡೆ ಕೋರಿ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಇದರ ಹಿಂದೆ ಪ್ರಕರಣದ ಕಿಂಗ್‌ ಪಿನ್‌ ಅನ್ನು ರಕ್ಷಿಸುವ ಹುನ್ನಾರ ಇದೆ ಎಂದು ಪುಲಕೇಶಿ ನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಆರೋಪಿಸಿದರು.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “2020 ಆಗಸ್ಟ್‌ 20ರಲ್ಲಿ ನನ್ನ ಮನೆಗೆ ಬೆಂಕಿ ಹಾಕಲಾಯಿತು. ನಂತರ ದುಷ್ಕರ್ಮಿಗಳು ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್‌ ಠಾಣೆಗೆ ಬೆಂಕಿ ಹಾಕಿದರು. ತನಿಖೆ ನಡೆಸಿದ ಪೊಲೀಸರು ಮತ್ತು ಎನ್‌ಐಎ ಕೆಲವರನ್ನು ಬಂಧಿಸಿ, ಅಮಾಯಕರನ್ನು ಈಗಾಗಲೇ ಬಿಡುಗಡೆ ಮಾಡಿದ್ದಾರೆ. ಅಮಾಯಕರನ್ನು ಬಿಡುಗಡೆ ಮಾಡಿ ಎಂದು ನಾನು ಈ ಹಿಂದೆಯೂ ಹೇಳಿರುವೆ. ಆದರೆ, ಕೆಲವರನ್ನು ರಕ್ಷಿಸಲು ಅಮಾಯಕರ ಬಿಡುಗಡೆ ಎಂಬ ಅಸ್ತ್ರ ಉಪಯೋಗಿಸಲಾಗುತ್ತಿದೆ” ಎಂದರು.

“ಈಗಾಗಲೇ ಈ ಪ್ರಕರಣ ನ್ಯಾಯಾಲಯ ತನಿಖೆಯಲ್ಲಿದೆ. ನನ್ನ ವಕೀಲರ ಜೊತೆ ಚರ್ಚೆ ಮಾಡಿ ಸರ್ಕಾರ ಮತ್ತು ನ್ಯಾಯಾಲಯಕ್ಕೆ ನಾನು ಕೂಡ ಮತ್ತೆ ಮನವಿ ಮಾಡುವೆ. ಆರೋಪಿಗಳಿಗೆ ಶಿಕ್ಷೆಯಾಗಬೇಕು. ನನ್ನ ಸೋಲಿಸಲು ಬಂದ ಕಾಂಗ್ರೆಸ್‌ನ ಹಿರಿಯ ನಾಯಕರು ಈ ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂತ್ರಾಲಯದಲ್ಲಿ ರಾಮನ ವಿಗ್ರಹ; ಆಂಧ್ರದಲ್ಲಿ ಬಿಜೆಪಿಯ ಪ್ರತಿಮಾ ರಾಜಕಾರಣ

“ಈ ತನ್ವೀರ್‌ ಸೇಠ್‌ ಮೈಸೂರಿನವರು. ಪುಲಕೇಶಿ ನಗರಕ್ಕೆ ಹೇಗೆ ಸಂಬಂಧ ಪಡುತ್ತಾರೆ. 2018ರಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮತ ಪಡೆದು ಗೆದ್ದಿದ್ದೆ. ಆದರೆ, ಈ ಚುನಾವಣೆಯಲ್ಲಿ ನನಗೆ ಉದ್ದೇಶಪೂರ್ವಕವಾಗಿ ಟಿಕೆಟ್‌ ತಪ್ಪಿಸಲಾಯಿತು. ಕೊನೆಗೆ ತಂತ್ರ ರೂಪಿಸಿ ನನ್ನ ಸೋಲಿಸಿದರು. ಈಗ ಅವರೆಲ್ಲರೂ ಕಾಂಗ್ರೆಸ್‌ನ ಹಿರಿಯ ನಾಯಕರ ಜೊತೆ ಸುತ್ತಾಡುತ್ತಾರೆ” ಎಂದು ಆರೋಪಿಸಿದರು.

“ಮೂಲ ಆರೋಪಿಯನ್ನು ಬಿಡುಗಡೆ ಮಾಡಲು ಪಿತೂರಿ ನಡೆಸಿರುವ ಹುನ್ನಾರ ನನಗೆ ಕಾಣುತ್ತಿದೆ. ಹೀಗಾಗಿ ಮಾಧ್ಯಮಗಳ ಮುಂದೆ ಬಂದು ನ್ಯಾಯ ಕೇಳುತ್ತಿರುವೆ. ನಾನೂ ಒಬ್ಬ ದಲಿತ. ನನಗೆ ಅನ್ಯಾಯವಾಗಿದೆ, ನ್ಯಾಯ ಕೊಡಿ ಎಂದು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಮಾಡಿಕೊಳ್ಳುವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...