ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ: BBMP ಬದಲು ಐದು ನಗರ ಪಾಲಿಕೆಗಳ ರಚನೆ

Date:

ಬೆಂಗಳೂರು ನಗರದ ನಾಗರಿಕರಿಗೆ ಸಮರ್ಥ ಮತ್ತು ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅನ್ನು ರಚಿಸಲಾಗಿದ್ದು, ಇದರಡಿ ಐದು ನಗರ ಪಾಲಿಕೆಗಳು ಕಾರ್ಯನಿರ್ವಹಿಸಲಿವೆ. ಇಂದು ಜಿಬಿಎ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇತಿಹಾಸದ ಪುಟಗಳಲ್ಲಿ ಸೇರ್ಪಡೆಗೊಂಡಿದೆ.

ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಬೆಂಗಳೂರು ಉಸ್ತುವಾರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಈ ಬಗ್ಗೆ ಮಾಹಿತಿ ನೀಡಿದರು.

ರಾಜ್ಯ ಸರ್ಕಾರದ ಅಧಿಸೂಚನೆಯಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ಮಹಾನಗರ ಪಾಲಿಕೆಗಳನ್ನು ವಿಂಗಡಿಸಲಾಗಿದೆ. ಪ್ರತಿಯೊಂದು ಪಾಲಿಕೆಗೂ ಅಂದಾಜು 100 ವಾರ್ಡ್‌ಗಳು ರಚನೆಯಾಗಲಿದ್ದು, ಒಟ್ಟು 500 ಹೊಸ ನಾಯಕರು ಉದಯಿಸಲಿದ್ದಾರೆ. ಇದರಲ್ಲಿ ಶೇ. 50 ಮಹಿಳೆಯರ ಮೀಸಲಾತಿ ಇದೆ. ವಿಧಾನಸಭಾ ಕ್ಷೇತ್ರದ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ವಾರ್ಡ್‌ ವಿಂಗಡಣೆ ಮಾಡಲಾಗುವುದು. ನವೆಂಬರ್ 1, 2025ರಂದು ವಾರ್ಡ್‌ ಪುನರ್‌ವಿಂಗಡಣೆಯ ಅಂತಿಮ ಅಧಿಸೂಚನೆ ಹೊರಡಿಸುತ್ತೇವೆ ಮತ್ತು ನವೆಂಬರ್ 30ರಂದು ಮೀಸಲಾತಿಯ ಅಂತಿಮ ಅಧಿಸೂಚನೆ ಹೊರಬೀಳಲಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಬಿಎಯ ಮುಖ್ಯ ಆಯುಕ್ತರಾಗಿ ಮಹೇಶ್ವರ್‌ ರಾವ್‌ ಅವರನ್ನು ನೇಮಕ ಮಾಡಲಾಗಿದ್ದು, ಐದು ನಗರ ಪಾಲಿಕೆಯ ಆಯುಕ್ತರು ಅವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಎಲ್ಲ ವಲಯಗಳಿಗೂ ಆಯಾ ವಲಯದಲ್ಲಿರುವ ಅಧಿಕಾರಿಗಳನ್ನು ನೇಮಿಸಲಾಗಿದೆ. 27 ವಿಭಾಗಗಳನ್ನು 50 ವಿಭಾಗಗಳಾಗಿ ಮತ್ತು 75 ಉಪ ವಿಭಾಗಗಳನ್ನು 150 ಉಪ ವಿಭಾಗಗಳಾಗಿ ಪರಿವರ್ತಿಸಲಾಗಿದೆ. ನಾಳೆಯಿಂದ ಸಂಗ್ರಹವಾಗುವ ತೆರಿಗೆಯು ಸಂಬಂಧಪಟ್ಟ ನಗರ ಪಾಲಿಕೆಗೆ ಸೇರಲಿದ್ದು, ಸರ್ಕಾರದ ಹಣ ಜಿಬಿಎಗೆ ಮತ್ತು ಜಿಬಿಎಯ ಹಣ ಸರ್ಕಾರಕ್ಕೆ ಅಗತ್ಯಕ್ಕೆ ತಗಲಲಿದೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಿಕ್ಕು ತಪ್ಪಿಸುವ ದೃಶ್ಯಮಾಧ್ಯಮಗಳು ಮತ್ತು ಧರ್ಮಯಾತ್ರೆಗಳು

ಐದು ಪಾಲಿಕೆಗಳಿಗೆ ನೂತನ ಆಯುಕ್ತರ ನೇಮಕವೂ ಆಗಿದ್ದು, ಬೆಂಗಳೂರು ಕೇಂದ್ರ ನಗರ ಪಾಲಿಕೆಗೆ ರಾಜೇಂದ್ರ ಚೋಳನ್, ಪೂರ್ವ ನಗರ ಪಾಲಿಕೆಗೆ ರಮೇಶ್ ಜಿ.ಎಸ್ (ಅಪರ ಆಯುಕ್ತೆ ಸ್ನೇಹಲ್ ಸುಧಾಕರ್), ಉತ್ತರ ನಗರ ಪಾಲಿಕೆಗೆ ಪೊಮ್ಮಳ ಸುನಿಲ್ ಕುಮಾರ್, ದಕ್ಷಿಣ ನಗರ ಪಾಲಿಕೆಗೆ ರಮೇಶ್ ಕೆ.ಎನ್ (ಅಪರ ಆಯುಕ್ತ ಪಾಂಡುರಾಹುಲ್ ತುಕರಾಮ್) ಮತ್ತು ಪಶ್ಚಿಮ ನಗರ ಪಾಲಿಕೆಗೆ ರಾಜೇಂದ್ರ ಕೆ.ವಿ ಅವರನ್ನು ನೇಮಿಸಲಾಗಿದೆ. ಯಾವುದೇ ರಾಜಕಾರಣಿಗಳ ಹೆಸರನ್ನು ಪಾಲಿಕೆಗಳಿಗೆ ಇರಿಸಿಲ್ಲ ಎಂದು ಸ್ಪಷ್ಟಪಡಿಸಿದ ಡಿಸಿಎಂ, ಐದು ಮೇಯರ್‌ಗಳು ಇರುತ್ತಾರೆ ಮತ್ತು ಪ್ರತಿಯೊಬ್ಬರಿಗೂ ಎರಡೂವರೆ ವರ್ಷಗಳ ಅವಧಿ ನೀಡಲಾಗುತ್ತದೆ ಎಂದರು.

ಚುನಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು, ಕ್ಷೇತ್ರ ಮರುವಿಂಗಡಣಾ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗ ಮುಗಿಸಿದ ನಂತರ ಚುನಾವಣೆ ನಡೆಯಲಿದ್ದು, ನವೆಂಬರ್ ಬಳಿಕ ಇದನ್ನು ಪರಿಗಣಿಸಲಾಗುವುದು ಎಂದು ಹೇಳಿದರು. ಜುಲೈ 25ರಂದು 55 ಜನರು ತಕರಾರು ಸಲ್ಲಿಸಿದ್ದರು ಮತ್ತು 5 ಮಹಾನಗರ ಪಾಲಿಕೆ ಕಡತಗಳನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. 120 ದಿನಗಳ ಕಾಲ ಪ್ರಾಧಿಕಾರ ರಚಿಸಿ ಆದೇಶಿಸಲಾಗಿದ್ದು, 75 ಜನರನ್ನು ಸದಸ್ಯರನ್ನಾಗಿ ನೇಮಿಸಲಾಗುತ್ತದೆ. ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ನವೆಂಬರ್ 30, 2025ರ ನಂತರ ಅರ್ಜಿ ಸಲ್ಲಿಸಿ ಎಂದು ಸಮಯ ನೀಡಿದೆ ಎಂದು ತಿಳಿಸಿದರು.

ಇಂದು ಇತಿಹಾಸದ ಪುಟಕ್ಕೆ ಬೆಂಗಳೂರು ಸೇರಿದ್ದು, ಸಹಕಾರದ ನಿಟ್ಟಿನಲ್ಲಿ ಐದು ಪಾಲಿಕೆಗಳನ್ನು ರಚಿಸಲಾಗಿದೆ. ನವೆಂಬರ್ 1ರಂದು ಎಲ್ಲ ಪಾಲಿಕೆಗಳಿಗೆ ಹೊಸ ಕಚೇರಿಗಳ ಭೂಮಿ ಪೂಜೆ ನಡೆಯಲಿದ್ದು, ಐದು ಪಾಲಿಕೆಗಳೂ ಒಂದೇ ರೀತಿಯ ವಿನ್ಯಾಸ ಹೊಂದಿರಬೇಕು. ಜಿಬಿಎ ಮತ್ತು ಪಾಲಿಕೆಗಳಿಗೆ ಲೋಗೋ ರಚಿಸಲು ಐದು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದ್ದು, ಜಿಬಿಎ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು. 74ನೇ ತಿದ್ದುಪಡಿಯನ್ನು ಮುಟ್ಟದೆ, ಪಾಲಿಕೆಗಳಿಗೆ ಮೀಸಲಾತಿ ಮತ್ತು ಚುನಾವಣಾ ಅಧಿಕಾರ ನೀಡಲಾಗಿದೆ. ಇದರಿಂದ ನಗರದಲ್ಲಿ ಉತ್ತಮ ಸೇವೆ ಮತ್ತು ಆಡಳಿತ ಲಭ್ಯವಾಗಲಿದೆ ಎಂದು ಡಿ ಕೆ ಶಿವಕುಮಾರ್ ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...