ಗೋವಾದ ನೈಟ್‌ಕ್ಲಬ್ ‘ಬರ್ಚ್ ಬೈ ರೋಮಿಯೊ ಲೇನ್’ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರ ನಿವಾಸಿ ಇಶಾಕ್ ಎಂಬವರು ಮೃತಪಟ್ಟಿದ್ದಾರೆ.
ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದ ಇಶಾಖ್, ರಾತ್ರಿ ಕ್ಲಬ್‌ಗೆ ಹೋಗಿದ್ದರು. ಈ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಿಲುಕಿ ಸಾವಿಗೀಡಾಗಿದ್ದು, ಉಳಿದ ನಾಲ್ವರು ಪಾರಾಗಿದ್ದಾರೆ. ಇಶಾಕ್ ಮೃತದೇಹವನ್ನು ಅವರ ತಂದೆ ಎಂ.ಡಿ.ಹುಸೇನ್ ಗುರುತಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಯಲ್ಲಿ ಪ್ರವಾಸಿಗರು ಸೇರಿ 25 ಮಂದಿ ಸಜೀವದಹನವಾಗಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಎಲ್ಲರು ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ ಪ್ರವಾಸಿಗರು ಮತ್ತು ಕ್ಲಬ್‌ನ ಸಿಬ್ಬಂದಿ ಸೇರಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕ್ಲಬ್‌ನ ಮೂವರು ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಿ.6 – ಭಾರತದ ಜಾತ್ಯತೀತ ಇತಿಹಾಸದ ಕರಾಳ ದಿನ





