ಮಕ್ಕಳ ಭಿಕ್ಷಾಟನೆ ತಡೆಗೆ ನೋಡಲ್‌ ಅಧಿಕಾರಿ ನೇಮಿಸುವಂತೆ ಹೈಕೋರ್ಟ್ ಸೂಚನೆ

Date:

ಮಕ್ಕಳ ಭಿಕ್ಷಾಟನೆ ತಡೆದು ಅವರ ಪುನರ್ವಸತಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ʼಲೆಟ್ಸ್​​ ಕಿಟ್ ಫೌಂಢಷನ್ʼ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾ.ಸಿ ಎಂ ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಾದ ಆಲಿಸಿದ ನ್ಯಾಯಪೀಠ, ಜಿಬಿಎ ಸೇರಿದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯಿತಿ​ಗಳಲ್ಲಿ ಸಂಗ್ರಹಿಸಲಾಗಿರುವ ಒಟ್ಟು ಭಿಕ್ಷುಕರ ಸೆಸ್, ಅದರಲ್ಲಿ ಕೇಂದ್ರ ಪರಿಹಾರ ಸಮಿತಿಗೆ ಪಾವತಿಸಲಾದ ಮೊತ್ತ, ಬಾಕಿ ಉಳಿದ ಮೊತ್ತದ ಬಗ್ಗೆ ವಸ್ತುಸ್ಥಿತಿ ವರದಿ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಜಿಬಿಎಗೆ ನಿರ್ದೇಶನ ನೀಡಿದೆ. ಅದೇ ರೀತಿ ಮಕ್ಕಳ ಭಿಕ್ಷಾಟನೆ ನಿರ್ಮೂಲನೆ ಮತ್ತು ಅವರ ಪುನರ್ವಸತಿಗೆ 6 ವಾರಗಳಲ್ಲಿ ಸಮಗ್ರ ಕ್ರಿಯಾ ಯೋಜನೆ ರೂಪಿಸಬೇಕು. ಕ್ರಿಯಾ ಯೋಜನೆ ರೂಪಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಏಪ್ರಿಲ್ 1ಕ್ಕೆ ಮುಂದೂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆ ವೇಳೆ ಭಿಕ್ಷುಕರ ಸೆಸ್ ಸಂಗ್ರಹಣೆ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಲೆಕ್ಕಾಧಿಕಾರಿ ಸಲ್ಲಿಸಿರುವ ಪ್ರಮಾಣಪತ್ರವನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದರಂತೆ ಜಿಬಿಎ ವ್ಯಾಪ್ತಿಯಲ್ಲಿ 2024-25ರಲ್ಲಿ 86.26 ಕೋಟಿ ರೂಪಾಯಿ ಭಿಕ್ಷುಕರ ಸೆಸ್ ಸಂಗ್ರಹ ಮಾಡಲಾಗಿದ್ದು, ಅದರಲ್ಲಿ 10.32 ಕೋಟಿ. ರೂ.ಗಳನ್ನು ಕೇಂದ್ರ ಪರಿಹಾರ ಸಮಿತಿ(ಸಿಆರ್‌ಸಿ)ಗೆ ಪಾವತಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 73.12 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಈಗ ಜಿಬಿಎ ವ್ಯಾಪ್ತಿಯಲ್ಲಿ 5 ಹೊಸ ಪಾಲಿಕೆಗಳಾಗಿದ್ದು, ಕಳೆದ ವರ್ಷದ ಬಾಕಿ 75 ಕೋಟಿ ರೂ. ಹಾಗೂ ಈ ವರ್ಷದ ಭಿಕ್ಷುಕರ ಸೆಸ್ ಪಾಲನ್ನು 2026ರ ಮಾರ್ಚ್ 31ರೊಳಗೆ ಕೇಂದ್ರ ಪರಿಹಾರ ಸಮಿತಿಗೆ ಪಾವತಿಸುವಂತೆ ಆಯಾ ಪಾಲಿಕೆಗೆಗಳ ಆಯುಕ್ತರಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಲಾಗಿದೆ.‌

ಈ ಸುದ್ದಿ ಓದಿದ್ದೀರಾ? ‘ಗೋ ಬ್ಯಾಕ್ ಗವರ್ನರ್ ಗೋ ಬ್ಯಾಕ್’ – ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಪ್ರತಿಭಟನೆ

ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲರು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಂದ ಸಂಗ್ರಹಿಸಲಾದ 40.88 ಕೋಟಿ ರೂ. ಭಿಕ್ಷುಕರ ಸೆಸ್ ಪೌರಾಡಳಿತ ನಿರ್ದೇಶನಾಲಯದಿಂದ ಬರುವುದು ಬಾಕಿ ಇದೆ. ಅದೇ ರೀತಿ ಪಂಚಾಯಿತಿ​ಗಳಲ್ಲಿ ಸಂಗ್ರಹಿಸಲಾದ ಸೆಸ್ ಬಗ್ಗೆ ಗ್ರಾಮೀಣಾಭಿವೃದ್ದಿ ಇಲಾಖೆಯಿಂದ ಮಾಹಿತಿ ಬರಬೇಕಿದೆ. ಪ್ರಾಧಿಕಾರ ನಡೆಸಿದ ಸಮೀಕ್ಷೆಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 720 ಮಕ್ಕಳನ್ನು ಗುರುತಿಸಲಾಗಿದೆ. ಪುನರ್ವಸತಿಗೆ ಕೆಲವು ಶಿಫಾರಸುಗಳನ್ನು ಸೂಚಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತರಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...