ಒಂದೇ ಮಳೆಗೆ ಹೊಂಡವಾದ ನಲ್ಲೂರಳ್ಳಿ ಮೆಟ್ರೋ ನಿಲ್ದಾಣ

Date:

  • ಅವೈಜ್ಞಾನಿಕ ಕಾಮಗಾರಿಯಲ್ಲ ಎಂದ ಅಧಿಕಾರಿಗಳು
  • ಮಳೆಯ ನೀರು ಹೊರಗೆ ಚೆಲ್ಲಲು ಸಿಬ್ಬಂದಿ ಹರಸಾಹಸ

ಕಾಮಗಾರಿ ಪೂರ್ಣವಾಗದಿದ್ದರೂ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ತರಾತುರಿಯಲ್ಲಿ ಉದ್ಘಾಟನೆಯಾದ ವೈಟ್ ಫೀಲ್ಡ್ ಹಾಗೂ ಕೆ ಆರ್ ಪುರಂ ಮಾರ್ಗದ ನಲ್ಲೂರಳ್ಳಿ ಮೆಟ್ರೋ ನಿಲ್ದಾಣದಲ್ಲಿ ಅವೈಜ್ಞಾನಿಕ ಕಾಮಗಾರಿ ಬೆಳಕಿಗೆ ಬಂದಿದೆ.

ಮಾರ್ಚ್‌ 25ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಯಾಗಿದ್ದ ನೇರಳೆ ಮಾರ್ಗದ ನಲ್ಲೂರಳ್ಳಿ ಮೆಟ್ರೋ ನಿಲ್ದಾಣದಲ್ಲಿ ಏ.3ರ ರಾತ್ರಿ ಸುರಿದ ಮಳೆಗೆ, ಟಿಕೆಟ್‌ ನೀಡುವ ಸ್ಥಳ ಮತ್ತು ರೈಲಿಗಾಗಿ ಪ್ರಯಾಣಿಕರು ಕಾಯುವ ಸ್ಥಳದಲ್ಲಿ ನೀರು ತುಂಬಿಕೊಂಡಿತ್ತು. ಇದರಿಂದ ಪ್ರಯಾಣಿಕರು ಭಾರೀ ಸಮಸ್ಯೆ ಅನುಭವಿಸಬೇಕಾಯಿತು.

ನಲ್ಲೂರಳ್ಳಿ ಮೆಟ್ರೋ ನಿಲ್ದಾಣದ ಅವ್ಯವಸ್ಥೆಯ ಫೋಟೊ ಮತ್ತು ವಿಡಿಯೋಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ನೆಟ್ಟಿಗರು, ಮೆಟ್ರೋ ನಿಲ್ದಾಣದ ಅವೈಜ್ಞಾನಿಕ ಕಾಮಗಾರಿಯ ಬಗ್ಗೆ ವ್ಯಾಪಕ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಗೀಳಿಗಾಗಿ ಇನ್ನೂ ಕಾಮಗಾರಿಯೇ ಪೂರ್ಣವಾಗದ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ನೀತಿ ಸಂಹಿತೆ ಜಾರಿಯಾದರೂ ರಾರಾಜಿಸುತ್ತಿವೆ ಫೋಟೊ-ಬ್ಯಾನರ್ ಗಳು: ದಂಡದ ಎಚ್ಚರಿಕೆ

ಕೆಲವು ದಿನಗಳ ಹಿಂದೆ ಕೆ ಆರ್‌ ಪುರಂ ಮೆಟ್ರೋ ಕಾಮಗಾರಿಯಿಂದ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಇದೀಗ ಮಳೆ ನೀರು ತುಂಬಿಕೊಂಡಿದೆ. ಅದಲ್ಲದೆ ಮೆಟ್ರೋ ರೈಲಿಗಾಗಿ ಕಾಯುವ ನಿಲ್ದಾಣದಲ್ಲಿ ನಿಲ್ಲಲು ಸಹ ವ್ಯವಸ್ಥಿತವಾದ ಜಾಗ ಇಲ್ಲ. ಅಲ್ಲಿಯೂ ಮಳೆ ಧಾರಕಾರವಾಗಿ ಸುರಿಯುತ್ತಿದೆ. ಇದು 40% ಸರ್ಕಾರದ ಭ್ರಷ್ಟಚಾರ ಎಂದು ನೆಟ್ಟಿಗರು ಲೇವಡಿ ಮಾಡಿದ್ದಾರೆ.

ಕಾಮಗಾರಿ ಅವೈಜ್ಞಾನಿಕವಾಗಿಲ್ಲ: ಸ್ಪಷ್ಟನೆ

ಈ ಕುರಿತು ಬಿಎಂಆರ್‌ಸಿಎಲ್‌ ನ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀವಾಸ್‌, ಈದಿನ.ಕಾಮ್‌ ಜೊತೆಗೆ ಮಾತನಾಡಿ, “ಇದು ಅವೈಜ್ಞಾನಿಕ ಕಾಮಗಾರಿಯಲ್ಲ. ಮಳೆ ಜೋರಾಗಿ ಬಂದಿರುವುದೇ ಇದಕ್ಕೆ ಕಾರಣ. ಮಳೆಯ ನೀರು ಹೊರಗಿನಿಂದ ಮೆಟ್ರೋ ನಿಲ್ದಾಣದ ಒಳಕ್ಕೆ ಹರಿದು ಬಂದಿದೆ. ಮಳೆ ನೀರನ್ನು ಹೊರಗೆ ಹಾಕಿ, ಈಗ ಅಲ್ಲಿ ಸ್ವಚ್ಛ ಮಾಡಲಾಗಿದೆ” ಎಂದು ಸ್ಪಷ್ಟನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...