ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ರಿಗೆ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿ

Date:

ಕನ್ನಡ ಶಕ್ತಿ ಕೇಂದ್ರ ಕೊಡಮಾಡುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‍ದಾಸ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ 25 ಸಾವಿರ ರೂ. ನಗದು, ಕಂಚಿನ ಪದಕ, ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ.

ಜೂನ್ 10ರಂದು ಸಂಜೆ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ನಾಗಮೋಹನ್‍ದಾಸ್ ಅವರಿಗೆ ನ್ಯಾಯಮೂರ್ತಿ ಡಾ.ಶಿವರಾಜ್ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಬೆಂಗಳೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ ಅಧ್ಯಕ್ಷತೆ ವಹಿಸಲಿರುವ ಸಮಾರಂಭದಲ್ಲಿ ಕಸಾಪ ನಿಕಟ ಪೂರ್ವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

37 ಸಾವಿರ ಕೋಟಿ ಗುತ್ತಿಗೆ ಹಣ ಬಾಕಿ; ತಕ್ಷಣ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ 37,370...

ಕರ್ನಾಟಕ ಶಾಲಾ ಶಿಕ್ಷಣದ ಸ್ಥಿತಿಗತಿ ಕುರಿತ ಒಂದು ದಿನದ ವಿಚಾರ ಸಂಕಿರಣ: ಒಮ್ಮತದ ನಿರ್ಣಯ

ಒಂದು ಸಮಗ್ರ ನೀತಿಯು ಅಸ್ತಿತ್ವದಲ್ಲಿಲ್ಲದಿದ್ದಾಗ ನೀತಿ, ಕಾರ್ಯಕ್ರಮ, ತೀರ್ಮಾನಗಳು ಸಂವಿಧಾನ ಹಾಗೂ...

ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಿ : ಮಠಾಧಿಪತಿಗಳ ಒಕ್ಕೂಟದಿಂದ ಸಿಎಂಗೆ ಮನವಿ

ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬೀದರ್ ಜಿಲ್ಲೆಯ ಬಸವಕಲ್ಯಾಣ ನೆಲದಲ್ಲಿ ಸಾರ್ವಜನಿಕ...