ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿ ಪರಿಷ್ಕರಣೆ, ಶೀಘ್ರವೇ ಅನುಷ್ಠಾನ: ಸಚಿವ ಶಿವಾನಂದ ಎಸ್

Date:

ಕೈಮಗ್ಗ ನೇಕಾರರು ಹಾಗೂ ಜವಳಿ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಮಹಿಳಾ ಕಾರ್ಮಿಕರಿಗೆ 2ರಿಂದ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸೇರಿದಂತೆ ಇನ್ನಿತರ ಅಂಶಗಳನ್ನು ಒಳಗೊಂಡ ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿಯನ್ನು ಪರಿಷ್ಕರಿಸಲಾಗಿದ್ದು, ಶೀಘ್ರದಲ್ಲಿ ಇದನ್ನು ಘೋಷಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಜವಳಿ ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದ್ದಾೆರ.

ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯ ಎಂ. ನಾಗರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಹಿಂದಿನ ಮೂರು ಜವಳಿ ನೀತಿಗಳ ಸಾಧಕ-ಬಾಧಕಗಳ ಅಧ್ಯಯನ ಮಾಡಿ, ಎಲ್ಲರ ಸಲಹೆ ಸೂಚನೆಗಳನ್ನು ಪರಿಗಣಿಸಿ, 2025ರಿಂದ 2030ರವರೆಗೆ ಹೊಸ ಜವಳಿ ನೀತಿ ರೂಪಿಸಲಾಗಿದೆ. ಶೀಘ್ರದಲ್ಲಿ ಇದನ್ನು ಘೋಷಿಸಿ, ಕಾರ್ಯಾರೂಪಕ್ಕೆ ತರಲಾಗುವುದು” ಎಂದು ಹೇಳಿದರು.

“ಜವಳಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ಹಾಗೂ ಕೈಮಗ್ಗ ನೇಕಾರರಿಗೆ 2ರಿಂದ 3 ಸಾವಿರ ಸಹಾಯಧನ ನೀಡಲಾಗುವುದು. ನೇಕಾರ ಸನ್ಮಾನ ಯೋಜನೆಯಡಿ ಕೊಡಲಾಗುತ್ತಿದ್ದ 2,500 ರೂ.ಗಳನ್ನು 5 ಸಾವಿರ ರೂ.ಗೆ ಏರಿಸಲಾಗಿದೆ. ಪರಿಷ್ಕೃತ ನೀತಿಯಲ್ಲಿ ಇನ್ನೂ ಹೆಚ್ಚಳ ಮಾಡಲಾಗುವುದು” ಎಂದು ಸಚಿವರು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಜವಳಿ ಕೈಗಾರಿಕೆಗಳಿಗೆ ಹೆಚ್ಚಿನ ಮಟ್ಟದಲ್ಲಿ ಸಬ್ಸಿಡಿ ನೀಡಲಾಗುತ್ತಿದೆ. 1ರಿದ 10 ಹೆಚ್.ಪಿ ವಿದ್ಯುತ್ ಸಂಪರ್ಕ ಪಡೆದ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಸಲಾಗುತ್ತಿದೆ. 10 ಹೆಚ್.ಪಿಯಿಂದ 20 ಹೆಚ್​​.ಪಿ ವಿದ್ಯುತ್ ಮಗ್ಗಗಳಿಗೆ ಪ್ರತಿ ಯೂನಿಟ್‌ಗೆ ₹1.25 ಶುಲ್ಕ ವಿಧಿಸಿದರೆ, ಬೇರೆ ರಾಜ್ಯಗಳಲ್ಲಿ ಪ್ರತಿ ಯೂನಿಟ್​​​ಗೆ ₹5 ಇದೆ. 2019ರಿಂದ 2024ರವರೆಗೆ ₹954 ಕೋಟಿ ಸಬ್ಸಿಡಿ ನೀಡಲಾಗಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬ್ಯಾಂಕ್‌ ನೌಕರರ ಮುಷ್ಕರ

“2024-25ನೇ ಸಾಲಿನ ಬಜೆಟ್​​ನಲ್ಲಿ 2024ರಿಂದ 29ರ ಅವಧಿಯಲ್ಲಿ 10 ಸಾವಿರ ಕೋಟಿ ರೂ. ಬಂಡವಾಳ ಹೂಡಿ 2 ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಸುವುದಾಗಿ ತಿಳಿಸಲಾಗಿದೆ. ಇದಕ್ಕೆ ಪೂರಕವಾಗಿ ಹೊಸ ಜವಳಿ ನೀತಿಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ” ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...