ಭಗತ್ ಸಿಂಗ್ ಹೆಸರಿಡಲು ಆಗ್ರಹಿಸಿ ಸಾವರ್ಕರ್ ಫ್ಲೈ ಓವರ್‌ಗೆ ಮಸಿ ಬಳಿದ NSUI ಕಾರ್ಯಕರ್ತರು: ಮೂವರ ಬಂಧನ

Date:

ಬೆಂಗಳೂರು ನಗರದ ಹೊರವಲಯದ ಯಲಹಂಕದಲ್ಲಿರುವ ಫ್ಲೈ ಓವರ್‌ಗೆ ಇಟ್ಟಿರುವ ಸಾವರ್ಕರ್ ಹೆಸರನ್ನು ಬದಲಿಸಿ, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹೆಸರಿಡುವಂತೆ ಆಗ್ರಹಿಸಿ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿರುವ ಘಟನೆ ಮಂಗಳವಾರ ನಡೆದಿದೆ.

ಸಂಚಾರ ತಡೆ ನಡೆಸಿ ನಾಮಫಲಕಕ್ಕೆ ಮಸಿ ಬಳಿದಿದ್ದು, ಕೃತ್ಯ ಎಸಗಿದ ಆರೋಪದ ಮೇಲೆ ಮೂವರು ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೇಲ್ಸೇತುವೆಯ ನಾಮಫಲಕದ ಬಳಿ ಹತ್ತಿ, ಸಾವರ್ಕರ್ ಹೆಸರು ಹಾಗೂ ಫೋಟೋಗೆ ಮಸಿ ಬಳಿದಿರುವ ಎನ್‌ಎಸ್‌ಯುಐ ಕಾರ್ಯಕರ್ತರು, ಬಳಿಕ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದಾರೆ. ಆ ಬಳಿಕ ಇಂಕಿಲಾಭ್ ಝಿಂದಾಬಾದ್ ಘೋಷಣೆ ಕೂಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

Fly over

ಸಾವರ್ಕರ್ ಹೆಸರಿನ ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಬಿಜೆಪಿ ಹಾಗೂ ಸಂಘಪರಿವಾರದ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವರ್ಕರ್ ಮೇಲ್ಸೇತುವೆಗೆ ಮಸಿ ಬಳಿದಿರುವುದನ್ನು ಖಂಡಿಸಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ವಿಶ್ವನಾಥ್, “ಕಾಂಗ್ರೆಸ್ ನಾಯಕರ ಫೋಟೋಗಳು ಯಲಹಂಕದಲ್ಲಿವೆ. ಆದರೆ, ನಾವು ಯಾವುದೇ ಪೋಟೋಗಳಿಗೂ ಮಸಿ ಬಳಿದಿಲ್ಲ. ಸಾವರ್ಕರ್ ಇತಿಹಾಸವನ್ನು ಕಾಂಗ್ರೆಸ್‌ನವರು ಮೊದಲು ತಿಳಿದುಕೊಳ್ಳಲಿ” ಎಂದು ಕಿಡಿಕಾರಿದರು.

“ಈಗ ಮೂವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಉಳಿದವರನ್ನು ಶೀಘ್ರವಾಗಿ ಬಂಧನ ಮಾಡಬೇಕು. ಇಲ್ಲದೇ ಹೋದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಸ್ವಯಂ ಪ್ರೇರಿತವಾಗಿ ಯಲಹಂಕ ಬಂದ್ ಕೂಡ ಮಾಡಲಾಗುತ್ತದೆ. ಶೀಘ್ರ ನಾಮಫಲಕ ಸರಿಪಡಿಸುವ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.

ಯಲಹಂಕ ನ್ಯೂ ಟೌನ್ ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...