ಬೆಂಗಳೂರಿನ 837 ಕೆರೆಗಳಲ್ಲಿ 730 ಕೆರೆಗಳು ಒತ್ತುವರಿಯಾಗಿವೆ

Date:

ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಒಟ್ಟು 837 ಕೆರೆಗಳಲ್ಲಿ 730 ಕರೆಗಳ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ. ಒಟ್ಟು 4,554 ಎಕರೆ ಕೆರೆ ಭೂಮಿ ಅಕ್ರಮವಾಗಿ ಒತ್ತುವರಿಯಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕರೆ ಒತ್ತುವರಿ ಮತ್ತು ಒಂದು ಕರೆಯಿಂದ ಮತ್ತೊಂದು ಕೆರೆಗೆ ನೀರು ಹರಿಯಲು ಹಳ್ಳಗಳು ಮುಕ್ತವಾಗಿರುವ ಬಗ್ಗೆ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ಬೆಂಗಳೂರು ಉತ್ತರ, ದಕ್ಷಿಣ, ಪೂರ್ವ, ಆನೇಕಲ್ ಹಾಗೂ ಯಲಹಂಕ ತಾಲೂಕುಗಳ ತಹಶೀಲ್ದಾರ್‌ ಮತ್ತು ಭೂಮಾಪಕರು ತಮ್ಮ ತಾಲೂಕುಗಳ ವ್ಯಾಪ್ತಿಯಲ್ಲಿರುವ ಕೆರೆಗಳು ಒತ್ತುವರಿಯಾಗಿರುವ ಬಗ್ಗೆ ಮಾಹಿತಿ ಒದಗಿಸಿದ್ದಾರೆ ಎಂದು ಬಿಡಿಎ ಹೇಳಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ 187 ಕೆರೆಗಳ ಪೈಕಿ 102 ಕೆರೆಗಳ ಭೂಮಿಯನ್ನೂ ಒತ್ತವರಿ ಮಾಡಿಕೊಳ್ಳಲಾಗಿದೆ ಎಂದು ವರದಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಉತ್ತರ ಮತ್ತು ಯಲಹಂಕ ತಾಲೂಕುಗಳಲ್ಲಿ ಹೆಚ್ಚು ಒತ್ತುವರಿಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ 123 ಕೆರೆಗಳ ಒಟ್ಟು 1,183 ಎಕರೆ ಒತ್ತುವರಿಯಾಗಿದೆ. ಯಲಹಂಕ ತಾಲೂಕಿನಲ್ಲಿನ 105 ಕೆರೆಗಳ 1,147 ಎಕರೆ ಭೂಮಿ ಒತ್ತುವರಿಯಾಗಿದೆ.

ಬೆಂಗಳೂರು ದಕ್ಷಿಣ ತಾಲೂಕಿನ 179 ಕೆರೆಗಳಲ್ಲಿ 825 ಎಕರೆ, ಆನೇಕಲ್ ತಾಲೂಕಿನ 223 ಕೆರೆಗಳಲ್ಲಿ 719 ಎಕರೆ, ಪೂರ್ವ ತಾಲೂಕಿನ 100 ಕೆರೆಗಳಲ್ಲಿ 667 ಎಕರೆ ಭೂಮಿ ಒತ್ತುವರಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ 700 ಕೆರೆಗಳಲ್ಲಿ 102 ಕೆರೆಗಳು ಪಾಲಿಕೆ ವ್ಯಾಪ್ತಿಗೆ ಒಳಪಟ್ಟಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...