ಬಿಪಿಎಲ್ ಕಾರ್ಡ್‌ ರದ್ದತಿ ಕ್ರಮ ಹಿಂಪಡೆಯುವಂತೆ ಬಡ, ಅಸಂಘಟಿತ, ಕಾರ್ಮಿಕ ಸಂಘಟನೆಗಳ ಒತ್ತಾಯ

Date:

ಕರ್ನಾಟಕ ಸರ್ಕಾರ ಬಿಪಿಎಲ್ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಿ ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲು ಕೈಗೊಂಡಿರುವ ಕ್ರಮವನ್ನು ತಕ್ಷಣವೇ ಹಿಂಪಡೆಯಬೇಕೆಂದು ನಗರದ ನೂರಕ್ಕೂ ಹೆಚ್ಚು ಸ್ಲಂ ಸಮುದಾಯ,ದುಡಿಯುವ, ಕಾರ್ಮಿಕ, ಅಸಂಘಟಿತ ಕಾರ್ಮಿಕರು ಒತ್ತಾಯಿಸಿದ್ದಾರೆ.

ಇಂದು ಬೆಂಗಳೂರಿನ ನೂರಕ್ಕೂ ಹೆಚ್ಚು ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು. ನಂತರ ಆಯುಕ್ತರಾದ ವಿ.ವಿ. ಜ್ಯೋತ್ಸ್ನಾ ಅವರನ್ನು ಭೇಟಿಯಾಗಿ ತಮಗಾಗುತ್ತಿರುವ ನೋವನ್ನು ವಿವರಿಸಿದರು.

ಇತ್ತೀಚೆಗೆ ನಗರದ ಅನೇಕ ನ್ಯಾಯಬೆಲೆ ಅಂಗಡಿಗಳ ಹೊರಗಡೆ ಪ್ರದರ್ಶಿಸಲಾಗಿರುವ ಪಡಿತರ ಪಟ್ಟಿ ಹಾಗೂ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಮಾರ್ಪಡಿಸುವ ಕುರಿತು ಅಂಗಡಿದಾರರಿಂದ ನೀಡಲಾಗುತ್ತಿರುವ ಮಾಹಿತಿಯಿಂದ ಬಡಜನರಲ್ಲಿ ಆತಂಕ ಉಂಟಾಗಿದೆ. ಮಾಸಿಕ ಆದಾಯವು ಹತ್ತು ಸಾವಿರ ರೂ.ಗಿಂತ ಹೆಚ್ಚು ಇರುವವರು ಸೇರಿದಂತೆ ಅನೇಕ ಕಾರಣಗಳಿಂದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಸಂಘಟನೆಯ ಸದಸ್ಯರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆಯ ಅನೇಕರು ತಮ್ಮ ವೈಯಕ್ತಿಕ ಉದಾಹರಣೆಗಳನ್ನು ಆಯುಕ್ತರ ಗಮನಕ್ಕೆ ತಂದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮುನಿಯಮ್ಮ ಅವರಿಗೆ ಇಂದಿಗೂ ಬಿಪಿಎಲ್ ಕಾರ್ಡ್ ಸಿಗದಿರುವುದು, ಶಿಫ್ಟ್‌ಗಳಲ್ಲಿ ಅಸ್ಥಿರ ಆದಾಯ ಹೊಂದಿರುವ ಕಾರ್ಮಿಕರ ಕಾರ್ಡ್‌ಗಳನ್ನು ಕೇವಲ ಬ್ಯಾಂಕ್‌ ದಾಖಲೆ ಅಥವಾ ಒಂದೇ ಬಾರಿ ಟ್ಯಾಕ್ಸ್ ರಿಟರ್ನ್ ಸಲ್ಲಿಸಿರುವ ಕಾರಣದಿಂದ ಎಪಿಎಲ್‌ಗೆ ಪರಿವರ್ತಿಸುವುದು, ವಯೋವೃದ್ಧರು ಬಯೋಮೆಟ್ರಿಕ್ ಸಮಸ್ಯೆಯಿಂದಾಗಿ ಪಡಿತರ ಪಡೆಯದಿದ್ದರೆ ಅವರಿಗೆ ಅನರ್ಹತೆಯನ್ನು ವಿಧಿಸುವುದು ಮುಂತಾದ ಅನೇಕ ಅನ್ಯಾಯಗಳ ಬಗ್ಗೆ ಜನತೆ ಕಳವಳ ವ್ಯಕ್ತಪಡಿಸಿದರು. ಹೌಸ್‌ಕೀಪಿಂಗ್‌ ಸೇರಿದಂತೆ ಅನಿಯಮಿತ ಕೆಲಸಗಾರರು ಕೆಲವು ತಿಂಗಳು ಪಡಿತರ ಪಡೆಯದಿದ್ದರೆ ಅವರ ಕಾರ್ಡ್‌ಗಳನ್ನು ರದ್ದುಪಡಿಸಿರುವ ಬಗ್ಗೆ ಅಹವಾಲುಗಳನ್ನು ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಿನೆಮಾ ಟಿಕೆಟ್ ದರಗಳಿಗೆ ಸರ್ಕಾರಿ ಕಡಿವಾಣದ ಸಂಗತಿಯೇನು?

ಪ್ರತಿಭಟನಾಕಾರರ ಮಾತುಗಳನ್ನು ಆಲಿಸಿದ ಆಯುಕ್ತರಾದ ವಿ.ವಿ. ಜ್ಯೋತ್ಸ್ನಾ, ಪ್ರಸ್ತುತ ನಡೆಯುತ್ತಿರುವುದು ಕೇವಲ ಪರಿಶೀಲನೆ ಪ್ರಕ್ರಿಯೆಯಾಗಿದ್ದು, ಅರ್ಹ ಬಿಪಿಎಲ್ ಕಾರ್ಡ್‌ಗಳನ್ನು ತಕ್ಷಣವೇ ರದ್ದುಪಡಿಸಲಾಗುವುದಿಲ್ಲವೆಂದು ಭರವಸೆ ನೀಡಿದರು. ಜೊತೆಗೆ, ಅನರ್ಹ ಪಟ್ಟಿಗೆ ಸೇರಿಸಿರುವ ಕುಟುಂಬಗಳು ಇಲಾಖೆಗೆ ದೂರು ಸಲ್ಲಿಸಬಹುದೆಂದು ತಿಳಿಸಿದರು. ಈ ಸಲಹೆಯಂತೆ 25ಕ್ಕೂ ಹೆಚ್ಚು ಮಂದಿ ತಕ್ಷಣವೇ ತಮ್ಮ ಅಹವಾಲುಗಳನ್ನು ಇಲಾಖೆಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಗಳು ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಮಂಡಿಸಿದವು. ಜನರಿಗೆ ಪೂರ್ವ ಮಾಹಿತಿ ನೀಡದೆ, ಸೂಕ್ತ ಸಮಯಾವಕಾಶವಿಲ್ಲದೆ ಬಿಪಿಎಲ್ ಕಾರ್ಡ್‌ ರದ್ದತಿ ಆದೇಶ ಹೊರಡಿಸಿರುವ ಕ್ರಮವನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು; ಬಿಪಿಎಲ್ ಕಾರ್ಡ್‌ ಅನರ್ಹ ಪಟ್ಟಿಯ ಪರಿಶೀಲನೆ ದಿನಾಂಕವನ್ನು ತಕ್ಷಣವೇ ರದ್ದುಪಡಿಸಬೇಕು; ಸರ್ಕಾರ ನಿಗದಿಪಡಿಸಿರುವ ಆದಾಯ ಮಿತಿ ಹಾಗೂ ಇತರೆ ಮಾನದಂಡಗಳ ಬಗ್ಗೆ ಸಾರ್ವಜನಿಕರು ಮತ್ತು ಸಾಮಾಜಿಕ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು; ಸ್ಥಳೀಯ ಮಟ್ಟದಲ್ಲಿ ಅರ್ಹ ಬಿಪಿಎಲ್ ಕಾರ್ಡ್‌ಗಳನ್ನು ಪರಿಶೀಲಿಸಬೇಕು; ಹಾಗೂ 2017ರಿಂದ ಬಿಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿ ನಿರಾಕರಿಸಲ್ಪಟ್ಟ ಬಡಕುಟುಂಬಗಳ ಅರ್ಜಿಗಳನ್ನು ಪುನರ್ ಪರಿಶೀಲಿಸಿ ನ್ಯಾಯಯುತ ಆದಾಯ ಮಿತಿಯನ್ನು ನಿಗದಿಪಡಿಸಿ ಅವರಿಗೂ ಸಹ ಬಿಪಿಎಲ್ ಕಾರ್ಡ್ ನೀಡಬೇಕು ಎಂದು ಒತ್ತಾಯಿಸಿದರು.

ಬಡಜನರ ಬದುಕು, ಆಹಾರ ಭದ್ರತೆ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಸಂಘಟನೆಗಳ ಸದಸ್ಯರು ಸರ್ಕಾರಕ್ಕೆ ಮನವರಿಕೆ ಮಾಡಿದವು. ಹಾಗೆಯೇ ಬಿಪಿಎಲ್ ಕಾರ್ಡ್‌ಗಳನ್ನು ಅನ್ಯಾಯವಾಗಿ ರದ್ದುಪಡಿಸುವ ಕ್ರಮ ಮುಂದುವರಿದರೆ ವ್ಯಾಪಕ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...