ಸಾಫ್ಟ್‌ವೇರ್ ಸಂಬಂಧಿತ ತಾಂತ್ರಿಕ ಸಮಸ್ಯೆ: ಬೆಂಗಳೂರಿನ 50 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

Date:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ತಡರಾತ್ರಿಯಿಂದ ಇಲ್ಲಿಯವರೆಗೆ ಸುಮಾರು 70ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ಅಡಚಣೆಯಾಗಿದೆ. ಒಟ್ಟು 22 ವಿಮಾನಗಳ ಹಾರಾಟ ಈವರೆಗೆ ರದ್ದಾಗಿದ್ದು, 50ಕ್ಕೂ ಅಧಿಕ ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದೆ.

ವಿಮಾನಗಳ ಸಾಪ್ಟವೇರ್ ಸಂಬಂಧಿತ ತಾಂತ್ರಿಕ ಕಾರಣಗಳಿಂದಾಗಿ ಕೊಲ್ಕತ್ತಾ, ದೆಹಲಿ, ಮುಂಬೈ, ಡೆಹ್ರಾಡೂನ್, ವಾರಣಾಸಿ, ಅಹಮದಾಬಾದ್, ಪುಣೆ, ಚೆನೈ, ಭೂಪಾಲ್ ಸೇರಿದಂತೆ ಹಲವು ಪ್ರದೇಶಗಳಿಗೆ ತೆರಳಬೇಕಿದ್ದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ಸರಿಯಾದ ಸಮಯಕ್ಕೆ ವಿಮಾನಗಳು ಹಾರಾಟ ನಡೆಸದ ಕಾರಣ ಏರ್​​ಪೋರ್ಟ್​ನಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ನಿಗದಿತ ಸಮಯಕ್ಕೆ ಬಂದರೂ ಸರಿಯಾದ ಸಮಯಕ್ಕೆ ನಾವು ಪ್ರಯಾಣಿಸಬೇಕಿದ್ದ ಸ್ಥಳಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಮಾತ್ರವಲ್ಲದೆ ನಾಳೆಯೂ ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವರ್ತಮಾನದ ತಲ್ಲಣಗಳಿಗೆ ನಾರಾಯಣ ಗುರು – ಗಾಂಧಿಯೇ ಉತ್ತರ

ಮೊನ್ನೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದ ವಿಪರೀತ ಚಳಿಯ ಪರಿಣಾಮ ಪ್ರತಿಕೂಲ ವಾತಾವರಣದಿಂದ ಬೆಂಗಳೂರು ವಿಮಾನ ನಿಲ್ದಾಣದಿಂದ ಸಂಚಾರ ನಡೆಸಬೇಕಿದ್ದ ಸುಮಾರು 81 ವಿಮಾನಗಳ ಹಾರಾಟ ವಿಳಂಬವಾಗಿತ್ತು.ಕೆಲ ವಿಮಾನಗಳು ಕಡಿಮೆ ಅವಧಿಯ ಮಟ್ಟಿಗೆ ವಿಳಂಬವಾದರೆ ಇನ್ನೂ ಕೆಲ ವಿಮಾನಗಳು ಗರಿಷ್ಠ 69 ನಿಮಿಷಗಳವರೆಗೂ ತಡವಾಗಿ ಹಾರಾಟ ಆರಂಭಿಸಿತ್ತು.

ನಾಗರಿಕ ವಿಮಾನಯಾನ ನಿರ್ದೇಶನಾಲಯದ(DGCA) ಮಾನದಂಡದ ಪ್ರಕಾರ ವಿಮಾನ ವಿಳಂಬಕ್ಕೆ 15 ನಿಮಿಷಗಳ ಮಿತಿಯಿದ್ದು, ಹಾರಾಟ ನಡೆಸಬೇಕಿದ್ದ 81 ವಿಮಾನಗಳ ಪೈಕಿ 33 ವಿಮಾನಗಳು ಮಾತ್ರ ಈ ಮಿತಿಯನ್ನು ದಾಟಿದ್ದವು. ದಟ್ಟ ಮಂಜಿನ ಕಾರಣಕ್ಕೆ ಮಂಗಳೂರು ಮತ್ತು ದೆಹಲಿಯಿಂದ ಬರುತ್ತಿದ್ದ ವಿಮಾನಗಳ ಸಂಚಾರ ಮಾರ್ಗ ಬದಲಾವಣೆ ಕೂಡ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...