ಬೆಂಗಳೂರು | ಜನರ ಬಲಿಗೆ ಕಾಯುತ್ತಿದೆಯೇ ಟ್ರಾಫಿಕ್ ಬೋರ್ಡ್?

Date:

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಳೆದ ಭಾನುವಾರ(ನ.19)ದಂದು ಬೆಳಗ್ಗೆ ವಿದ್ಯುತ್ ತಂತಿ ತುಳಿದು ತಾಯಿ-ಮಗಳು ಮೃತಪಟ್ಟ ಪ್ರಕರಣ ಇನ್ನೂ ಹಸಿರಾಗಿರುವಾಗಲೇ, ಬೆಂಗಳೂರಿನ ಜನನಿಬಿಡ ಮಲ್ಲೇಶ್ವರಂ ಜಂಕ್ಷನ್‌ನಲ್ಲಿರುವ ಟ್ರಾಫಿಕ್ ಬೋರ್ಡೊಂದು ಜನರ ಬಲಿ ಪಡೆಯಲು ಕಾಯುತ್ತಿದೆ.

ಬೆಸ್ಕಾಂ ಕಚೇರಿಯಿಂದ 100 ಮೀಟರ್ ದೂರದಲ್ಲಿರುವ ವೈಟ್‌ಫೀಲ್ಡ್ ಮುಖ್ಯರಸ್ತೆಯ ಹೋಪ್ ಫಾರ್ಮ್ ಜಂಕ್ಷನ್ ಬಳಿ ಭಾನುವಾರ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸೌಂದರ್ಯ (23) ಮತ್ತು ಅವರ ಒಂಬತ್ತು ತಿಂಗಳ ಮಗು ಸಜೀವ ದಹನವಾಗಿದ್ದರು. ಈ ಘಟನೆಗೆ ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವ್ಯಾಪಕ ಆಕ್ರೋಶ ಕೂಡ ವ್ಯಕ್ತವಾಗಿದೆ. ಇದು ಇನ್ನೂ ಹಸಿರಾಗಿರುವಾಗಲೇ ಬೆಂಗಳೂರಿನ ಮಲ್ಲೇಶ್ವರಂ ಜಂಕ್ಷನ್‌ನಲ್ಲಿರುವ ಟ್ರಾಫಿಕ್ ಬೋರ್ಡೊಂದು ವಾಲಿಕೊಂಡು ನೇತಾಡುತ್ತಿದೆ.

ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲೊಂದಾಗಿರುವ ಮಲ್ಲೇಶ್ವರಂನ ಕೆ ಸಿ ಜನರಲ್ ಆಸ್ಪತ್ರೆಯ ಪ್ರವೇಶದ್ವಾರದಲ್ಲೇ ಇರುವ ಟ್ರಾಫಿಕ್ ಬೋರ್ಡೊಂದು ಒಂದು ಕಡೆಗೆ ವಾಲಿ ನೇತಾಡುತ್ತಿದೆ. ಅದರ ಹತ್ತಿರದಲ್ಲೇ ಮಲ್ಲೇಶ್ವರಂ ಪೊಲೀಸ್ ಸ್ಟೇಷನ್ ಹಾಗೂ ಟ್ರಾಫಿಕ್ ಕಂಟ್ರೋಲ್ ಮಾಡುವ ಚೌಕಿಯೂ ಇದೆ. ಆದರೆ, ಅದು ಯಾರ ಗಮನಕ್ಕೂ ಬಂದಿಲ್ಲದಿರುವುದು ವಿಪರ್ಯಾಸವೇ ಸರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಈ ದಿನ.ಕಾಮ್‌ನ ಪ್ರತಿನಿಧಿಯೋರ್ವರು ಕಚೇರಿಗೆ ಆಗಮಿಸುವ ವೇಳೆ ಇದನ್ನು ಗಮನಿಸಿ ಫೋಟೋ, ವಿಡಿಯೋ ಮಾಡಿದ್ದಾರೆ. ಬಳಿಕ ಟ್ವೀಟ್ ಮಾಡುವ ಮೂಲಕ ಬೆಂಗಳೂರು ಟ್ರಾಫಿಕ್ ಪೊಲೀಸರ ಗಮನಕ್ಕೆ ತಂದಿದ್ದು, ‘ಜನರ ಬಲಿಗೆ ಕಾಯುತ್ತಿದೆಯಾ ಈ ಟ್ರಾಫಿಕ್ ಬೋರ್ಡ್? ಪೊಲೀಸ್ ಸ್ಟೇಷನ್, ಆಸ್ಪತ್ರೆ ಇದೆ, ಎದುರಲ್ಲೇ ಟ್ರಾಫಿಕ್ ಕಂಟ್ರೋಲ್ ಮಾಡೋ ಚೌಕಿಯೂ ಇದೆ? ಇದು ಯಾರ ಕಣ್ಣಿಗೂ ಬೀಳಲಿಲ್ಲವೇ? ದಯವಿಟ್ಟು ಅನಾಹುತ ಆಗುವ ಮುನ್ನ ಸರಿಪಡಿಸಿ’ ಎಂದು ವಿನಂತಿಸಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರು ಟ್ರಾಫಿಕ್ ಪೊಲೀಸರು, ಮಲ್ಲೇಶ್ವರಂ ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಿ, ಕೂಡಲೇ ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲು ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ದೂರವಾಣಿ ಮೂಲಕ ಈ ದಿನ.ಕಾಮ್‌, ಮಲ್ಲೇಶ್ವರಂ ಟ್ರಾಫಿಕ್ ಪೊಲೀಸರನ್ನು ಸಂಪರ್ಕಿಸಿದಾಗ, ಈ ಬೆಳವಣಿಗೆ ಬಗ್ಗೆ ನಮ್ಮ ಗಮನಕ್ಕೆ ಈಗಷ್ಟೇ ಬಂದಿದೆ. ಮಾಹಿತಿ ಅರಿತ ಕೂಡಲೇ ಬಿಬಿಎಂಪಿಯ ಇಂಜಿನಿಯರ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದೇವೆ. ಶೀಘ್ರವೇ ಸರಿಪಡಿಸಲು ಆಗಮಿಸಲಿದ್ದಾರೆ. ಸರಿಯಾದ ಕೂಡಲೇ ಮಾಹಿತಿ ನೀಡುತ್ತೇವೆ’ ಎಂದು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...