ವಿವಿಧ ಬೇಡಿಕೆ ಈಡೇರಿಕೆಗೆ ಸಾರಿಗೆ ನೌಕರರ ಮುಷ್ಕರ: ಜ.29ರಂದು ‘ಬೆಂಗಳೂರು ಚಲೋʼ

Date:

ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ನಡೆಯಲಿದ್ದು, ಕೆಎಸ್ಆರ್‌ಟಿಸಿ(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಜನವರಿ 29ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಸರ್ಕಾರದೊಂದಿಗೆ ಪದೇ ಪದೆ ಮಾತುಕತೆ ನಡೆಸಿದರೂ ಯಾವುದೇ ಫಲಿತಾಂಶ ಸಿಗದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿಯು ಈ ನಿರ್ಧಾರ ಪ್ರಕಟಿಸಿದೆ.

“ಈಗಾಗಲೇ ಬೆಂಗಳೂರು ಚಲೋ ಚಳವಳಿ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಜಂಟಿ ಕ್ರಿಯಾ ಸಮಿತಿ ಪತ್ರ ಬರೆದಿದೆ. ಕಳೆದ 38 ತಿಂಗಳಿನಿಂದ ವೇತನ ಹಿಂಬಾಕಿ ಬಂದಿಲ್ಲ. ಈ ಬಗ್ಗೆ ಹಲವು ಬಾರಿ ನಾವು ಮನವಿ ಮಾಡಿದರೂ ಅದಕ್ಕೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಹೋರಾಟದ ಹಾದಿ ಹಿಡಿಯುವುದು ಅನಿವಾರ್ಯವಾಗಿದೆ” ಎಂದು ಕ್ರಿಯಾಸಮಿತಿ ಅಧ್ಯಕ್ಷ ಅನಂತಸುಬ್ಬರಾವ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಸ್‌ಆರ್‌ಟಿಸಿ ಸಾರಿಗೆ ನೌಕರ ಸುರೇಶ್‌ ಎ ಕೆ ಅವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಸಾರಿಗೆ ನೌಕರರಿಗೆ ಕಳೆದ 38 ತಿಂಗಳಿನಿಂದ ಬಾಕಿ ವೇತನ ಬಂದಿಲ್ಲ. ಇದಲ್ಲದೆ, 2024ರ ಜನವರಿ 1ರಿಂದ ಬರಬೇಕಿದ್ದ ವೇತನ ಪರಿಷ್ಕರಣೆ ಇನ್ನೂ ಜಾರಿಗೆ ಬಂದಿಲ್ಲ. ರಾಜ್ಯಾದ್ಯಂತ ದೈನಂದಿನ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಖಚಿತಪಡಿಸಿಕೊಳ್ಳುವ ನೌಕರರಿಗೆ ವೇತನ ಪರಿಷ್ಕರಣೆ ವಿಳಂಬವಾಗುತ್ತಿರುವುದರಿಂದ ಆರ್ಥಿಕ ಒತ್ತಡ ಹೆಚ್ಚಾಗುತ್ತಿದೆ. ಕುಟುಂಬ ನಿರ್ವಣೆ ಮಾಡಲು ಸಾಧ್ಯವಾಗದೇ ಸಾಲದ ಸುಳಿಯಲ್ಲಿ ಸಿಲುಕುವಂತಾಗಿಎ. ಮಕ್ಕಳ ವಿದ್ಯಾಭ್ಯಾಸಕ್ಕೆ ಸರಿಯಾಗಿ ಶಾಲೆ ಕಾಲೇಜಿಗೆ ಶುಲ್ಕ ಪಾವತಿಸಲಾಗುತ್ತಿಲ್ಲ. ತುಂಬಾ ಹೀನಾಯ ಸ್ಥಿತಿಯಲ್ಲಿ ಬದುಕು ದೂಡುವಂತ ದುಂಸ್ಥಿತಿ ಎದುರಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜನವರಿ 29ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದು, ಸಾರಿಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕಾರ್ಮಿಕ ಸಂಹಿತೆಗಳು ಹಕ್ಕುಗಳ ಮೇಲಿನ ದಾಳಿ: ಎಐಯುಟಿಯುಸಿ ಎನ್.ಎಸ್. ವೀರೇಶ್

ಈ ಪ್ರತಿಭಟನೆ ಶಾಂತಿಯುತವಾಗಿರುತ್ತದೆಂದು ಒಕ್ಕೂಟಗಳು ತಿಳಿಸಿದ್ದು, ಸಮಿತಿ ಸದಸ್ಯರಾದ ಎಚ್ ವಿ ಅನಂತಸುಬ್ಬ ರಾವ್, ಬಿ ಜಯದೇವ ಅರಸು, ಎಚ್ ಡಿ ರೇವಪ್ಪ, ಜಗದೀಶ್ ಎಚ್ ಆರ್ ಮತ್ತು ರಾಜೇಂದ್ರ ಗೌಡ ಜಿ ಕೆ ಅವರು, ಸಾರಿಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...