ಮೋದಿ ರೋಡ್ ಶೋ | ನೀಟ್‌ ಬರೆಯುವವರಿಗೆ ಪರೀಕ್ಷಾ ಕೇಂದ್ರ ತಲುಪುವುದೇ ಅಗ್ನಿ ಪರೀಕ್ಷೆ

Date:

  • ಮೋದಿ ರೋಡ್ ಶೋ ಸಂಚಾರ ದಟ್ಟಣೆ; ಬೇಸತ್ತ ಬೆಂಗಳೂರಿಗರು
  • ರೋಡ್ ಶೋ ಯಾವ್ಯಾವ ಕ್ಷೇತ್ರಗಳಲ್ಲಿರಲಿದೆ ನಿಖರ ಮಾಹಿತಿ ಇಲ್ಲ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಭಾನುವಾರ ನಡೆಯಲಿದ್ದು, ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ ಶೋ ಇರುವ ಕಾರಣ ಪರೀಕ್ಷಾ ಕೇಂದ್ರ ತಲುಪುವುದು ಹೇಗೆ ಎಂಬ ಆತಂಕದಲ್ಲಿ ವಿದ್ಯಾರ್ಥಿಗಳು ಹೈರಾಣಾಗಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆ, ಪ್ರಧಾನಿ ಮೋದಿ ಅವರು ಭರ್ಜರಿ ರೋಡ್ ಶೋ ನಡೆಸುತ್ತಿದ್ದಾರೆ. ಈಗಾಗಲೇ ಬೆಂಗಳೂರಿನ ವಾಹನ ಸವಾರರು ಮೋದಿ ರೋಡ್ ಶೋನಿಂದ ಉಂಟಾಗುವ ಸಂಚಾರ ದಟ್ಟಣೆಗೆ ಪರದಾಡುತ್ತಿದ್ದು, ಈ ಮಧ್ಯೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವ ಆತಂಕದಲ್ಲಿದ್ದಾರೆ.

ಪ್ರಚಾರದ ಭರಾಟೆ; ವಿದ್ಯಾರ್ಥಿಗಳ ಅಳಲು ಕೇಳೋರಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ವಿತೀಯ ಪಿಯುಸಿ ಬಳಿಕ, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಬರೆಯುವ 1.9 ಲಕ್ಷ ವಿದ್ಯಾರ್ಥಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರ – ಪಟ್ಟಣಗಳಲ್ಲಿ ಭಾನುವಾರ ಪರೀಕ್ಷೆ ಬರೆಯಲಿದ್ದಾರೆ. ಇದು ಅವರ ಜೀವನದ ಮಹತ್ವದ ಘಟ್ಟವಾಗಿದೆ.

ಈ ಮಧ್ಯೆ ವಿಶೇಷ ಭದ್ರತಾ ವ್ಯವಸ್ಥೆ ಇರುವ ರಾಜಕೀಯ ಪಕ್ಷಗಳ ರೋಡ್ ಶೋ, ಪ್ರಚಾರ ಸಭೆ ಹಾಗೂ ರ್‍ಯಾಲಿ ನಡೆಯಲಿವೆ. ವಿಶೇಷ ಭದ್ರತಾ ವ್ಯವಸ್ಥೆ ಕೈಗೊಳ್ಳಲು ನಾಯಕರು ಸಾಗುವ ಮಾರ್ಗಗಳನ್ನು ಸಾಮಾನ್ಯವಾಗಿ ಮೂರ್ನಾಲ್ಕು ಗಂಟೆ ಮೊದಲೇ ಬಂದ್ ಮಾಡಲಾಗುತ್ತದೆ. ಮೋದಿಯವರ ರೋಡ್‌ ಶೋ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರ ನಡುವೆ ಇರುತ್ತದೆ. ಪರೀಕ್ಷೆ ಎದುರಿಸುವ ಸವಾಲು, ಭೀತಿಯ ನಡುವೆ ಪರೀಕ್ಷಾ ಕೇಂದ್ರ ತಲುಪುವುದೇ ವಿದ್ಯಾರ್ಥಿಗಳಿಗೆ ಸಾಹಸವಾಗಿ ಪರಿಣಮಿಸಿದೆ.

ಈ ಬಗ್ಗೆ ಇಲ್ಲಿಯವರೆಗೂ ರಾಜಕೀಯ ಪಕ್ಷದ ನಾಯಕರು ಚಿಂತಿಸಿಲ್ಲ. ಚುನಾವಣಾ ಭರಾಟೆಯಲ್ಲಿ ತೊಡಗಿಕೊಂಡಿದ್ದಾರೆ. ಮೋದಿಯವರ ರೋಡ್ ಶೋ ಯಾವ್ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಗಲಿದೆ ಎಂಬ ನಿಖರ ಮಾಹಿತಿ ಸಹ ಪ್ರಧಾನಿ ಕಾರ್ಯಾಲಯ ಇನ್ನೂ ಬಿಡುಗಡೆ ಮಾಡಿಲ್ಲ.

ಈ ಸುದ್ದಿ ಓದಿದ್ದೀರಾ?: ಮೋದಿ ಬರುತ್ತಾರೆ ಬೀದಿ ನಾಯಿ ಹಿಡಿಯಿರಿ: ಬಿಬಿಎಂಪಿಗೆ ಪೊಲೀಸರ ಪತ್ರ

ಭಾನುವಾರ ನಡೆಯಲಿರುವ ನೀಟ್‌ ಪರೀಕ್ಷೆ ಮಧ್ಯಾಹ್ನ 2 ರಿಂದ 5.20 ರವರೆಗೆ ನಡೆಯಲಿದೆ. 11:00 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಹಾಜರಾಗಿರಬೇಕು. ಇಂತಹ ಸಮಯದಲ್ಲಿ ರಸ್ತೆ ಬಂದ್ ಆದರೆ, ದೂರದ ಊರುಗಳಿಂದ ಬೆಂಗಳೂರಿಗೆ ಬಂದು ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ತೊಂದರೆಗೆ ಸಿಲುಕುವಂತಾಗುತ್ತದೆ.

ಪರ್ಯಾಯ ಮಾರ್ಗ ಸೂಚಿಸಿದರೂ ತಪ್ಪದ ತಲೆ ನೋವು

ರಾಜಕೀಯ ನಾಯಕರ ರೋಡ್‌ ಶೋ ಎಂದರೆ ಪ್ರತಿ ಬಾರಿ ಪರ್ಯಾಯ ಮಾರ್ಗಗಳ ಸೂಚನೆ ಹೊರಡಿಸುವ ಪೊಲೀಸರು, ಬದಲಿ ಮಾರ್ಗಗಳ ಮಾಹಿತಿ ನೀಡಿದರೂ ಪರೀಕ್ಷೆ ಎದುರಿಸುವ ಬಗ್ಗೆ ಹಲವು ಸವಾಲು ತಲೆಯಲ್ಲಿರಿಸಿಕೊಂಡ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ತಲುಪುವುದಾದರು ಹೇಗೆ ಎಂಬ ಆತಂಕದಲ್ಲೇ ಇರುತ್ತಾರೆ ಎಂದು ನೀಟ್ ಎದುರಿಸುವ ವಿದ್ಯಾರ್ಥಿಗಳ ಪೋಷಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

“ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ತಲುಪಲು ತಮ್ಮ ಮನೆಗಳಿಂದ ಬಹಳ ದೂರ ಪ್ರಯಾಣಿಸಬೇಕಾಗುತ್ತದೆ ಎಂಬುದನ್ನು ಗಣನೆಗೆ ತೆಗೆದುಕೊಂಡು, ತೊಂದರೆಯಾಗದಂತೆ ಬದಲಿ ಮಾರ್ಗದ ಯೋಜನೆ ರೂಪಿಸುತ್ತಿದ್ದೇವೆ” ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಕೆ ಅಣ್ಣಾಮಲೈ ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಚಾರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹ ಬೆಂಗಳೂರಿನ ಮಹದೇವಪುರದಲ್ಲಿ ಪ್ರಚಾರ ನಡೆಸಲಿದ್ದಾರೆ. ಶಿವಾಜಿನಗರದಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ. ದೆಹಲಿ ನಾಯಕರ ರಾಜಧಾನಿ ಮತಬೇಟೆಗೆ ವಾಹನ ಸವಾರರು ಮತ್ತು ನೀಟ್ ಪರೀಕ್ಷಾರ್ಥಿಗಳಿಗೆ ತೊಂದರೆ ಉಂಟು ಮಾಡುವ ಸಾಧ್ಯತೆಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...