ಬೀದರ್‌ | ಮೇ ತಿಂಗಳು ಮುಗಿಯವರೆಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರವಹಿಸಿ : ಡಿಸಿ ಗೋವಿಂದರೆಡ್ಡಿ

Date:

ಬೇಸಿಗೆ ಪ್ರಯುಕ್ತ ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಲ್ಲ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನು 15 ದಿನಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ತಾಲೂಕು ಮಟ್ಟದ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಜೂನ್‌ ತಿಂಗಳಲ್ಲಿ ಉತ್ತಮ ಮಳೆ ಆಗುವ ನಿರೀಕ್ಷೆಯಿದ್ದು, ಜಿಲ್ಲೆಯ ಎಲ್ಲ ತಾಲೂಕಿನಲ್ಲಿ 102 ಖಾಸಗಿ ಬೋರವೆಲ್‌ಗಳನ್ನು ಬಾಡಿಗೆಗೆ ಪಡೆಯಲಾಗಿದೆ. 47 ಬೋರವೆಲ್ ಮೋಟಾರ್ ದುರಸ್ತಿ, 24 ಕಡೆ ಹೊಸ ಪೈಪ್‌ಲೈನ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಬಾಡಿಗೆ ಪಡೆದ ಖಾಸಗಿ ಬೋರವೆಲ್ ಮತ್ತು ಟ್ಯಾಂಕರ್‌ಗಳ ಬಿಲ್ ಪಡೆದು ಸಂಬಂಧಪಟ್ಟವರಿಗೆ ಹಣ ಪಾವತಿಸಲು ಕ್ರಮಕೈಗೊಳ್ಳಬೇಕು” ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
“ಮೋಟಾರ್ ದುರಸ್ತಿ, ಪೈಪ್‌ಲೈನ್ ಅಳವಡಿಸಿ ಬಿಲ್‌ಗಳನ್ನು ಸಹ ಆಡಳಿತಾತ್ಮಕ ಅನುಮೋದನೆ ಪಡೆದು ಹಣ ಪಾವತಿಗೆ ಕ್ರಮವಹಿಸಬೇಕು. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಬೋರವೇಲ್, ಬಾವಿಗಳಿಗೆ ಯಾವುದೇ ರೀತಿ ಕಲುಷಿತ ನೀರು ಸೇರದಂತೆ ಎಚ್ಚರವಹಿಸಿ ಸ್ವಚ್ಚತೆಯನ್ನು ಕಾಪಾಡಲು ಕ್ರಮ ವಹಿಸಬೇಕು” ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ ಬದೋಲೆ ಮಾತನಾಡಿ, “ಜಿಲ್ಲಾ ಪಂಚಾಯತ ವತಿಯಿಂದ 114 ಕಡೆ ಬೋರವೆಲ್, ಪ್ಲಸಿಂಗ್‌ ಮತ್ತು ಡ್ರಿಲಿಂಗ್ ಮಾಡಲಾಗಿದ್ದು, ಕೂಡಲೇ ಆಡಳಿತಾತ್ಮಕ ಅನುಮೋದನೆ ಪಡೆದು ಬಿಲ್‌ಗಳನ್ನು ಪಾವತಿಸಲು ಕ್ರಮ ವಹಿಸಬೇಕು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಓವರ್ ಹೆಡ್ ಟ್ಯಾಂಕ್‌ಗಳನ್ನು ಸ್ವಚ್ಚಗೊಳಿಸಿ ಸೂಚಿಯಾಗಿರುವಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.‌
ಸಭೆಯಲ್ಲಿ ಸಹಾಯಕ ಆಯುಕ್ತ ಲವೀಶ ಓರ್ಡಿಯಾ, ಎಲ್ಲ ತಾಲೂಕಿನ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರರು ಉಪಸ್ಥಿತರಿದ್ದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...