ಭದ್ರಾವತಿ | ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ವಂಚನೆ; ಸಿಕ್ಕಿಬಿದ್ದ ಮ್ಯಾಟ್ರಿಮೋನಿ ವಂಚಕ

Date:

ಮ್ಯಾಟ್ರಿಮೋನಿಯ ಅಪ್ಲಿಕೇಶನ್‌ಗಳಲ್ಲಿ ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂ ದೋಚಿದ್ದ ವಂಚಕನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ವಿಜಯಪುರ ತಾಲೂಕು ನಿವಾಸಿ ಭೀಮರಾಜ್‌ ಬಂಧಿತ ಆರೋಪಿ.

ಆನ್‌ಲೈನ್‌ ಅಪ್ಲಿಕೇಶನ್‌ಗಳನ್ನು ನಂಬಿ ಮೋಸ ಹೋಗದಂತೆ ಶಿವಮೊಗ್ಗ ಪೊಲೀಸ್‌ ಇಲಾಖೆ ಭೀಮರಾಜ್ ಫೋಟೋ ಹಾಗೂ ಆತ ನಡೆಸಿದ ವಂಚನೆ ಪ್ರಕರಣಗಳ ಲಿಸ್ಟ್‌ ಬಿಡುಗಡೆ ಮಾಡಿ ಎಚ್ಚರಿಕೆ ನೀಡಿದೆ.

ಮ್ಯಾಟ್ರಿಮೋನಿ ಮೂಲಕ ಪರಿಚಯವಾದ ಭೀಮರಾಜ್, ಈ ಮೊದಲೇ ತಾನು ಮದುವೆಯಾಗಿರುವುದನ್ನು ಮರೆಮಾಚಿ, ಭದ್ರಾವತಿಯ ಮಹಿಳೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ, ಅವರಿಂದ ಹಣ ಮತ್ತು ಒಡವೆಗಳನ್ನು ಪಡೆದು ಬಳಿಕ ಸಂಪರ್ಕಕ್ಕೂ ಸಿಗದೆ ಪರಾರಿಯಾಗಿದ್ದಾನೆ. ಮಹಿಳೆಯಿಂದ ತನ್ನ ತಾಯಿಯ ಆರೋಗ್ಯ ಸರಿಯಿಲ್ಲ ಎಂದು ಹೇಳಿ ಫೋನ್ ಪೇ ಮೂಲಕ ಒಟ್ಟು ₹5,43,451 ಗಳನ್ನು ಪಡೆದಿದ್ದ. ನಂತರ ₹2,00,000 ಕ್ಯಾಶ್‌ ಪಡೆದುಕೊಂಡಿದ್ದ. ಸಾಲದೆಂಬಂತೆ ಕಚೇರಿ ಸಮಾರಂಭದ ಕಾರಣ ಹೇಳಿ ಸುಮಾರು ₹2,25,000 ಮೌಲ್ಯದ ಬಂಗಾರ ಪಡೆದುಕೊಂಡಿದ್ದ. ಆ ಬಳಿಕ ಸಂಪರ್ಕಕ್ಕೆ ಸಿಗದೆ ವಂಚಿಸಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಸಂತ್ರಸ್ತೆ ದಾಖಲಿಸಿದ ದೂರಿನನ್ವಯ ಪೊಲೀಸರು 318(2), 318(4) BNS-2023 2 66 (C), 66(D) IT ACT ಅಡಿಯಲ್ಲಿ ಕೇಸ್‌ ದಾಖಲಿಸಿದ್ದರು.

1001227867

ಈ ಸುದ್ದಿ ಓದಿದ್ದೀರಾ?: ಭದ್ರಾವತಿ | ಪೊಲೀಸ್‌ ಠಾಣೆ ಕಾರ್ಯವೈಖರಿ ತಿಳಿಸಲು ವಿದ್ಯಾರ್ಥಿಗಳಿಗೆ ʼತೆರೆದ ಮನೆʼ ಕಾರ್ಯಕ್ರಮ

ಅಲ್ಲದೆ ಆತನ ವಿರುದ್ಧ 10 ಪೊಲೀಸ್‌ ಠಾಣೆಗಳಲ್ಲಿ ಒಟ್ಟು 12 ಕೇಸ್‌ಗಳಿರುವುದು ತನಿಖೆಯಿಂದ ಗೊತ್ತಾಗಿದೆ. ಪ್ರಸ್ತುತ ಆತ ಕೊಪ್ಪಳ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...