ಭದ್ರಾವತಿ | ಕೊಲೆ ಆರೋಪಿ ಬಂಧನ

Date:

ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹನುಮಂತಾಪುರ ಗ್ರಾಮದಲ್ಲಿ ಫೆ.26 ರಂದು ನಡೆದ ರಾಜಶೇಖರಪ್ಪ (60) ರವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಅಳಿಯ ಮಂಜುನಾಥ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮಂಜುನಾಥ್ ಮದ್ಯ ವ್ಯಸನಿಯಾಗಿದ್ದು, ತನ್ನ ಮಾವ ರಾಜಶೇಖರಪ್ಪರೊಂದಿಗೆ ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ಶಿವರಾತ್ರಿ ಹಬ್ಬದ ದಿನದಂದು ಕೂಡ ಆರೋಪಿಯು ಕ್ಷುಲ್ಲಕ ವಿಚಾರಕ್ಕೆ ಮಾವನೊಂದಿಗೆ ಗಲಾಟೆ ಮಾಡಿ ಕೊಲೆ ಮಾಡಿರುವುದು ಪೊಲೀಸರ ವಿಚಾರಣೆ ವೇಳೆ ಗೊತ್ತಾಗಿದೆ.

ಇತ್ತೀಚೆಗೆ ಮನೆಯಲ್ಲಿ ಶ್ರೀಗಂಧದ ತುಂಡು ಇಟ್ಟುಕೊಂಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ, ಅರಣ್ಯ ಇಲಾಖೆಯಿಂದ ಬಂಧಿತನಾಗಿ ಜೈಲು ಸೇರಿದ್ದ ಆರೋಪಿ ಮಂಜುನಾಥ್‌, ಕಳೆದ 15 ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ಸ್ಥಳೀಯರ ಮಾಹಿತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001292492 666x1024 1

ಶಿವರಾತ್ರಿ ದಿನದಂದು ಮಾವ ರಾಜಶೇಖರಪ್ಪರ ಮನೆಗೆ ಆರೋಪಿ ಆಗಮಿಸಿದ್ದಾನೆ. ಮಾವನೊಂದಿಗೆ ಜಗಳ ಆಡಿ ಬಳಿಕ ಕ್ರಿಕೆಟ್ ಬ್ಯಾಟ್ ನಿಂದ ತಲೆಗೆ ಹೊಡೆದು, ಬಟ್ಟೆಯೊಂದರಿಂದ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ತದನಂತರ ಶವವನ್ನು ಮನೆಯ ಹಿಂಭಾಗದಲ್ಲಿ ಪಾಳು ಬಿದ್ದಿದ್ದ ಶೌಚಾಲಯ ಕೊಠಡಿ ಬಳಿ ಎಸೆದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಭದ್ರಾವತಿ | ಸತ್ತ ಮಹಿಳೆ ಬದುಕಿದ್ದು ಹೇಗೆ? ಅದೃಷ್ಟ ಗಟ್ಟಿ ಇದ್ದರೆ ಯಮ ಕೂಡ ಏನು ಮಾಡಲಾಗಲ್ಲ

ರಾಜಶೇಖರಪ್ಪರ ಪುತ್ರಿ ಸಂಜೆ ಮನೆಗೆ ಆಗಮಿಸಿದಾಗ ರಕ್ತದ ಕಲೆ ಕಂಡುಬಂದಿದೆ. ಮನೆಯೆಲ್ಲ ಹುಡುಕಿದಾಗ, ಹಿಂಭಾಗದ ಶೌಚಾಲಯದ ಬಳಿ ತಂದೆಯ ದೇಹ ಬಿದ್ದಿರುವುದು ಬೆಳಕಿಗೆ ಬಂದಿದೆ. ನಂತರ ಗ್ರಾಮಸ್ಥರಿಗೆ ವಿಚಾರ ತಿಳಿದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಅರೆಸ್ಟ್‌ ಮಾಡಿ ಮತ್ತೆ ಜೈಲಿಗಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...