ಭದ್ರಾವತಿ | ಹಾಡಹಗಲೇ ಲಾಂಗು ಮಚ್ಚಿನಿಂದ ಹೊಡೆದಾಟದ; ವಿಡಿಯೊ ವೈರಲ್

Date:

ಭದ್ರಾವತಿಯಲ್ಲಿ ಹಾಡಹಗಲೇ ಲಾಂಗು ಮಚ್ಚಿನಿಂದ ಹೊಡೆದಾಡಿದ ವಿಡಿಯೊ ವೈರಲ್ ಆಗಿದೆ.

ಇತ್ತೀಚೆಗೆ ಭದ್ರಾವತಿ ನಗರದ ಭದ್ರಾ ನದಿಯಲ್ಲಿ ನಡೆಯುತ್ತಿದ್ದ, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಮುಂದಾದ ಮಹಿಳಾ ಅಧಿಕಾರಿಗೆ, ದಂಧೆಕೋರರು ಜೀವ ಬೆದರಿಕೆ ಹಾಕಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು.

ಸದರಿ ಪ್ರಕರಣ ಇನ್ನೂ ಮಾಸುವ ಮುನ್ನವೇ ಇದೀಗ ಭದ್ರಾವತಿ ನಗರದ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಇನ್ನೊಂದು ಪ್ರಕರಣ ನಡೆದಿದ್ದು, ಯುವಕರ ಎರಡು ಗುಂಪುಗಳು, ಜನನಿಬಿಡ ರಸ್ತೆಯಲ್ಲಿಯೇ ಹಾಡಹಗಲೆ ಹೊಡೆದಾಡಿಕೊಂಡಿರುವ ವೀಡಿಯೊವೊಂದು ವೈರಲ್ ಆಗಿದೆ. ಆದರೆ ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಫೆಬ್ರವರಿ 9ರಂದು ಸದರಿ ಮಾರಾಮಾರಿ ಘಟನೆ ನಡೆದಿದೆ ಎನ್ನಲಾಗಿದೆ. ಭದ್ರಾವತಿ ಪಟ್ಟಣದ ಉಜ್ಜನಿಪುರ ಸರ್ಕಲ್‌ನಲ್ಲಿ ಘಟನೆ ನಡೆದಿದೆ. ಲಾಂಗ್, ದೊಣ್ಣೆಗಳಿಂದ ಎರಡು ಗುಂಪುಗಳು ಹೊಡೆದಾಡಿಕೊಂಡಿವೆ. ಕಲ್ಲು ತೂರಾಟವೂ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ; ಥಳಿತ

ಓಸಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾರಾಮಾರಿ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಈ ಹೊಡೆದಾಟವು ಸಮೀಪದ ಕಟ್ಟಡಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಘಟನೆ ನಡೆದ ಹಲವು ದಿನಗಳ ನಂತರ ಸದರಿ ಮಾರಾಮಾರಿ ನಡೆದಿರುವ ವಿಡಿಯೊ ವೈರಲ್ ಆಗಿದೆ. ಸಾರ್ವಜನಿಕ ಸ್ಥಳದಲ್ಲಿಯೇ ಇಷ್ಟೆಲ್ಲ ರಾದ್ಧಾಂತ ನಡೆದರೂ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಪೊಲೀಸರು ಯಾರ ವಿರುದ್ಧವೂ ಕ್ರಮಕೈಗೊಳ್ಳದಿರುವುದು ಸಖೇದಾಶ್ಚರ್ಯಕ್ಕೆ ಕಾರಣವಾಗಿದೆ. ಒಟ್ಟಾರೆ ಸದರಿ ಗ್ಯಾಂಗ್ ವಾರ್ ಪ್ರಕರಣದಿಂದ ಮತ್ತೊಮ್ಮೆ ಭದ್ರಾವತಿ ನಗರದ ಕಾನೂನು ಸುವ್ಯವಸ್ಥೆಯ ವಿಷಯದ ಚರ್ಚೆಯೂ ಮುನ್ನೆಲೆಗೆ ಬರುವಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...