ಸಂವಿಧಾನ ದೇಶದ ಪ್ರಜಾಪ್ರಭುತ್ವದ ಭದ್ರ ಅಡಿಪಾಯವಾಗಿದೆ. ನಾಗರಿಕರ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಎತ್ತಿ ಹಿಡಿಯುವಲ್ಲಿ ಸಂವಿಧಾನದ ಪಾತ್ರ ದೊಡ್ಡದಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ನಿಮಿತ್ತ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ʼಜಗತ್ತಿನಲ್ಲೇ ಅತ್ಯಂತ ವಿಶಿಷ್ಟವಾದ ಗುಣಲಕ್ಷಣ ಹೊಂದಿರುವ ಸಂವಿಧಾನ ನಮ್ಮದಾಗಿದೆ. ಇಂತಹ ಅಪರೂಪದ ಸಂವಿಧಾನವನ್ನು ದೇಶಕ್ಕೆ ನೀಡಿದ ಶ್ರೇಯಸ್ಸು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ವಿದ್ಯಾರ್ಥಿಗಳು
ಓದಿನ ಜತೆಗೆ ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿದುಕೊಂಡು ಚಾಚು ತಪ್ಪದೇ ಪಾಲಿಸಿ ಬದುಕು ಸಾರ್ಥಕ ಪಡಿಸಿಕೊಳ್ಳಬೇಕುʼ ಎಂದು ತಿಳಿಸಿದರು.
ಪ್ರಾಚಾರ್ಯ ಬಸವರಾಜ ಮೊಳಕೀರೆ ಮಾತನಾಡಿ, ʼಡಾ.ಬಿ.ಆರ್.ಅಂಬೇಡ್ಕರ ಅವರು ನೀಡಿರುವ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ. ಇಂತಹ ಶ್ರೇಷ್ಠ ಸಂವಿಧಾನವನ್ನು ವಿದ್ಯಾರ್ಥಿಗಳು ಸದಾಕಾಲ ಗೌರವಿಸಬೇಕುʼ ಎಂದು ತಿಳಿಸಿದರು.
ಇದನ್ನೂ ಓದಿ : ಬೀದರ್ | ಧರ್ಮದಾರಿತ ದೇಶ ವಿಭಜನೆ ಸಲ್ಲದು: ಮಾವಳ್ಳಿ ಶಂಕರ
ಈ ಸಂದರ್ಭದಲ್ಲಿ ಉಪಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಉಪನ್ಯಾಸಕರಾದ ಲಚಮಾ ರೆಡ್ಡಿ, ರವಿ ಬಿರಾದಾರ್, ಹಣಮಂತ ಜ್ಯಾಂತಿಕರ್, ಕಚೇರಿ ವ್ಯವಸ್ಥಾಪಕ ಆದರ್ಶ ಗಂದಿಗುಡೆ ಸೇರಿದಂತೆ ಹಲವರು ಇದ್ದರು.





