ಭಾಲ್ಕಿ | ನಿವೃತ್ತ ಶಿಕ್ಷಕಿ ಭಾರತಿ ರೊಟ್ಟೆಗೆ ಬೀಳ್ಕೊಡುಗೆ

Date:

ಭಾಲ್ಕಿ ತಾಲೂಕಿನ ಬಾಳೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಭಾರತಿ ಓಂಪ್ರಕಾಶ ರೊಟ್ಟೆ ಅವರನ್ನು ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿ, ಶಿಕ್ಷಕರು ಸನ್ಮಾನಿಸಿ ಬೀಳ್ಕೊಟ್ಟರು.

ಶಿಕ್ಷಕಿ ಭಾರತಿ ರೊಟ್ಟೆ ಅವರು ಮೂಲತಃ ಕಮಲನಗರ ತಾಲೂಕಿನ ಮದನೂರು ಗ್ರಾಮದವರು. 1992ರಲ್ಲಿ ಭಾಲ್ಕಿ ತಾಲೂಕಿನ ಬೀರಿ(ಬಿ) ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸೇರಿ ವೃತ್ತಿ ಆರಂಭಿಸಿದರು. ಬಳಿಕ‌ ಭಾಲ್ಕಿ ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಸುಮಾರು 15 ವರ್ಷ ಸೇರಿ ಇತರೆ ಕಡೆ ಸೇವೆ ಸಲ್ಲಿಸಿ ಬಡ್ತಿ ಮೇಲೆ ಬಾಳೂರು ಶಾಲೆಗೆ 2021ರಲ್ಲಿ ಸೇವೆಗೆ ಸೇರಿ ಈಗ ನಿವೃತ್ತಿಯಾದರು.

ಬಾಳೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ವಿಶ್ವಕ್ರಾಂತಿ ದಿವ್ಯಪೀಠ ವತಿಯಿಂದ ಆಯೋಜಿಸಿದ ಶಿಕ್ಷಕಿ ಭಾರತಿ ರೊಟ್ಟೆ ಅವರ ವಯೋನಿವೃತ್ತಿ ಹಾಗೂ ಸಂವಿಧಾನ ಅಂಗೀಕಾರ ವರ್ಷಾಚರಣೆ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಜರುಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತ ಉಪನ್ಯಾಸಕ ಚಂದ್ರಶೇಖರ ಬಿರಾದರ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ʼಭಾರತದ ಸಂವಿಧಾನ ಪೀಠಿಕೆಯು ಸಂವಿಧಾನದ ಆತ್ಮ ಮತ್ತು ದಿಕ್ಸೂಚಿಯಾಗಿದೆ. ಇದು ಸಂವಿಧಾನದ ಮೂಲ ತತ್ವಗಳು, ಆಶಯಗಳು ಮತ್ತು ಗುರಿಗಳಾದ ಸಾರ್ವಭೌಮತೆ, ಸಮಾಜವಾದ, ಜಾತ್ಯತೀತತೆ, ಪ್ರಜಾಪ್ರಭುತ್ವ, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ವಿವರಿಸುತ್ತದೆ. ನಾವೆಲ್ಲರೂ ಸಂವಿಧಾನ ಪೀಠಿಕೆಯನ್ನು ಅರ್ಥೈಸಿಕೊಂಡು ಬದುಕುವುದು ಅಗತ್ಯವಿದೆʼ ಎಂದರು.

WhatsApp Image 2025 12 13 at 9.22.00 PM 1
ನಿವೃತ್ತ ಉಪನ್ಯಾಸಕ ಚಂದ್ರಶೇಖರ ಬಿರಾದರ್‌ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ್‌ ಮಾತನಾಡಿ, ʼಉತ್ತಮ ಸಮಾಜ ರೂಪಿಸುವುದಲ್ಲಿ ಶಿಕ್ಷಕರ ಪಾತ್ರ ತುಂಬಾ ಮಹತ್ವವಾದುದು. ಶಿಕ್ಷಕಿ ಭಾರತಿ ರೊಟ್ಟೆ ಅವರು ತಮ್ಮ ಜವಾಬ್ದಾರಿಯನ್ನು ಅರಿತು ನಿಷ್ಠೆಯಿಂದ ಸೇವೆಗೈದಿದ್ದಾರೆ. ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಶಿಕ್ಷಕರು ಸದಾ ಶ್ರಮಿಸಬೇಕುʼ ಎಂದು ಹೇಳಿದರು.

ʼಜ್ಞಾನ ಸಂಪಾದನೆಗಾಗಿ ಅಧ್ಯಯನ ಮಾಡುವುದು ಎಷ್ಟು ಮುಖ್ಯವೋ, ಪರೀಕ್ಷೆಯಲ್ಲಿ ಯಶಸ್ವಿಯಾಗುವುದಕ್ಕಾಗಿ ಅಧ್ಯಯನ ಮಾಡುವುದು ಅಷ್ಟೇ ಮುಖ್ಯ. ಯಶಸ್ಸಿನ ರಹಸ್ಯವಿರುವುದು ಏಕಾಗ್ರತೆಯಲ್ಲಿ. ಯಾವುದೇ ಕೆಲಸ ಮಾಡುವುದಕ್ಕೂ ಏಕಾಗ್ರತೆ ಅತೀ ಮುಖ್ಯ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಸಣ್ಣ ತಪ್ಪುಗಳನ್ನು ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಎದುರಿಸಿದರೆ ಉತ್ತಮ ಫಲಿತಾಂಶ ಬರಲು ಸಾಧ್ಯʼ ಎಂದು ಕಿವಿಮಾತು ಹೇಳಿದರು.

ನಿವೃತ್ತ ಶಿಕ್ಷಕ, ಗ್ರಾಮ ಮುಖಂಡರಾದ ಡಾ.ಕಾಶಿನಾಥ ಚೆಲವಾ ಮಾತನಾಡಿ, ʼಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಸೇರಿ ಎಲ್ಲ ರಂಗದಲ್ಲಿ ದೇಶದ ಪ್ರಗತಿ ಕಾಣಬೇಕಾದರೆ ಶೈಕ್ಷಣಿಕ ಅಭಿವೃದ್ಧಿ ಹೊಂದಬೇಕಿದೆ. ಯಾವುದೇ ಜಾತಿ, ಮತ, ಭೇದವಿಲ್ಲದ ಸಮಾನತೆ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಯುವ ಜನಾಂಗ ಯೋಚಿಸಬೇಕು. ವಿದ್ಯಾರ್ಥಿಗಳು ಅನೇಕ ಮಹಾತ್ಮರ ತತ್ವಾದರ್ಶಗಳು ಬದುಕಿನಲ್ಲಿ ಅಳವಡಿಸಿಕೊಂಡು ಜೀವನ ರೂಪಿಸಿಕೊಳ್ಳಬೇಕುʼ ಎಂದು ನುಡಿದರು.

WhatsApp Image 2025 12 13 at 9.21.17 PM
ಗ್ರಾಮಸ್ಥರು, ವಿದ್ಯಾರ್ಥಿಗಳು, ಹಿತೈಷಿಗಳಿಂದ ಭಾರತಿ ರೊಟ್ಟೆ ದಂಪತಿಗೆ ಸನ್ಮಾನಿಸಿದರು.

ಅಧ್ಯಕ್ಷತೆ ವಹಿಸಿದ ಶಾಲೆಯ ಮುಖ್ಯಗುರು ದತ್ತಾತ್ರಿ ಬಿರಾದರ್‌ ಮಾತನಾಡಿ, ʼಶಿಕ್ಷಕಿ ಭಾರತಿ ರೊಟ್ಟೆ ಅವರು ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಜೊತೆಗೆ ಸಾಹಿತ್ಯ, ಸಂಸ್ಕೃತಿ ಮನೋಭಾವ ಬೆಳೆಸಿ ಮಕ್ಕಳ ಅಚ್ಚುಮೆಚ್ಚಿನ ಗುರುಗಳಾದವರು. ಅವರೊಂದಿಗೆ ಸೇವೆ ಸಲ್ಲಿಸಿದ ನನಗೂ ಸಂತೃಪ್ತಿಇದೆ. ಇಷ್ಟು ವರ್ಷಗಳ ಕಾಲ ನಿಷ್ಠೆಯ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದು ಅವರು ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆʼ ಎಂದರು.

ದಿಶಾ ಸಮಿತಿ ಸದಸ್ಯ ಶಿವಯ್ಯಾ ಸ್ವಾಮಿ, ಸರ್ಕಾರಿ ನೌಕರರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ರಾಜಕುಮಾರ ಪಾಟೀಲ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸುಂಟೆ, ಪತ್ರಕರ್ತ ಬಾಲಾಜಿ ಕುಂಬಾರ, ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ, ಜಗದೀಶ್ವರ ಬಿರಾದರ್ ಮತ್ತಿತರರು ಮಾತನಾಡಿದರು.

ಇದನ್ನೂ ಓದಿ : ಬೀದರ್‌ | 29 ಮಕ್ಕಳು ಶಾಲೆಯಿಂದ ಹೊರಗೆ, ವರದಿಗೆ ಸೂಚನೆ

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಬಾಬುರಾವ್, ವೆಂಕಟರಾವ್‌, ನಾಗನಾಥ ಘನ್ನಾಳೆ, ಸುವರ್ಣಾ, ಸಂಜು, ನೈನಾ, ಜ್ಯೋತಿ ಸೇರಿದಂತೆ ಪ್ರಮುಖರಾದ ಶರದ್‌ ಗೌಡ, ನವೀನಕುಮಾರ್‌,‌ ನಾರಾಯಣ ಚೆಲವಾ ಹಾಗೂ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...