ಭಾಲ್ಕಿ | ಸಾಹಿತ್ಯ ಕ್ಷೇತ್ರಕ್ಕೆ ಜಿ.ಬಿ.ವಿಸಾಜಿ ಕೊಡುಗೆ ವಿಶಿಷ್ಟ : ಮೋಹನ ರೆಡ್ಡಿ

Date:

ಗಡಿಭಾಗದ ಸಾಹಿತ್ಯ ಕ್ಷೇತ್ರಕ್ಕೆ ಹಿರಿಯ ಸಾಹಿತಿ ಜಿ.ಬಿ.ವಿಸಾಜಿ ಅವರು ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ ಹೇಳಿದರು.

ಭಾಲ್ಕಿ ತಾಲೂಕಿನ ತಳವಾಡ(ಕೆ) ಗ್ರಾಮದ ಅಲ್ಲಮ ಪ್ರಭು ಬಿ.ಇಡಿ ಕಾಲೇಜಿನಲ್ಲಿ ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೋಮವಾರ ಆಯೋಜಿಸಿದ್ದ ಹಿರಿಯ ಸಾಹಿತಿ ಜಿ.ಬಿ.ವಿಸಾಜಿ ಪ್ರಥಮ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ʼಹಿರೇಮಠ ಸಂಸ್ಥಾನದ ಧಾರ್ಮಿಕ, ಶೈಕ್ಷಣಿಕ, ಸಾಹಿತಿಕ ಕಾರ್ಯಕ್ರಮಗಳಲ್ಲಿ ಹಿರಿಯ ಸಾಹಿತಿ ಜಿ.ಬಿ.ವಿಸಾಜಿ ಅವರ ಸೇವೆ ವಿಶಿಷ್ಟವಾಗಿ ಇರುತ್ತಿತ್ತು. ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ ಕುರಿತು ಕಾಯಕ ಪರಿಣಾಮಿ, ಭಾಲ್ಕಿ ಇತಿಹಾಸ ಸೇರಿ ಮುಂತಾದ ಪುಸ್ತಕ ರಚಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಉತ್ತಮ ಸಾಹಿತ್ಯ ಪಟು ಆಗಿದ್ದರಿಂದ ಕನ್ನಡ ಭಾಷೆಯ
ಮೇಲೆ ಪ್ರಭುತ್ವ ಸಾಧಿಸಿದ್ದರು. ಅವರ ಸರಳ ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಸಾಹಿತಿ ಜಿ.ಬಿ.ವಿಸಾಜಿ ಅವರ ಮಾರ್ಗದರ್ಶನದಲ್ಲಿ 15 ಪುಸ್ತಕಗಳನ್ನು ಬರೆಯಲು ಸಾಧ್ಯವಾಗಿದೆ. ಅವರು ಒಬ್ಬ ಕನ್ನಡದ ಭೀಷ್ಮರಾಗಿದ್ದರುʼ ಎಂದು ಹಿರಿಯ ಸಾಹಿತಿ ಗಣಪತಿ ಭೂರೆ ತಿಳಿಸಿದರು.

ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಮಕ್ತುಂಬಿ ಮಾತನಾಡಿ, ʼವಿದ್ಯಾರ್ಥಿಗಳಲ್ಲಿ ಗುರು ಭಕ್ತಿ ಹೆಚ್ಚಾಗಬೇಕು. ಜಿ.ಬಿ.ವಿಸಾಜಿ ಅವರ ಪ್ರೇರಣೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಯಿತು. ಅವರ ಬದುಕು-ಬರಹ ನಮಗೆ ಸ್ಫೂರ್ತಿಯಾಗಬೇಕುʼ ಎಂದರು.

ಪ್ರಾಚಾರ್ಯ ಪಾಂಡುರಂಗ ಕುಂಬಾರ್ ಮಾತನಾಡಿ, ʼಚನ್ನಬಸವ ಪಟ್ಟದೇವರು ಕನ್ನಡಕ್ಕಾಗಿ ದುಡಿದು ಕನ್ನಡ ಮಠ ಕಟ್ಟಿದರು. ಅದನ್ನು ಬಸವಲಿಂಗ ಪಟ್ಟದ್ದೆವರು ಮುಂದುವರಿಸಿದ್ದಾರೆ. ಹಿರೇಮಠ ಪರಿಸರದಲ್ಲಿ ಇಂತಹ ಸಾಹಿತಿಗಳು ಬೆಳೆಯಲು ಸಾಧ್ಯವಾಗಿದೆ. ಜೀವನದಲ್ಲಿ ನಿರಂತರ ಅಧ್ಯಯನ ಮುಖ್ಯ, ಪಾಠದೊಂದಿಗೆ ಸಾಹಿತ್ಯ ಓದಬೇಕುʼ ಎಂದರು.

ಇದನ್ನೂ ಓದಿ : ಬೀದರ್‌ | ಚೆಂಡು ಹೂವು ಕೃಷಿಯಲ್ಲಿ ಖುಷಿ ಕಂಡ ಬಿಎಸ್ಸಿ ಪದವೀಧರ

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಚಾರ್ಯ ಮಾಣಿಕರಾವ ಪಾಂಚಾಳ ಸ್ವಾಗತಿಸಿದರು. ರಾಜೇಂದ್ರ ವರವಟ್ಟೆ ನಿರೂಪಿದರು. ಅರ್ಚನಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...