ಭಾಲ್ಕಿ | ಅಕ್ರಮ ಮದ್ಯ ಮಾರಾಟ ನಿಷೇಧಕ್ಕೆ ನಮ್ಮ ಕರ್ನಾಟಕ ಸೇನೆ ಆಗ್ರಹ

Date:

ಭಾಲ್ಕಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ಭಾಲ್ಕಿ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮಂಗಳವಾರ ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದರು.

ʼತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದೆ. ಕಿರಣಾ ಅಂಗಡಿ, ಪಾನ್‌ಶಾಪ್, ಹೊಟೇಲ್ ಸೇರಿ ಎಲ್ಲೆಂದರಲ್ಲಿ ರಾಜರೋಷವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಬಡ ಜನರ ಕುಟುಂಬ ಬೀದಿಗೆ ಬರುವಂತಾಗಿದೆ. ಯುವಕರು ಕುಡಿತದ ಚಟಕ್ಕೆ ಬಲಿಯಾಗಿ ತಮ್ಮ ಅಮೂಲ್ಯ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅಕ್ರಮ ಮದ್ಯ ಮಾರಾಟ ನಿಷೇಧಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಎರಡ್ಮೂರು ಸಲ ಮನವಿ ಪತ್ರ ಸಲ್ಲಿಸಲಾಗಿದೆ. ಆದರೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ತಕ್ಷಣದಿಂದಲೇ ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿರುವ ಮದ್ಯ ಸಂಪೂರ್ಣವಾಗಿ ಬಂದ್ ಮಾಡಿಸಬೇಕು. ಒಂದು ಅಬಕಾರಿ ಇಲಾಖೆ ನಿರ್ಲಕ್ಷ್ಯ ವಹಿಸಿದ್ದರೇ ಉಗ್ರ ಹೋರಾಟ ಮಾಡಬೇಕಾಗುತ್ತದೆʼ ಎಂದು ಎಚ್ಚರಿಸಿದರು.

ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಯುವ ಅಧ್ಯಕ್ಷ ಸುದೀಪ ತೂಗಾವೆ, ತಾಲೂಕು ಅಧ್ಯಕ್ಷ ಬಸವರಾಜ ಕಾರಬಾರಿ, ಉಪಾಧ್ಯಕ್ಷ ಜಗದೀಶ ಪಾಟೀಲ್, ಪ್ರಮುಖರಾದ ಭದ್ರಯ್ಯ ಸ್ವಾಂಇ, ದತ್ತಾತ್ರಿ ಜಗತಾಪ, ಮಹೇಶ ರಾಚೋಟೆ, ಲೋಕೇಶ ಚಿಂಚೋಳೆ, ಸಾಗರ ಸ್ವಾಮಿ, ಪ್ರಶಾಂತ ಹಣಮಶೆಟ್ಟಿ, ಬಾಲಾಜಿ ಮೇಘೆ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ : ಯಾದಗಿರಿ ನೂತನ ಡಿಸಿಯಾಗಿ ಭೋಯರ್ ಹರ್ಷಲ್‌; ಕೆಕೆಆರ್‌ಟಿಸಿ ನಿರ್ದೇಶಕರಾಗಿ ಡಾ.ಸುಶೀಲಾ ಬಿ. ನೇಮಕ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...