ಭಟ್ಕಳ | ಗೃಹೋಪಯೋಗಿ ವಸ್ತುಗಳನ್ನು ಕಡಿಮೆ ದರದಲ್ಲಿ ನೀಡುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿದ ಆರೋಪಿಗಳು ಪೊಲೀಸರ ವಶಕ್ಕೆ

Date:

ಭಟ್ಕಳ ಪಟ್ಟಣದಲ್ಲಿ “ಗ್ಲೋಬಲ್ ಎಂಟರ್‌ಪ್ರೈಸಸ್” ಹೆಸರಿನಲ್ಲಿ ಅಂಗಡಿ ತೆರೆದು, ಗೃಹೋಪಯೋಗಿ ವಸ್ತುಗಳ ಮೇಲೆ ಶೇಕಡಾ 40ರಷ್ಟು ರಿಯಾಯಿತಿ ನೀಡುವುದಾಗಿ ನಂಬಿಸಿ ನೂರಾರು ಜನರಿಂದ ಲಕ್ಷಾಂತರ ರೂಪಾಯಿ ಮುಂಗಡ ಹಣ ಪಡೆದು ಪರಾರಿಯಾಗಿದ್ದ ವಂಚಕರನ್ನು ಭಟ್ಕಳ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕೇರಳ ಹಾಗೂ ತಮಿಳುನಾಡು ಮೂಲದ ಎಂ. ಗಣೇಶನ್, ತ್ಯಾಗರಾಜನ್, ಮತ್ತು ಮಿಯಾನಾದನ್‌ಯಾನೆ ರಾಜೇಶ್ ಎಂದು ಗುರುತಿಸಲಾಗಿದೆ. ಸುಮಾರು ಎರಡು ತಿಂಗಳ ಹಿಂದೆ ಆರೋಪಿಗಳು ಭಟ್ಕಳದ ಕಾರ್ಟ್ ರಸ್ತೆಯಲ್ಲಿ ಮಳಿಗೆ ಆರಂಭಿಸಿದ್ದರು. ಜನರನ್ನು ನಂಬಿಸಲು ಸ್ಥಳೀಯ ಬ್ಯಾಂಕ್ ಖಾತೆ ತೆರೆಯುವುದು, ಜಿಎಸ್‌ಟಿ ನೋಂದಣಿ ಮಾಡಿಸುವುದು ಹಾಗೂ ಸ್ಥಳೀಯ ಯುವಕರನ್ನೇ ಕೆಲಸಕ್ಕೆ ನೇಮಿಸುವ ಮೂಲಕ ವಿಶ್ವಾಸ ಗಳಿಸಿದ್ದರು. ಆರಂಭದಲ್ಲಿ ಕೆಲವರಿಗೆ ಕಡಿಮೆ ಬೆಲೆಗೆ ವಸ್ತುಗಳನ್ನು ಪೂರೈಕೆ ಮಾಡಿದ್ದರು. ಇದರಿಂದ ನೂರಾರು ಗ್ರಾಹಕರು ಇವರನ್ನು ನಂಬಿ ಮುಂಗಡ ಹಣ ಪಾವತಿಸಿ ದ್ದಾರೆ.

1000302092

ವಂಚನೆಗೆ ಒಳಗಾದ ಮೊಹಮ್ಮದ್ ಸವೂದ್ ಎಂಬುವವರು ಠಾಣೆಯಲ್ಲಿ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಮೋಸಗೊಂಡ ನೂರಾರು ಸಂತ್ರಸ್ತರು ಅಂಗಡಿಯ ಮುಂದೆ ಜಮಾಯಿಸಿದ್ದಾರೆ. ಈ ನಡುವೆ ಆರೋಪಿಗಳು ಅಂಗಡಿಗೆ ಬೀಗ ಹಾಕಿ ಪರಾರಿಯಾಗಿದ್ದರು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. (ಐಪಿಎಸ್), ಭಟ್ಕಳ ಉಪವಿಭಾಗದ ಡಿವೈಎಸ್ಪಿ ಮಹೇಶ್ ಎಂ.ಕೆ. ಹಾಗೂ ನಗರ ಠಾಣೆಯ ಇನ್ಸ್‌ಪೆಕ್ಟರ್ ದಿವಾಕರ ಪಿ.ಎಮ್. ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐಗಳಾದ ನವೀನ ಎಸ್. ನಾಯ್ಕ ಮತ್ತು ತಿಮ್ಮಪ್ಪ ಎಸ್. ಅವರ ನೇತೃತ್ವದಲ್ಲಿ ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ವಿನಾಯಕ ಪಾಟೀಲ್, ದೀಪಕ ನಾಯ್ಕ, ದಿನೇಶ್ ನಾಯಕ, ದೇವು ನಾಯ್ಕ, ಮಹಾಂತೇಶ ಹಿರೇಮಠ, ಕಾಶಿನಾಥ ಕೊಟಗೊಣಸಿ, ಸುರೇಶ ಮರಾಠಿ, ರೇವಣಸಿದ್ದಪ್ಪ ಮಾಗಿ, ಕಿರಣ ಪಾಟೀಲ್, ಹಾಗೂ ಸಚಿನ್ ಪವಾರ ಭಾಗವಹಿಸಿದ್ದರು. ಬಂಧಿತರ ವಿರುದ್ಧ ತನಿಖೆ ಮುಂದುವರಿದಿದ್ದು, ಆರೋಪಿಗಳು ಸಂಗ್ರಹಿಸಿಟ್ಟಿದ್ದ 6 ರಿಂದ 7 ಲಕ್ಷ ರೂ. ಮೊತ್ತದ ವಸ್ತುಗಳನ್ನು ವಶಕ್ಕೆ ಪಡೆದು ಉಳಿದ ವಸ್ತುಗಳು ದೊರೆತ‌ ಬಳಿಕ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಹರಾಜು ಹಾಕಿ ವಂಚನೆಗೆ ಒಳಗಾದ ನಾಗರಿಕರಿಗೆ ಹಣ ಮರಳಿಸಲಾಗುವುದು ಎಂದು ಮಾಹಿತಿಯಿಂದ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...