ಭಟ್ಕಳ | ದೋಣಿ ದುರಂತ: ನಾಲ್ವರು ಮೀನುಗಾರರು ನಾಪತ್ತೆ, ಇಬ್ಬರ ರಕ್ಷಣೆ; ಮುಂದುವರಿದ ಪತ್ತೆ ಕಾರ್ಯ

Date:

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ‘ಮಹಾಸತಿ’ ಗಿಲ್‌ನೆಟ್ ದೋಣಿಯೊಂದು ಸಮುದ್ರದಲ್ಲಿ ಭಾರೀ ಅಲೆಗಳಿಗೆ ಸಿಲುಕಿ ಮುಳುಗಿದ ಪರಿಣಾಮ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ.

ಘಟನೆ ಬುಧವಾರ ಸಂಜೆಯ ವೇಳೆಗೆ ನಡೆದಿದ್ದು, ನಾಪತ್ತೆಯಾಗಿರುವವರ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಲಾಗಿದೆ.

ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರ ಪೈಕಿ ದೋಣಿ ಮಾಲೀಕ ಮನೋಹರ ಈರಯ್ಯ ಮೊಗೇರ (40) ಮತ್ತು ರಾಮ ಮಾಸ್ತಿ ಖಾರ್ವಿ (43) ಅವರನ್ನು ರಕ್ಷಿಸಿ, ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001578815

ಆದರೆ, ರಾಮಕೃಷ್ಣ ಮಂಜು ಮೊಗೇರ (40), ಸತೀಶ್ ತಿಮ್ಮಪ್ಪ ಮೊಗೇರ (26), ಗಣೇಶ್ ಮಂಜುನಾಥ ಮೊಗೇರ (27) ಮತ್ತು ನಿಶ್ಚಿತ ಮೊಗೇರ (30) ಎಂಬ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದಾರೆ.

1001579020

ಘಟನೆ ನಡೆದ ಕೂಡಲೇ ಕರಾವಳಿ ರಕ್ಷಣಾ ಪಡೆಯ ಪಿಎಸ್‌ಐ ವೀಣಾ ಚಿತ್ರಪುರ ನೇತೃತ್ವದ ತಂಡ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತು. ನಾಪತ್ತೆಯಾದವರ ಪತ್ತೆಗಾಗಿ ಕರಾವಳಿ ಕಾವಲುಪಡೆ ಸಿಬ್ಬಂದಿಗಳು, ಸ್ಥಳೀಯ ಮೀನುಗಾರರು ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸಮುದ್ರದಲ್ಲಿ ತೀವ್ರ ಶೋಧಕಾರ್ಯವನ್ನು ಮುಂದುವರಿಸಿದ್ದಾರೆ. ಈ ದುರ್ಘಟನೆಯಿಂದಾಗಿ ಸ್ಥಳೀಯ ಮೀನುಗಾರ ಸಮುದಾಯದಲ್ಲಿ ತೀವ್ರ ಆತಂಕ ಮನೆಮಾಡಿದೆ.

ಸ್ಥಳಕ್ಕೆ ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಭೇಟಿ

ಘಟನಾ ಸ್ಥಳಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿರುವ ಮೀನುಗಾರಿಕಾ ಸಚಿವ ಮಂಕಾಳ್ ಎಸ್ ವೈದ್ಯ, ನಾಲ್ಕು ಜನ ಮೀನುಗಾರರು ನಾಪತ್ತೆಯಾಗಿದ್ದು, ಇಬ್ಬರು ಪ್ರಾಣಪಾಯದಿಂದ ಪಾರಾಗಿರುತ್ತಾರೆ. ನಾಪತ್ತೆಯಾದ ಮೀನುಗಾರರ ಹುಡುಕಾಟ ನಡೆಯುತ್ತಿದೆ‌. ಪ್ರಾಣಪಾಯದಿಂದ ಪಾರಾದ ಮೀನುಗಾರರ ಸೂಕ್ತ ಚಿಕಿತ್ಸೆ ನೀಡಲಾಗಿದೆ. ನಾಪತ್ತೆಯಾದ ನಾಲ್ಕು ಜನ ಮೀನುಗಾರರು ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...