ಭಟ್ಕಳ | ಮುಂಬೈ–ಮಂಗಳೂರು ಬಸ್‌ನಲ್ಲಿ ನಗದು, ಚಿನ್ನ ಪತ್ತೆ; ಇಬ್ಬರ ಬಂಧನ, ಹವಾಲಾ ಶಂಕೆ

Date:

ಭಟ್ಕಳ: ಮುಂಬೈಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನ ಸಾಗಾಟವಾಗುತ್ತಿರುವುದು ಪತ್ತೆಯಾಗಿದ್ದು, ಭಟ್ಕಳ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಂಗಳವಾರ ಸಂಜೆ ಭಟ್ಕಳ ನಗರ ಪೊಲೀಸ್ ಠಾಣೆಯ ವಲಯ ನಿರೀಕ್ಷಕ ದಿವಾಕರ್ ಅವರ ನೇತೃತ್ವದ ತಂಡ ಶಮ್ಸುದ್ದೀನ್ ವೃತ್ತದ ಬಳಿ ತಪಾಸಣೆ ನಡೆಸಿ, ಮುಂಬೈ ಮೂಲದ ಖಾಸಗಿ ಬಸ್‌ವೊಂದನ್ನು ತಡೆದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಸ್‌ನಲ್ಲಿ ಸಾಗಿಸುತ್ತಿದ್ದ ನೀಲಿ ಬಣ್ಣದ ಸೂಟ್ಕೇಸ ಕುರಿತು ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಅದನ್ನು ತೆರೆದಿದ್ದು. ಪರಿಶೀಲನೆಯ ವೇಳೆ ಚೀಲದೊಳಗೆ ₹49,98,400 ನಗದು, 32 ಚಿನ್ನದ ಬಳೆಗಳು (ಒಟ್ಟು 401.04 ಗ್ರಾಂ), ಒಂದು ಮೊಬೈಲ್ ಫೋನ್ ಮತ್ತು ಪೆನ್‌ಡ್ರೈವ್ ಪತ್ತೆಯಾಗಿದ್ದವು. ಹಣ ಮತ್ತು ಚಿನ್ನಕ್ಕೆ ಯಾವುದೇ ದಾಖಲೆಗಳಿರಲಿಲ್ಲ. ತನಿಖೆಯಲ್ಲಿ ಈ ಸೂಟ್ಕೇಸ ಮುಂಬೈಯಿಂದ ಕಳುಹಿಸಲ್ಪಟ್ಟಿದ್ದು, ಭಟ್ಕಳದಲ್ಲಿ “ಇರ್ಫಾನ್” ಎಂಬಾತ ಅದನ್ನು ಸ್ವೀಕರಿಸಬೇಕೆಂದು ಬಸ್ ಸಿಬ್ಬಂದಿಗೆ ಸೂಚನೆ ನೀಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಉಸ್ಮಾನನಗರದ ಮೊಹಮ್ಮದ್ ಇರ್ಫಾನ್ ಮತ್ತು ಪೋರ್ಟ್ ರೋಡ್‌ನ ಬಾಬಾನಂದ ದಾಮೋದರ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಚೀಲವನ್ನು ಸ್ವೀಕರಿಸಲು ಬಂದವರಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಇಂದು ಹಣ ಮತ್ತು ಚಿನ್ನ ಹವಾಲಾ ವ್ಯವಹಾರ ಅಥವಾ ಅನಧಿಕೃತ ಆನ್‌ಲೈನ್ ವಹಿವಾಟಿಗೆ ಸಂಬಂಧಿತವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ವಶಪಡಿಸಿಕೊಂಡ ಮೊಬೈಲ್ ಫೋನ್ ಮತ್ತು ಪೆನ್‌ಡ್ರೈವ್‌ ಅನ್ನು ತನಿಖೆಗೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿರಸಿ | ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ – ಏಜೆಂಟ್ ಹಾಗೂ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚೀಲ ಕಳುಹಿಸಿದ ವ್ಯಕ್ತಿಯ ಪತ್ತೆ ಹಾಗೂ ಅದರ ಹಿಂದಿರುವ ದೊಡ್ಡ ಜಾಲವನ್ನು ಬಯಲಿಗೆಳೆಯುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಂಡ ವಸ್ತುಗಳನ್ನು ಪೊಲೀಸರು ಸೀಲ್ ಮಾಡಿ, ಮುಂಬೈ ಪೊಲೀಸರ ಸಹಯೋಗದೊಂದಿಗೆ ಪ್ರಕರಣ ಭೇದಿಸಲು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...