ಭಟ್ಕಳ | ಅಕ್ರಮವಾಗಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳ ಜಪ್ತಿ

Date:

ಭಟ್ಕಳ: ನಗರದ ಹೃದಯಭಾಗದಲ್ಲಿರುವ ಮಾರುಕಟ್ಟೆಯ ಅಂಗಡಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ನಿಷೇಧಿತ ಇ-ಸಿಗರೇಟ್ ಹಾಗೂ ನಿಕೋಟಿನ್ ಲಿಕ್ವಿಡ್ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಭಟ್ಕಳದ ಕಾರಗದ್ದೆ ನಿವಾಸಿ ಸಿದ್ದಿಕ್ ಅಬ್ದುಲ್ ರೆಹಮಾನ್ ಅಲಿಯಾಸ್ ಮಸ್ತಾನ್ (58) ಎಂದು ಗುರುತಿಸಲಾಗಿದೆ. ಈತನು ಭಟ್ಕಳ ಶಹರದ ಹೂವಿನ ಚೌಕ್‌ನಲ್ಲಿರುವ ದುಬೈ ಮಾರ್ಕೆಟ್‌ನ ತನ್ನ ಅಂಗಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಕಾನೂನುಬಾಹಿರವಾಗಿ ಇ-ಸಿಗರೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

1000421445

ದಿನಾಂಕ 01/01/2026ರಂದು ರಾತ್ರಿ ಸುಮಾರು 10:30 ಗಂಟೆಯ ಸಮಯದಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಅಂದಾಜು 76,000 ರೂಪಾಯಿ ಮೌಲ್ಯದ 38 ಇಲೆಕ್ಟ್ರಾನಿಕ್ ಸಿಗರೇಟ್‌ಗಳು ಹಾಗೂ ಸುಮಾರು 62,500 ರೂಪಾಯಿ ಮೌಲ್ಯದ 125 ನಿಕೋಟಿನ್ ಲಿಕ್ವಿಡ್ ರಿಫಿಲ್‌ಗಳನ್ನು (Vapes) ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ವಶಪಡಿಸಿಕೊಂಡ ಒಟ್ಟು ವಸ್ತುಗಳ ಮೌಲ್ಯ ಸುಮಾರು 1,38,500 ರೂಪಾಯಿಗಳೆಂದು ಅಂದಾಜಿಸಲಾಗಿದೆ. ಭಾರತದಲ್ಲಿ ಇ-ಸಿಗರೇಟ್‌ಗಳ ಉತ್ಪಾದನೆ, ಮಾರಾಟ ಮತ್ತು ಸಂಗ್ರಹಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಯಾವುದೇ ಪಾಸ್ ಅಥವಾ ಪರವಾನಗಿ ಇಲ್ಲದೆ ನಿಷೇಧಿತ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯ ವಿರುದ್ಧ ‘ಇಲೆಕ್ಟ್ರಾನಿಕ್ ಸಿಗರೇಟ್ ನಿಷೇಧ ಕಾಯ್ದೆ-2019’ (Prohibition of Electronic Cigarettes Act-2019) ರ ಕಲಂ 7 ಮತ್ತು 8ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...