ಹಾವೇರಿ | ಭಾರತೀಯ ಇತಿಹಾಸದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಅವಿಸ್ಮರಣೀಯ: ಉಡಚಪ್ಪ ಮಳಗಿ

Date:

ಭಾರತೀಯ ಇತಿಹಾಸದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಅವಿಸ್ಮರಣೀಯವಾಗಿದೆ. ಅಸ್ಪೃಶ್ಯತೆ ವಿರುದ್ದ ನಡೆದ ಸಂಘರ್ಷ ಸ್ವಾಭಿಮಾನದ ಸಂಕೇತವಾಗಿದೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ರಾಜ್ಯಾಧ್ಯಕ್ಷ ಉಡಚಪ್ಪ ಮಾಳಗಿ ಹೇಳಿದರು.

ಹಾವೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯಿಂದ ಆಯೋಜಿಸಿದ ಭೀಮಾ ಕೋರೆಗಾಂವ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಅಸ್ಪೃಶ್ಯತೆಯ ನೋವುನ್ನುಂಡು ಅನ್ಯಾಯದ ವಿರುದ್ಧ ಹೋರಾಡಿ ಜೀವತೆತ್ತ 21 ಮಂದಿ ಮಹಾರ್ ಸೈನಿಕರ ವೀರ ಬಲಿದಾನದ ಚರಿತ್ರೆಯನ್ನು ಶೋಷಿತ ಸಮುದಾಯ ಮರೆಯಲು ಸಾಧ್ಯವಿಲ್ಲ. ಭೀಮಾ ಕೋರೆಗಾಂವ ಐತಿಹಾಸಿಕ ಘಟನೆಯಿಂದ ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಪ್ರತಿಭಟಿಸಲು ನಾವೆಲ್ಲರೂ ಸಿದ್ಧರಾಗೋಣ” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಿಡ್ಕರ್ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಮಾತನಾಡಿ,”ಭೀಮಾ ಕೋರೆಗಾಂವ ವಿಜಯೋತ್ಸವ ನಮಗೆ ಪ್ರೇರಣೆಯಾಗಬೇಕು. ಸ್ವಾಭಿಮಾನದ ಬದುಕಿಗೆ ನಾವು ಬದ್ಧರಾಗೋಣ. ಭೀಮಾ ಸೈನಿಕರ ಹೋರಾಟದ ಸ್ಫೂರ್ತಿ ನಮ್ಮೆಲ್ಲರಿಗೂ ಆದರ್ಶವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಹಾರ | ದಲಿತ ಮಹಿಳೆಗೆ ಮನಬಂದಂತೆ ಲಾಠಿಯಿಂದ ಬಡಿದ ಪೊಲೀಸ್; ವಿಡಿಯೋ ವೈರಲ್

ಕಾರ್ಯಕ್ರಮದಲ್ಲಿ ಮುಖಂಡರಾದ ಬಸವರಾಜ ಹೇಡಿಗೊಂಡ,  ಲಿಂಗರಾಜ ದಂಡೆಮ್ಮನವರ, ಬಸವರಾಜ ಮಾಸೂರ, ಮರಿಯಪ್ಪ ನಡುವಿನಮನಿ, ಶೆಟ್ಟಿ ವಿಭೂತಿ, ರೆಹಮತವುಲ್ಲಾ ಮುಲ್ಲಾ, ಮಂಜಪ್ಪ ಮರೋಳ, ರಮೇಶ ಜಾಲಿಹಾಳ, ಬಸವರಾಜ ಕಾಳೆ, ಸುನೀಲ ಭೇಟಗೇರಿ, ಹನಮಂತಪ್ಪ ಹುಚ್ಚಣ್ಣನವರ, ಚಿಕ್ಕಪ್ಪ ಆಡೂರ, ಮಂಜಪ್ಪ ಹರಪನಹಳ್ಳಿ, ಹನಮಂತಪ್ಪ ಹರಿಜನ, ಶಂಭಲಿಂಗಪ್ಪ ದೀವಟಗೇರ, ಪ್ರೇಮಾ ಹರಿಜನ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...