ಬೀದರ್‌ | ವಾಡೆನ್‌ ಬಾಗ್ ತಾಂಡಾಕ್ಕೆ ದೌಡಾಯಿಸಿದ ಡಾ. ಶಿಂಧೆ, ಅಧಿಕಾರಿಗಳು

Date:

  • ʼಈದಿನ.ಕಾಮ್‌ʼ ವರದಿಗೆ ಸ್ಪಂದಿಸಿದ ಪರಾಜಿತ ಅಭ್ಯರ್ಥಿ ಭೀಮಸೇನರಾವ್ ಶಿಂಧೆ‌ ಹಾಗೂ ಅಧಿಕಾರಿಗಳು
  • ಸರಕಾರಕ್ಕೆ ಪತ್ರ ಬರೆದು ಕೆಕೆಆರ್‌ಡಿಬಿಯಿಂದ ತಾಂಡಕ್ಕೆ ರಸ್ತೆ ನಿರ್ಮಾಣ ಮಾಡಿಸುವ ಭರವಸೆ ನೀಡಿದ ಶಿಂಧೆ

ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾ.ಪಂ. ವ್ಯಾಪ್ತಿಯ ವಾಡೆನ್ ಬಾಗ್ ತಾಂಡಾ (ವಡಗಾಂವ ದೇ ತಾಂಡ)ಕ್ಕೆ ಸೋಮವಾರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಡಾ. ಭೀಮಸೇನರಾವ ಶಿಂಧೆ ಭೇಟಿ ನೀಡಿ ತಾಂಡ ಜನರ ಸಮಸ್ಯೆ ಆಲಿಸಿದರು. ತಾಂಡದಲ್ಲಿನ ಶಾಲೆ, ಅಂಗನವಾಡಿ, ರಸ್ತೆ ಹಾಗೂ ವಿದ್ಯುತ್ ಸೌಕರ್ಯಗಳ ಕುರಿತು ತಾಂಡದ ನಿವಾಸಿಗಳಿಂದ ಮಾಹಿತಿ ಪಡೆದರು.

ಈ ಕುರಿತು ʼಈದಿನ.ಕಾಮ್‌ʼ ನಲ್ಲಿ ಸೆ.9ರಂದು “ಸ್ವಾತಂತ್ರ್ಯ ಸಿಕ್ಕಿ ವರ್ಷಗಳೇ ಉರುಳಿದರೂ ರಸ್ತೆ ಕಾಣದ ತಾಂಡಾ” ಎಂಬ ಶೀರ್ಷಿಕೆಯಡಿ ವಿಶೇಷ ಬರಹ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿದ ಡಾ. ಭೀಮಸೇನರಾವ ಶಿಂಧೆ ಅ.2 ರಂದು ವಾಡೆನ್‌ ಬಾಗ್‌ ತಾಂಡಾಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ತಾಂಡಾ ನಿವಾಸಿ ಬಾಬುರಾವ ಮಾತನಾಡಿ, “ನಮ್ಮ ತಾಂಡಾಕ್ಕೆ ರಸ್ತೆಯಿಲ್ಲದ ಕಾರಣ ಮಕ್ಕಳು ದಿನನಿತ್ಯ ಶಾಲೆಗೆ ತೆರಳಲು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು.

ಇದಕ್ಕೆ ಸ್ಪಂದಿಸಿದ ಡಾ. ಶಿಂಧೆ “ತಾಂಡಕ್ಕೆ ಹೋಗಲು ರಸ್ತೆಯಿಲ್ಲ ಎಂಬ ಬಗ್ಗೆ ಮಾಹಿತಿ ಬಂದಿದ್ದ ಕಾರಣಕ್ಕೆ ತಾಂಡಕ್ಕೆ ಭೇಟಿ ನೀಡಿದ್ದೇನೆ, ತಾಂಡಾದ ರಸ್ತೆ ಸೇರಿದಂತೆ ಎಲ್ಲ ಸಮಸ್ಯೆಗಳು ವಿಚಾರಿಸಲಾಗುತ್ತಿದೆ. ಈ ಬಗ್ಗೆ ಸರಕಾರಕ್ಕೆ ಪತ್ರ ಬರೆದು ರಸ್ತೆ ನಿರ್ಮಾಣಕ್ಕೆ ಪ್ರಯತ್ನಿಸುವೆ ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಯೊಂದಿಗೆ ಸಾರ್ವಜನಿಕ ಮೂಲ ಸೌಕರ್ಯಗಳ ನಿರ್ಮಾಣಕ್ಕೆ ಸಾಕಷ್ಟು ಅನುದಾನವನ್ನು ನೀಡುತ್ತಿದೆ. ಈಗಾಗಲೇ ಸರಕಾರ ಕೆಕೆಆರ್‌ಡಿ ಗೆ ನಿರೀಕ್ಷೆಗೂ ಮೀರಿ ಹಣ ನೀಡಲಿದೆ. ಈ ಹಣ ತಾಲೂಕಿನ ಅಗತ್ಯವಿರುವ ಕಡೆ ವಿವಿಧ ಕಾಮಗಾರಿ ಮಾಡಬೇಕಿದೆ. ತಾಲೂಕಿನಲ್ಲಿ ಕುಡಿಯುವ ನೀರು, ರಸ್ತೆಗಾಗಿ ಅನುದಾನ ಹರಿದು ಬರುತ್ತಿದೆ. ವಾಡೇನ್ ಬಾಗ್ ತಾಂಡದ ಸಂಪರ್ಕಕ್ಕೆ ರಸ್ತೆ ಸಮಸ್ಯೆ ಕೂಡ ಗಂಭೀರವಾಗಿ ಪರಿಗಣಿಸಲಾಗಿದೆ” ಎಂದರು.

ತಾಂಡಾ ರಸ್ತೆ ನಿರ್ಮಾಣಕ್ಕೆ ನಾವು ಭೂಮಿ ನೀಡಿದ್ದೇವೆ. ರಸ್ತೆ ನಿರ್ಮಾಣದ ಜೊತೆಗೆ ಭೂಮಿಗೆ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ರೈತರಾದ ಗಣಪತಿ, ರಾಮ ಸೋರಳ್ಳಿ, ಶಿವರಾಜ ಶಂಕರ, ರಮೇಶ ಪಾಟೀಲ್ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಸರ್ಕಾರದ ನಡೆಗೆ ಖಂಡನೆ

ಈ ಸಂದರ್ಭದಲ್ಲಿ ಪಂಚಾಯತ್‌ ರಾಜ ಇಲಾಖೆಯ, ಎಇಇ ವೆಂಕಟ ಶಿಂಧೆ, ಜೆಇ ಶಿವಕುಮಾರ ಪುರಾಣಿಕ ಸೇರಿದಂತೆ ತಾಂಡದ ನಿವಾಸಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...