ಬೆಂಗಳೂರು | ಭೂಮಿ ವಂಚನೆ, ದೌರ್ಜನ್ಯ ನಡೆಸುತ್ತಿರುವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಿ: ಕುಮಾರ್ ಸಮತಳ

Date:

ಬಳ್ಳಾರಿ ನಗರದ ಕೌಲ್‌ಬಜಾರಿನ ದಾನಪ್ಪಬೀದಿ, ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಸೇರಿದ ಭೂಮಿಯನ್ನು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎನ್.ಪ್ರತಾಪ ರೆಡ್ಡಿ ದೌರ್ಜನ್ಯ ನಡೆಸುತ್ತಿದ್ದು, ಸರಕಾರ ಮತ್ತು ಜಿಲ್ಲಾಡಳಿತ ಕೂಡಲೇ ಮಧ್ಯ ಪ್ರವೇಶಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯ ಕುಮಾರ್ ಸಮತಳ ಆಗ್ರಹಿಸಿದ್ದಾರೆ.

ಶುಕ್ರವಾರ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ 1970ರ ದಶಕದಲ್ಲಿ 715ಎ ಸರ್ವೆ ನಂಬರ್‌ನ 1080 ಎಕರೆ ಇನಾಂ ಭೂಮಿಯಲ್ಲಿ 134 ಎಕರೆ ಭೂಮಿಯನ್ನು 17 ಕುಟುಂಬಗಳಿಗೆ ಆಗಿನ ಭೂ ನ್ಯಾಯ ಮಂಡಳಿ ಹಂಚಿಕೆ ಮಾಡಿತ್ತು. ಈ ಭೂಮಿಯು ಇದಕ್ಕೂ ಮೊದಲು ದಿವಂಗತ ರಾಜರಾಜೇಶ್ವರಿ ಶಾಸ್ತ್ರಿ ಮತ್ತು ಇವರ ಮಗ ಬ್ರಹ್ಮ ಶಾಸ್ತ್ರಿ ಇವರಿಗೆ ಸೇರಿದ ಇನಾಂ ಭೂಮಿಯಾಗಿತ್ತು ಎಂದರು.
ಇನಾಂ ಭೂಮಿ ರದ್ದತಿ ಕಾನೂನು ಜಾರಿಯಾದ ನಂತರ ಇದೇ ಭೂಮಿಯಲ್ಲಿದ್ದ ಟೆನೆಂಟ್ ಆಗಿ ದುಡಿಯುತ್ತಿದ್ದ ಏಳು ಮಾದಿಗ ಸಮುದಾಯದ ಕುಟುಂಬಕ್ಕೆ, ನಾಲ್ಕು ಕುರುಬ ಸಮುದಾಯಕ್ಕೆ, ಮಡಿವಾಳ ಸಮುದಾಯದ ಐದು ಕುಟುಂಬಕ್ಕೆ ಹಾಗೂ ಈಡಿಗರ ಒಂದು ಕುಟುಂಬಕ್ಕೆ ಭೂ ನ್ಯಾಯ ಮಂಡಳಿಯು ಫಾರಂ ನಂ.10 ನೀಡಿದೆಯಲ್ಲದೆ ಫಲಾನುಭವಿಗಳ ಹೆಸರಿಗೆ ಹಕ್ಕು ಬದಲಾಯಿತು. ಅಂದಿನಿಂದ ಈ ಮೇಲಿನ ಎಲ್ಲ ಕುಟುಂಬಗಳು ಭೂಮಿಯನ್ನು ಆದರಿಸಿ ಬದುಕುತ್ತಿದ್ದರು ಎಂದು ಕುಮಾರ್ ಸಮತಳ ಮಾಹಿತಿ ನೀಡಿದರು.

2006ರಿಂದ ಪ್ರತಾಪರೆಡ್ಡಿಯ ಕಣ್ಣು ಈ ಭೂಮಿಯ ಮೇಲೆ ಬಿದ್ದ ನಂತರ ಗೂಂಡಾಗಿರಿ, ಬೆದರಿಕೆಗಳಿಗೆ ಬಡವರ ಬದುಕು ದಿವಾಳಿಯಾಗುತ್ತಾ ಸಾಗಿದೆ. ಭೂ ಒಡೆಯರಾಗಿರುವ ಮಾದಿಗ ಸಮುದಾಯದ ಕುಟುಂಬಗಳು ಬಳ್ಳಾರಿ ನಗರದ ಮಹಾನಗರ ಪಾಲಿಕೆಯಲ್ಲಿ ಕಸ ಗುಡಿಸುವ ಪೌರಕಾರ್ಮಿಕರಾಗಿ ಜೀವನ ಸಾಗಿಸುವಂತೆ ಮಾಡಲಾಗಿದೆ. ಮಡಿವಾಳರು ಭಯದಿಂದ ಊರು ಬಿಟ್ಟಿದ್ದರೆ, ಈ ಭೂಮಿಯ ಸಹವಾಸವೇ ಬೇಡವೆಂದು ಜೀವ ಉಳಿಸಿಕೊಂಡು ಬದುಕುವ ಪರಿಸ್ಥಿತಿ ಕೆಲವರದಾಗಿದೆ. ಇನ್ನು ಕೆಲವರು ಜೀವ ಹೋದರು ಪರವಾಗಿಲ್ಲ ನ್ಯಾಯ ಪಡೆದೇ ತೀರುತ್ತೇವೆಂದು ಸ್ವಾಭಿಮಾನದಿಂದ ಹೋರಾಟ ನಡೆಸುತ್ತಿದ್ದಾರೆ ಎಂದು ಅವರು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರಕಾರವೇ ಕೊಟ್ಟ ಎಲ್ಲ ದಾಖಲೆ ಪತ್ರಗಳು ಇದ್ದಾಗ್ಯು ಸ್ಥಳೀಯ ಜಿಲ್ಲಾಡಳಿತ ಬಡವರ ಪರವಾಗಿ ನಿಂತು ಗೊಂದಲವನ್ನು ಬಗೆ ಹರಿಸಬಹುದಾದ ವಿಷಯವಾಗಿದ್ದರೂ, ಕೆಲ ಅಧಿಕಾರಿಗಳು ಮಾಡಿದ ತಪ್ಪು ಮತ್ತು ಬೇಜವಾಬ್ದಾರಿತನಗಳು ಕಗ್ಗಂಟಾಗಲು ಕಾರಣವಾಗಿದೆ. ಇದಕ್ಕೆ ಎನ್.ಪ್ರತಾಪರೆಡ್ಡಿಯ ಅಧಿಕಾರ ಹಣ ಕೆಲಸ ಮಾಡಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣಗಳೂ ದಾಖಲಾಗಿವೆ. ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿ, ಈ ವಿಚಾರವಾಗಿ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಬೇಕು ಮತ್ತು ಜನರಿಗಾಗಿರುವ ಅನ್ಯಾಯವನ್ನು ಆದಷ್ಟು ಬೇಗ ಸರಿಪಡಿಸಬೇಕು ಎಂದು ಕುಮಾರ್ ಸಮತಳ ಒತ್ತಾಯಿಸಿದರು.

ಹೋರಾಟಗಾರ ಮರಿಯಪ್ಪ ಕೆ. ಮಾತನಾಡಿ, ಬಡವರ ಪರ ಎಂದು ಹೇಳುವ ಸರ್ಕಾರ, ಸ್ಥಳೀಯ ರಾಜಕಾರಣಿಗಳು ಭೂಮಾಫಿಯಾದಲ್ಲಿ ತೊಡಗಿರುವ ಪ್ರತಾಪರೆಡ್ಡಿ ಪರವಾಗಿ ಕೆಲಸ ಮಾಡುತ್ತಿರುವುದು ಎಷ್ಟು ಸರಿ? ಬಡವರು ನೆಮ್ಮದಿಯಿಂದ ಬದುಕಬಾರದೆ? ಇಷ್ಟೆಲ್ಲಾ ದೌರ್ಜನ್ಯ ಮಾಡುತ್ತಿದ್ದರೂ ಜಿಲ್ಲಾ ಪೊಲೀಸ್, ಕಂದಾಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ಯಾರ ಪರವಾಗಿ ಕೆಲಸ ಮಾಡುತ್ತಿದ್ದಾರೆ? ಕಂದಾಯ ಇಲಾಖೆಯು ಅತ್ಯಂತ ಭ್ರಷ್ಟಾಚಾರದಲ್ಲಿ ಮುಳುಗಿರುವುದರಿಂದ ಬಡವರಿಗೆ ತೊಂದರೆ ಆಗುತ್ತಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಬೇಕೆಂದು, ಈ ವಿಚಾರಕ್ಕೆ ಸರಕಾರ ಮಧ್ಯಪ್ರವೇಶ ಮಾಡಿ, ಬಡ ಜನರಿಗೆ ಆಗುತ್ತಿರುವ ದೌರ್ಜನ್ಯವನ್ನು ನಿಲ್ಲಿಸಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿಯ ಪದಾಧಿಕಾರಿ ಕಾವೇರಿ, ಭೂಮಿಯಿಂದ ವಂಚನೆಗೊಳಗಾಗುತ್ತಿರುವ ಕೆ.ಮೋಹನ್, ಕೆ.ಎಸ್.ರಘು, ಈ.ಈರೇಶ್, ಕಾಂತರಾಜ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...