ಚಿತ್ರದುರ್ಗ | ಅಧಿವೇಶನದಲ್ಲಿ ಡಿಸಿಎಂ ಬಳಸಿರುವ ಪದದಿಂದ ಭೋವಿ ಸಮುದಾಯಕ್ಕೆ ನೋವಾಗಿದೆ: ಸಿದ್ದರಾಮೇಶ್ವರ ಸ್ವಾಮೀಜಿ

Date:

ಡಿಸಿಎಂ ಡಿ.ಕೆ.ಶಿವಕುಮಾರ್ ಬೆಳಗಾವಿ ಸುವರ್ಣಸೌಧದ ಅಧಿವೇಶನದ ವೇಳೆ ‘ವಡ್ಡ’ ಪದ ಬಳಕೆ‌ ಮಾಡಿರುವುದನ್ನು ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಖಂಡಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಸಂತಾಪ ಸೂಚಿಸುವ ವೇಳೆ ಸಾಂವಿಧಾನಿಕ ಸ್ಥಾನದಲ್ಲಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೋವಿ ಸಮುದಾಯಕ್ಕೆ ನೋವುಂಟು ಮಾಡುವಂತಹ ಅಕ್ಷೇಪಾರ್ಹ ಪದ ಬಳಸಿದ್ದಾರೆ. ಇದು ಸಮುದಾಯಕ್ಕೆ ಅವಮಾನ ಮಾಡುವಂತಹ ಪದ, ಇದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಾಲ್ಯದಲ್ಲಿ ನಾನು ಬಟ್ಟೆ ಹಾಕದೇ ‘ವಡ್ಡ’ನಾಗಿದ್ದೆ ಎನ್ನುವ ಪದ ಬಳಸಿದ್ದಾರೆ. ಈ ಪದ ಬಳಕೆಯ ಬಗ್ಗೆ ನಮಗೆ ಆಕ್ಷೇಪವಿದೆ. ಹಾಗೂ ಡಿಕೆಶಿ ಬಗ್ಗೆ ನಮಗೆ ಗೌರವವಿದೆ. ಮಠಕ್ಕೂ ನಮ್ಮ ಸಮುದಾಯಕ್ಕೂ ಬಹಳವಾದ ಸಂಬಂಧವನ್ನು ಹೊಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ, ಸರ್ಕಾರದ ಮುಖ್ಯಸ್ಥರಾಗಿ ಭೋವಿ ಸಮಾಜಕ್ಕೆ ಸ್ಥಾನ ಮಾನ ನೀಡಿ, ನಮ್ಮ ಸಮುದಾಯಕ್ಕೆ ಮಂತ್ರಿ ಸ್ಥಾನ ಕೊಡಿಸಿದ್ದಾರೆ.‌ ಆದರೆ ಸಮುದಾಯ ಎಂದು ಬಂದಾಗ ಮಾತ್ರ ನಾವು ಭಕ್ತರ ಮೇಲೆ ಪರವಾಗಿ ಇರಬೇಕಿದೆ” ಎಂದೂ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಡ್ಡ ಎಂಬ ಪದಕ್ಕೆ ಹಲವು ಅರ್ಥಗಳು ಬರುತ್ತದೆ. ಹಿಂದುಳಿದ ಸಮುದಾಯಕ್ಕೆ‌ ಇದು ಬೈಗುಳವಾಗಿ ಕೂಡ ಬಳಕೆಯಾಗುತ್ತದೆ. ಇದು ಮಾನಸಿಕ ಅಸ್ವಸ್ಥತೆ ತೋರಿಸುವ ಪದವಾಗಿ ಬಳಕೆಯಾಗುತ್ತೆ. ಈ ಕುರಿತು ಡಿಕೆಶಿ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಲು ಶಿಷ್ಯ ಬಳಗ ಚಿಂತನೆ ಮಾಡಿದೆ. ಇದು ಉದ್ದೇಶ ಪೂರ್ವಕವಾಗಿಲ್ಲದ ಕಾರಣ ನಾವೇ ಬೇಡ ಅಂದಿದ್ದೇವೆ. ಕೂಡಲೇ ಡಿಕೆಶಿ ತಪ್ಪು ಸರಿಪಡಿಸಲು ಈ ಪದ ಕಡತದಿಂದ ತೆಗೆಸಬೇಕು. ಇದು ನಮ್ಮ ಸಮುದಾಯದ ಜನರಿಗೆ ನೋವಾಗಿದೆ. ಶಿವಕುಮಾರ್ ಅವರಿಗೆ ಸಮಯವನ್ನು ನೀಡಿ ತದನಂತರ ಏನು ಆಗದಿದ್ದಾಗ ಮುಂದುವರೆಯಲಾಗುವುದೆಂದು ಭಕ್ತರಿಗೆ ತಿಳಿಸಲಾಗಿದೆ.‌ ಡಿಕೆಶಿ ನಮ್ಮ ಸಮುದಾಯದ ಕ್ಷಮೆ‌ ಕೇಳಬೇಕು” ಎಂದು ಸಿದ್ದರಾಮೇಶ್ವರ ಸ್ವಾಮಿಜಿಗಳು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಬೆಳಗಾವಿ ಅಧಿವೇಶನ | ನೇಕಾರ ಮಾಲೀಕರಷ್ಟೆ ಅಲ್ಲ, ಕೂಲಿ ಕಾರ್ಮಿಕರ ಸಮಸ್ಯೆಗಳ ಕುರಿತು ಸಹ ಚರ್ಚೆಗೆ ಆಗ್ರಹ

ಸುದ್ದಿಗೋಷ್ಠಿಯಲ್ಲಿ ಭೋವಿ ಸಮಾಜದ ಮಾಜಿ ಜಿಲ್ಲಾಧ್ಯಕ್ಷ ತಿಮ್ಮಣ್ಣ, ಕಾರ್ಯದರ್ಶಿ ಲಕ್ಷ್ಮಣ ಹಾಗೂ ಭೋವಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...