ಬೀದರ್‌ | ಜಿಲ್ಲೆಯ 185 ಗ್ರಾಮ ಪಂಚಾಯಿತಿಗಳಲ್ಲಿ ₹15.22 ಕೋಟಿ ತೆರಿಗೆ ಸಂಗ್ರಹ : ಸಿಇಒ ಡಾ. ಗಿರೀಶ್‌ ಬದೋಲೆ

Date:

2024-25ನೇ ಸಾಲಿನಲ್ಲಿ ಬೀದರ ಜಿಲ್ಲೆಯ 185 ಗ್ರಾಮ ಪಂಚಾಯಿತಿಗಳಲ್ಲಿ ₹15.22 ಕೋಟಿ ತೆರಿಗೆ ಬಾಕಿ ವಸೂಲಾತಿ ಸಂಗ್ರಹವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಎಂಟು ತಾಲ್ಲೂಕುಗಳಿದ್ದು, ಈ ತಾಲ್ಲೂಕುಗಳಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ತೆರಿಗೆ ವಸೂಲಾತಿ ಮಂದಗತಿಯಲ್ಲಿ ಸಾಗುತ್ತಿರುವುದನ್ನು ಕಂಡು ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವಿಶೇಷ ಅಭಿಯಾನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ. ಹಳ್ಳಿಗಳ ಅಭಿವೃದ್ಧಿಗೆ ಪೂರಕವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿಗದಿತ ಸಮಯದಲ್ಲಿ ಸರಿಯಾಗಿ ತೆರಿಗೆ ಸಂಗ್ರಹ ವಸೂಲಾತಿ ಬಹುಮುಖ್ಯʼ ಎಂದರು.

ʼಗ್ರಾಮದಲ್ಲಿ ಸೂಕ್ತ ಸೌಲಭ್ಯಗಳನ್ನು ಒದಗಿಸಬೇಕು ಎಂದಾಗ ಗ್ರಾಮ ಪಂಚಾಯತಿ ಅಧಿಕಾರಿಗಳ ಉತ್ತಮ ಸೇವೆಯ ಜೊತೆಗೆ ಸ್ಥಳೀಯ ಸಾರ್ವಜನಿಕರ ಸಹಕಾರ ತುಂಬಾ ಮುಖ್ಯವಾಗುತ್ತದೆ. 2024-25 ನೇ ಸಾಲಿನಲ್ಲಿ ತೆರಿಗೆ ಅಭಿಯಾನದ ಫಲವಾಗಿ ಒಟ್ಟು ₹15.22 ಕೋಟಿ ಸಂಗ್ರಹಿಸುವ ಮೂಲಕ (ಶೇ.70) ರಾಜ್ಯದಲ್ಲಿ ಉತ್ತಮ ಸ್ಥಾನ ಪಡೆದಿದ್ದೇವೆ. ಇದರಿಂದಾಗಿ ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲ ಹೆಚ್ಚಾಗಿದೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಟಗುಪ್ಪ ಮೊದಲ ಸ್ಥಾನ :

ತೆರಿಗೆ ವಸೂಲಾತಿ ಅಭಿಯಾನದಲ್ಲಿ ಚಿಟಗುಪ್ಪಾ ತಾಲ್ಲೂಕು ಜಿಲ್ಲೆಯಲ್ಲಿ ಮೊದಲ ಸ್ಥಾನ ಪಡೆದಿದೆ. ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ₹1.19 ಕೋಟಿ ತೆರಿಗೆ ವಸೂಲಿ (ಶೇ83.37) ಮಾಡುವ ಮೂಲಕ ಜಿಲ್ಲೆಯಲ್ಲಿ ಮೊದಲನೆ ಸ್ಥಾನದಲ್ಲಿದೆ. 2023-24ನೇ ಸಾಲಿಗಿಂತ ಪ್ರಸಕ್ತ ಸಾಲಿನಲ್ಲಿ ತೆರಿಗೆ ವಸೂಲಿಯಲ್ಲಿ ಶೇ38 ರಷ್ಟು ಹೆಚ್ಚಳವಾಗಿದೆʼ ಎಂದು ಮಾಹಿತಿ ನೀಡಿದರು.

ʼ2023-24ರಲ್ಲಿ ಒಟ್ಟು ₹8.44 ಕೋಟಿಗಳ (ಶೇ32.01) ತೆರಿಗೆ ವಸೂಲಾತಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ತೆರಿಗೆ ವಸೂಲಾತಿಯ ಕುರಿತು ಗ್ರಾಮಗಳ ಸಾರ್ವಜನಿಕರಿಗೆ ಅರಿವು ಮೂಡಿಸಲು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿತ್ತುʼ ಎಂದು ತಿಳಿಸಿದರು.

ʼ2023-2024ನೇ ಸಾಲಿನ ಡಿಸೆಂಬರ್ ತಿಂಗಳ ಅಂತ್ಯದ ವೇಳೆ ನಾನು ಅಧಿಕಾರ ಸ್ವೀಕರಿಸಿ 2024ರ ವರ್ಷದಲ್ಲಿ ಸತತ 5 ಬಾರಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕರ ವಸೂಲಾತಿ ಅಭಿಯಾನಗಳನ್ನು ಆರಂಭಿಸಿದ್ದೇನೆ. ಜಿಲ್ಲೆಯ ಎಲ್ಲಾ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಟವರ್‌, ಕೈಗಾರಿಕಾ ಕಾರ್ಖಾನೆ ಹಾಗೂ ವಾಣಿಜ್ಯ ಆಸ್ತಿಗಳಿಗೆ ಹೆಚ್ಚು ಒತ್ತು ನೀಡಲಾಯಿತು. ಕರ ವಸೂಲಾತಿ ಪ್ರಮಾಣ ಹೆಚ್ಚಿಸಲು ಪ್ರತಿ ತಾಲೂಕಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿತ್ತುʼ ಎಂದು ಮಾಹಿತಿ ನೀಡಿದರು.

ʼಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಕರವಸೂಲಿಗಾರರು ಮತ್ತು ಕಂಪ್ಯೂಟರ್‌ ಆಪರೇಟರ್ ಹಾಗೂ ಸ್ವಸಹಾಯ ಸಂಘಗಳ ಮಹಿಳೆಯರನ್ನು ನೇಮಿಸಿ, ಮನೆ-ಮನೆಗೆ ತೆರಳಿ ಕರ ವಸೂಲಾತಿ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ತೆರಿಗೆ ಸಂಗ್ರಹಿಸಲು ಸೂಚಿಸಲಾಯಿತು. ಇದರೊಂದಿಗೆ ಅನೇಕ ಬಾರಿ ಖುದ್ದಾಗಿ ನಾನು ಕರ ವಸೂಲಾತಿ ಅಭಿಯಾನದಲ್ಲಿ ಪಾಲ್ಗೊಂಡ ಪರಿಣಾಮವಾಗಿ ತೆರಿಗೆ ವಸೂಲಾತಿ ಅಭಿಯಾನ ಬಹುತೇಕ ಯಶಸ್ವಿ ಕಂಡಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ. 73.45 ವಿದ್ಯಾರ್ಥಿಗಳು ಉತ್ತೀರ್ಣ

ಜಿಲ್ಲೆಯ 185 ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಾತಿ ಪ್ರಗತಿ ಸಾಧಿಸಲು ತಾಲ್ಲೂಕು ಪಂಚಾಯಿತಿ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕರ ವಸೂಲಿಗಾರರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರಂತರ ಸಭೆಗಳು ನಡೆಸಿ ಉತ್ತಮ ಪ್ರಗತಿ ಸಾಧಿಸಲು ವಿಶೇಷ ಶ್ರಮವಹಿಸಿ ಅಭಿಯಾನಗಳನ್ನು ಯಶಸ್ವಿಗೊಳಿದ್ದಾರೆʼ ಎಂದು ಸಿಇಒ ಡಾ.ಗಿರೀಶ ಬದೋಲೆ ಅವರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...