ಬೀದರ್‌ ಪ್ರವಾಸೋದ್ಯಮ ಅಭಿವೃದ್ಧಿಗೆ ₹25 ಕೋಟಿ ಅನುದಾನ ಮಂಜೂರು : ಸಂಸದ ಸಾಗರ್‌ ಖಂಡ್ರೆ

Date:

ಬೀದರ್ ಜಿಲ್ಲೆಯ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸ್ಪಂದಿಸಿದ್ದು, ಬೀದರ್‌ ಪ್ರವಾಸೋದ್ಯಮ ಅಭಿವೃದ್ಧಿಗೆ ₹25 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ ಎಂದು ಸಂಸದ ಸಾಗರ್‌ ಖಂಡ್ರೆ ತಿಳಿಸಿದ್ದಾರೆ.

ʼಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಸ್ವದೇಶ ದರ್ಶನ ಯೋಜನೆಯಡಿ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದ್ದೆ. ಅವರು ಅದಕ್ಕೆ ಸ್ಪಂದಿಸಿ ಅನುದಾನ ಮಂಜೂರು ಮಾಡಿದ್ದಾರೆ. ಈ ಮಹತ್ವದ ನಿರ್ಧಾರಕ್ಕೆ ನಾನು ಕೇಂದ್ರ ಸಚಿವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದೇನೆʼ ಎಂದಿದ್ದಾರೆ.

ʼಪ್ರಸ್ತುತ ಪ್ರವಾಸೋದ್ಯಮ ಇಲಾಖೆಯ ಕ್ರಿಯಾಯೋಜನೆ ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ಅನುದಾನ ಬಿಡುಗಡೆಗೊಳ್ಳಲಿದೆ ಹಾಗೂ ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭವಾಗಲಿವೆ. ಈ ಅನುದಾನದ ನೆರವಿನಿಂದ ಬೀದರ್‌ ಜಿಲ್ಲೆಯ ಪ್ರವಾಸಿ ತಾಣಗಳ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪ್ರವಾಸಿಗರಿಗೆ ಉತ್ತಮ ಸೌಲಭ್ಯಗಳ ಕಲ್ಪನೆ ಸಾಧ್ಯವಾಗಲಿದೆʼ ಎಂದು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...